ದಳಪತಿ ವಿಜಯ್ ಅಭಿಮಾನಿಗಳ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೊನೆಗೂ 'ಜನನಾಯಗನ್' ಸಿನಿಮಾ ರಿಲೀಸ್ ಡೇಟ್ ಅಧಿಕೃತವಾಗಿ ಘೋಷಣೆಯಾಗಿದೆ. ಸಂಕ್ರಾಂತಿಗೆ ಬರಬೇಕಿದ್ದ ಸಿನಿಮಾ 6 ತಿಂಗಳು ತಡವಾಗಿ ತೆರೆಗೆ ಬರ್ತಿದೆ. ಇತ್ತೀಚೆಗೆ ಒಂದಷ್ಟು ಬದಲಾವಣೆಗಳ ಬಳಿಕ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ 'A' ಸರ್ಟಿಫಿಕೇಟ್ ಸಿಕ್ಕಿತ್ತು.
ಹೆಚ್. ವಿನೋದ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ 'ಜನನಾಯಗನ್' ಸಿನಿಮಾ ಸುಗ್ಗಿ ಸಂಭ್ರಮದಲ್ಲಿ ಜನವರಿ 9ರಂದು ತೆರೆಗೆ ಬರಬೇಕಿತ್ತು. ಆದರೆ ಸೆನ್ಸಾರ್ ಸಮಸ್ಯೆ ಎದುರಾಗಿತ್ತು. ಕಾನೂನಾತ್ಮಕವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಪ್ರಯತ್ನಿಸಿದ್ರು ಸಾಧ್ಯವಾಗಿರಲಿಲ್ಲ. ಅಷ್ಟರಲ್ಲಿ ತಮಳುನಾಡು ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿ ಸಂಕಷ್ಟ ಎದುರಾಗಿತ್ತು. ಚುನಾವಣೆಯಲ್ಲಿ ವಿಜಯ್ ಗೆದ್ದು ಸಿಎಂ ಆಗಿದ್ದಾರೆ. ಇದೀಗ 'ಜನನಾಯಗನ್' ಸಿನಿಮಾ ಬಿಡುಗಡೆ ಸಮಸ್ಯೆ ಬಗೆಹರಿದಿದೆ. ಜುಲೈ 23ಕ್ಕೆ ಸಿನಿಮಾ ತೆರೆಗೆ ಬರುವುದಾಗಿ ಅಧಿಕೃತ ಮಾಹಿತಿ ಲಭ್ಯವಾಗಿದೆ.
ಜುಲೈ 23 ಅಥವಾ 24ರಂದು 'ಜನನಾಯಗನ್' ಸಿನಿಮಾ ಬಿಡುಗಡೆ ಆಗಬಹುದು ಎಂದು ಕೆಲವರು ನಿರೀಕ್ಷಿಸಿದ್ದರು. ಇದೀಗ ಸ್ವತಃ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ಅಧಿಕೃತವಾಗಿ ಈ ಬಗ್ಗೆ ಮಾಹಿತಿ ನೀಡಿದೆ. ಈ ಸುದ್ದಿ ಕೇಳಿ ದಳಪತಿ ಅಭಿಮಾನಿಗಳಂತೂ ಖುಷಿಯಾಗಿದ್ದಾರೆ. ಶೀಘ್ರದಲ್ಲೇ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ.More Articles