twitter
    Celebs»Upendra»Biography

    ಉಪೇಂದ್ರ ಜೀವನಚರಿತ್ರೆ

    ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಮತ್ತು ನಿರ್ದೇಶಕ ಉಪೇಂದ್ರ 1967 ಸೆಪ್ಟಂಬರ್ 18ರಂದು ಕುಂದಾಪುರ ಸಮೀಪದಲ್ಲಿರುವ ಕೊಟೇಶ್ವರದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಬಸವನಗುಡಿಯ ಎ.ಪಿ.ಎಸ್ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವಾಗ ನಿರ್ದೇಶನದ ಗೀಳನ್ನು ಅಂಟಿಸಿಕೊಂಡ ಉಪ್ಪಿ ಕನ್ನಡದ ಹೆಸರಾಂತ ನಿರ್ದೇಶಕ 'ಕಾಶಿನಾಥ' ಅವರ ಬಳಿ ಸಹಾಯ ನಿರ್ದೇಶಕರಾಗಿ ಕೆಲಸ ಮಾಡಿದರು.

    ಉಪ್ಪಿ ನಿರ್ದೇಶನದ ಚಲನಚಿತ್ರಗಳು

    1992ರಲ್ಲಿ ತೆರೆಗೆ ಬಂದ 'ತರ್ಲೆನನ್ಮಗ' ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಉಪೇಂದ್ರ ಮುಂದೆ 1993ರಲ್ಲಿ 'ಶ್' ಎಂಬ ಹಾರರ್ ಚಿತ್ರ ನಿರ್ದೇಶಿಸಿದರು. 1995ರಲ್ಲಿ ಬಿಡುಗಡೆಯಾದ ಶಿವರಾಜಕುಮಾರ್ ಅಭಿನಯದ 'ಓಂ' ಚಿತ್ರ ಇಡೀ ಭಾರತ ಚಿತ್ರರಂಗದಲ್ಲಿಯೇ ಹೊಸ ಸಂಚಲನ ಸೃಷ್ಟಿಸಿತು. ಈ ಚಿತ್ರದಲ್ಲಿ ನಿಜವಾದ ರೌಡಿಗಳು ತಮ್ಮ ಪಾತ್ರಗಳಲ್ಲಿ ಸ್ವತಃ ತಾವೇ ಅಭಿನಯಿಸಿರುವುದು ವಿಶೇಷ. ನಂತರ 'ಆಪರೇಷನ್ ಅಂತ', 'ಸ್ವಸ್ತಿಕ್' ಚಿತ್ರಗಳನ್ನು ನಿರ್ದೇಶಿಸಿದರು.


    1998ರಲ್ಲಿ ತೆರೆಗೆ ಬಂದ 'ಎ' ಚಿತ್ರವನ್ನು ನಿರ್ದೇಶಿಸಿ ಸ್ವತಃ ತಾವೇ ನಟಿಸಿ, ನಾಯಕನಾಗಿಯೂ ಕನ್ನಡ ಚಿತ್ರರಂಗದಲ್ಲಿ ಪರಿಚಿತರಾದರು. ಮುಂದೆ ತೆರೆಗೆ ಬಂದ 'ಉಪೇಂದ್ರ' ಚಿತ್ರವು ಹಲವಾರು ದಾಖಲೆಗಳನ್ನು ಬರೆಯಿತು. ಇವೆರಡು ಚಿತ್ರಗಳು ಕನ್ನಡದಲ್ಲಿ ಮಾತ್ರವಲ್ಲದೇ ತೆಲುಗು ಚಿತ್ರರಂಗದಲ್ಲಿಯೂ ಶತದಿನ ಪೂರೈಸಿದವು. ಇಲ್ಲಿಂದ ಮುಂದೆ 10 ವರ್ಷಗಳ ಕಾಲ ನಿರ್ದೇಶನವನ್ನು ಬದಿಗಿಟ್ಟ ಉಪ್ಪಿ, ಹಲವಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದರು. ಮುಂದೆ ಇವರು 2010ರಲ್ಲಿ ನಿರ್ದೇಶಿಸಿದ 'ಸೂಪರ್' ಮತ್ತು 2015ರಲ್ಲಿ ನಿರ್ದೇಶಿಸಿದ 'ಉಪ್ಪಿ 2' ಚಿತ್ರಗಳು ಶತದಿನ ಪೂರೈಸಿದವು.


    2003ರಲ್ಲಿ ಉಪೇಂದ್ರ ಖ್ಯಾತ ನಟಿ ಪ್ರಿಯಾಂಕ ಅವರನ್ನು ಕೈಹಿಡಿದರು. 2018 ಮಾರ್ಚ್ ನಲ್ಲಿ ಪ್ರಜಾಕೀಯ ಪಕ್ಷ ಸ್ಥಾಪಿಸಿ ರಾಜಕೀಯವಾಗಿಯೂ ಸಕ್ರಿಯವಾಗಿದ್ದಾರೆ. ತಮ್ಮ ವಿಶಿಷ್ಟ ಆಲೋಚನಾ ಲಹರಿಗಳು, ವಿಭಿನ್ನ ನಟನಾ ಶೈಲಿಗಳಿಂದ ಭಿನ್ನವಾಗಿ ನಿಲ್ಲುವ ಇವರು ಕನ್ನಡ ಚಿತ್ರರಂಗ ಕಂಡ ಅದ್ಭುತ ಪ್ರತಿಭೆ. 

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X