ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಪ್ರತಿದಿನ ಏನಾದರೂ ಒಂದು ಸುದ್ದಿ ಹಲ್‌ಚಲ್ ಎಬ್ಬಿಸುತ್ತಲೇ ಇರುತ್ತೆ. ವಿಜಯಲಕ್ಷ್ಮಿ ಅವರು ತಮ್ಮ ಪತಿ ದರ್ಶನ್ ಬಗ್ಗೆ ಭಾವನಾತ್ಮಕವಾಗಿ ಒಂದೊಂದು ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಹಾಡುತ್ತಿರುವ ವಿಡಿಯೋವನ್ನು ತನ್ನ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದರು. ಇಂದು (ಜುಲೈ 16) ಮತ್ತೊಂದು ಭಾವನಾತ್ಮಕ ಪೋಸ್ಟ್ ಅನ್ನು ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

Advertisement

ವಿಜಯಲಕ್ಷ್ಮಿ ದರ್ಶನ್ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್ ಮಾಡಿರುವ ಪೋಸ್ಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್‌ನಲ್ಲಿದೆ. ದರ್ಶನ್ ಅಭಿಮಾನಿಗಳು ಈ ಪೋಸ್ಟ್‌ಗಳಿಗೆ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ದರ್ಶನ್ ಜೊತೆಗಿರುವ ವೈಟ್ ಅಂಡ್ ಬ್ಲಾಕ್‌ ಫೋಟೊವೊಂದನ್ನು ಹಂಚಿಕೊಂಡಿದ್ದು, ಆ ಫೋಟೊವನ್ನು ನೋಡುತ್ತಿದ್ದಂತೆ ಅಭಿಮಾನಿಗಳು ಭಾವುಕರಾಗಿದ್ದಾರೆ.

Advertisement

ಇನ್‌ಸ್ಟಾಗ್ರಾಂ ಸ್ಟೋರಿ ಹೈಲೈಟ್ ಏನು?

ದರ್ಶನ್ ಜೈಲು ಸೇರಿದ ದಿನದಿಂದ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಅಭಿಮಾನಿಗಳಿಗೆ ಧೈರ್ಯ ತುಂಬುತ್ತಿದ್ದಾರೆ. ಅವರನ್ನು ತಮ್ಮಲ್ಲೇ ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ದರ್ಶನ್ ಕಷ್ಟದ ಸಮಯದಲ್ಲಿ ಫ್ಯಾನ್ಸ್‌ಗೆ ಪರೋಕ್ಷವಾಗಿ ಮಾಹಿತಿಯನ್ನು ನೀಡುತ್ತಾರೆ. ವಿರೋಧಿಸುವವರಿಗೆ ಖಡಕ್ ಸಂದೇಶವನ್ನು ರವಾನೆ ಮಾಡುತ್ತಾರೆ. ಕೆಲವೊಮ್ಮೆ ದರ್ಶನ್ ನೆನೆದು ಭಾವುಕರಾಗಿ ಪೋಸ್ಟ್ ಮಾಡುತ್ತಾರೆ. ಈಗ ನಟ ದರ್ಶನ್ ಜೊತೆಗಿನ ಹಳೆಯ ಸುಂದರ ಫೋಟೋ ಹಂಚಿಕೊಂಡಿದ್ದಾರೆ.