ದಕ್ಷಿಣ ಭಾರತದ ಗಾನ ಕೋಗಿಲೆ ಎಸ್.ಜಾನಕಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಲೆಜೆಂಡರಿ ಗಾಯಕಿ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಎಸ್.ಜಾನಕಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಎಸ್.ಜಾನಕಿ ಅವರಿಗೆ 88 ವರ್ಷ ವಯಸ್ಸಾಗಿತ್ತು. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆ ಸೇರಿದಂತೆ ಹಲವು ಭಾಷೆಗಳಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದರು. ಎಸ್.ಜಾನಕಿ ಅವರ ಅಗಲಿಕೆ ಚಿತ್ರರಂಗಕ್ಕೆ ದೊಡ್ಡ ಶಾಕ್ ಆಗಿದ್ದು, ಸಂಗೀತ ಲೋಕ ಮರುಗುತ್ತಿದೆ.
More Articles