twitter
    Celebs»Jayanthi»Biography

    ಜಯಂತಿ ಜೀವನಚರಿತ್ರೆ

    ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಕನ್ನಡ,ತೆಲಗು,ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

    1950 ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸದ ಜಯಂತಿಯ ಮೂಲಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿ. ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿಗಳು ವಿಚ್ಚೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್‌ನಲ್ಲಿ ಬೆಳೆದರು.

    ಜಯಂತಿಯ ತಾಯಿಯವರಿಗೆ ಇವರನ್ನು ಶಾಸ್ತ್ರೀಯ ನೃತ್ಯಗಾರ್ತಿಯನ್ನಾಗಿ ಮಾಡಬೇಕೆಂಬ ಬಯಕೆ ಇದ್ದುದ್ದರಿಂದ ಚಂದ್ರಕಲಾರವರ ನೃತ್ಯಶಾಲೆಗೆ ಸೇರಿಸಿದರು. ಇಲ್ಲಿ ಜಯಂತಿಯವರ ಸಹಪಾಠಿಯಾಗಿದ್ದ ಮನೋರಮಾರವರು ಮುಂದೆ ಪ್ರಖ್ಯಾತ ತಮಿಳು ನಟಿಯಾದರು.

    ಕನ್ನಡ ನಿರ್ದೇಶಕ ವೈ.ಆರ್.ಪುಟ್ಟಸ್ವಾಮಿಯವರು ಒಂದು ನೃತ್ಯಾಭ್ಯಾಸದಲ್ಲಿ ಜಯಂತಿಯವರನ್ನು ನೋಡಿ ತಮ್ಮ `ಜೇನು ಗೂಡು' ಚಿತ್ರದಲ್ಲಿ ನಟಿಸುವ ಅವಕಾಶ ಕೊಟ್ಟರು. ಇಲ್ಲಿಂದ ಜಯಂತಿಯವರ ಅದೃಷ್ಟವೇ ಬದಲಾಯಿತು. ಕಮಲಾ ಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದ್ದು ಪುಟ್ಟಸ್ವಾಮಿಯವರೇ. ತಮ್ಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿ ಮತ್ತು ಆರು ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿ, ಪಡೆದಿದ್ದು ಜಯಂತಿಯವರ ಹೆಗ್ಗಳಿಕೆ. 

    ಕನ್ನಡದಲ್ಲಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ ಇವರು ಡಾ.ರಾಜ್ ಜೊತೆ ದಾಖಲೆಯ 45 ಚಿತ್ರಗಳಲ್ಲಿ ನಟಿಸಿದ್ದಾರೆ. 

    ಜುಲೈ 26, 2021 ರ ಮುಂಜಾವಿನಲ್ಲಿ ಜಯಂತಿಯವರು ಇಹಲೋಕ ತ್ಯಜಿಸಿದರು. 


     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X