Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಚಿನ್ ಎ ಬಿಲಿಯನ್ ಡ್ರೀಮ್ಸ್' ಮೊದಲ ದಿನದ ಕಲೆಕ್ಷನ್ ಎಷ್ಟು?
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಬಯೋಪಿಕ್ 'ಸಚಿನ್: ಎ ಬಿಲಿಯನ್ ಡ್ರೀಮ್ಸ್' ಮೊದಲ ದಿನ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಬಿಸ್ ನೆಸ್ ಮಾಡಿದೆ. ನಿನ್ನೆ (ಮೇ 26) ದೇಶಾದ್ಯಂತ ಬಿಡುಗಡೆಯಾದ 'ಸಚಿನ್: ಎ ಬಿಲಿಯನ್ ಡ್ರೀಮ್ಸ್' ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು.[ವಿಮರ್ಶೆ: 'ಕ್ರಿಕೆಟ್ ದೇವರ' ಅದ್ಭುತ ಆಟಕ್ಕೆ ಪ್ರೇಕ್ಷಕ ಮೂಕವಿಸ್ಮಿತ]
ಹಿಂದಿ, ಮರಾಠಿ, ಇಂಗ್ಲಿಷ್, ತಮಿಳು ಮತ್ತು ತೆಲುಗು ಭಾಷೆಯಲ್ಲಿ ತೆರೆಕಂಡಿದ್ದ 'ಸಚಿನ್: ಎ ಬಿಲಿಯನ್ ಡ್ರೀಮ್ಸ್' ಮೊದಲ ದಿನ 8.40 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ದೇಶದ ಸುಮಾರು 2400 ಸ್ಕ್ರೀನ್ ಗಳಲ್ಲಿ ಮತ್ತು ಹೊರ ದೇಶದ 400 ಸ್ಕ್ರೀನ್ ಗಳಲ್ಲಿ ಸಚಿನ್ ಸಿನಿಮಾ ಬಿಡುಗಡೆಯಾಗಿತ್ತು.
ಬ್ರಿಟಿಷ್ ನಿರ್ದೇಶಕ ಜೇಮ್ಸ್ ಎರ್ಸ್ಕೈನ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಸಚಿನ್ ಅವರ ಕ್ರಿಕೆಟ್ ಬದುಕು ಮಾತ್ರವಲ್ಲ, ವೈಯಕ್ತಿಕ ಜೀವನದ ಅತ್ಯಂತ ಕುತೂಹಲಕಾರಿ ಸಂಗತಿಗಳನ್ನು ಈ ಚಿತ್ರದಲ್ಲಿ ಅನಾವರಣ ಮಾಡಲಾಗಿದೆ. ಸ್ವತಃ ಸಚಿನ್ ತೆಂಡೂಲ್ಕರ್ ತಮ್ಮ ಪಾತ್ರದಲ್ಲಿ ಅಭಿನಯಿಸಿದ್ದು, ವೀರೇಂದ್ರ ಸೆಹ್ವಾಗ್, ಮಹೇಂದ್ರ ಸಿಂಗ್ ಧೋನಿ, ಕೂಡ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.