»   » ಹಿರಿಯ ನಿರ್ದೇಶಕ ಎ.ಟಿ.ರಘು ಅಸ್ವಸ್ಥ!

ಹಿರಿಯ ನಿರ್ದೇಶಕ ಎ.ಟಿ.ರಘು ಅಸ್ವಸ್ಥ!

Posted by:
Subscribe to Filmibeat Kannada

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಟಿ.ರಘು ಅವರು ಅಸ್ವಸ್ಥರಾಗಿದ್ದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತಮ್ಮ ಎರಡು ಕಿಡ್ನಿಗಳು ವೈಪಲ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದಾರೆ.

ಕಳೆದ 4 ದಶಕಗಳಿಂದ ರಘು ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ವಿಶೇಷ ಅಂದ್ರೆ, ಎ.ಟಿ.ರಘು ಅವರು ನಿರ್ದೇಶನ ಮಾಡಿರುವ ಬಹುಪಾಲು ಚಿತ್ರಗಳಿಗೆ ರೆಬೆಲ್ ಸ್ಟಾರ್ ಅಂಬರೀಶ್ ಅವರೇ ನಾಯಕನಾಗಿದ್ದಾರೆ.

Veteran Director A.T.Raghu hospitalized

ಕನ್ನಡ, ಹಿಂದಿ, ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಎ.ಟಿ.ರಘು 1990ರಲ್ಲಿ 'ಅಜಯ್-ವಿಜಯ್' ಚಿತ್ರದ ಮೂಲಕ ಕನ್ನಡ ಇಂಡಸ್ಟ್ರಿ ಪ್ರವೇಶ ಮಾಡಿದ್ದರು. 'ಇನ್ಸ್ ಪೆಕ್ಟರ್ ಕ್ರಾಂತಿ ಕುಮಾರ್', 'ಪುಟ್ಟ ಹೆಂಡ್ತಿ', 'ಮೈಸೂರು ಜಾಣ', 'ಮಂಡ್ಯದ ಗಂಡು', ಮಿಡಿದ ಹೃದಯಗಳು', 'ಅಂತಿಮ ತೀರ್ಪು', 'ನ್ಯಾಯಕ್ಕಾಗಿ ನಾನು', 'ಪದ್ಮವ್ಯೂಹ', 'ಸೂರ್ಯೋದಯ' ಸೇರಿದಂತೆ ಹಲವು ಚಿತ್ರಗಳನ್ನ ನಿರ್ದೇಶನ ಮಾಡಿದ್ದರು.

ಇಂತಹ ನಿರ್ದೇಶಕ ಈಗ ಕಿಡ್ನಿ ವೈಪಲ್ಯದಿಂದ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಆರ್ಥಿಕವಾಗಿ ಸಮಸ್ಯೆಯಲ್ಲಿರುವ ಈ ನಿರ್ದೇಶಕನಿಗೆ ಕನ್ನಡ ಚಿತ್ರರಂಗದ ನೆರವಿನ ಅಗತ್ಯವಿದೆ.

English summary
Veteran Director A.T. Raghu hospitalized and he was suffering from 2 kidney failure. here is the details.
Please Wait while comments are loading...

Kannada Photos

Go to : More Photos