ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ್ದಾರೆ. ಕೆಟ್ಟವರು ಇದ್ದಾರೆ. ಇನ್ನು ಈ ವೇದಿಕೆಯ ಮೂಲಕವೇ ಸಿನಿ ತಾರೆಯರು ಹೆಚ್ಚು ಪ್ರಚಲಿತಕ್ಕೆ ಬರುತ್ತಿರುವ ಜೊತೆಗೆ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಾಧನವನ್ನಾಗಿಯೂ ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ.

Advertisement

ಆದರೆ ಇದನ್ನೇ ಅಡ್ವಾಂಟೇಜ್ ಆಗಿ ತೆಗೆದುಕೊಂಡ ಸಾಕಷ್ಟು ಮಂದಿ ಒಂದು ಕಡೆ ಚಿತ್ರರಂಗದಲ್ಲಿನ ಮಹಿಳೆಯರಿಗೆ, ನಟಿಯರಿಗೆ ಲೈಂಗಿಕ ಶೋಷಣೆ, ಕಿರುಕುಳ ಕೊಡುವುದನ್ನೇ ವೃತ್ತಿಯನ್ನಾಗಿಸಿಕೊಂಡು ಸ್ತ್ರೀಯರ ಬಾಳಿಗೆ ಕಗ್ಗಂಟಾಗಿ ಉಳಿದಿದ್ದಾರೆ. ಇದಕ್ಕೆ ಇನ್ನೊಂದು ಉದಾಹರಣೆಯೇ ಪಾಯಲ್ ರಜಪೂತ್ ಅವರಿಗಾದ ಅನುಭವ.

Advertisement

ಹೌದು, ಪಾಯಲ್ ರಜಪೂತ್.. ''ಆರ್ ಎಕ್ಸ್ 100'' ಚಿತ್ರದ ಮನಮೋಹಕ ಚೆಲುವೆ. ಇದೊಂದೇ ಚಿತ್ರದ ಮೂಲಕ ಭಾರತದೆಲ್ಲೆಡೆ ಮನೆ ಮಾತಾದ ಪಾಯಲ್ ಆ ನಂತರ ''ವೆಂಕಿ ಮಾಮಾ''... ''ಡಿಸ್ಕೋ ರಾಜಾ''.. ''ಆರ್ ಡಿ ಎಕ್ಸ್ ಲವ್''.. ''ಗಿನ್ನಾ''.. ''ಅನಗನಗಾ ಒಂದು ಅತಿಥಿ''.. ಹೀಗೆ ಹಲವು ಚಿತ್ರಗಳಲ್ಲಿ ಅಭಿನಯಿಸಿದರು. ಕನ್ನಡದಲ್ಲಿ ''ಹೆಡ್ ಬುಷ್'' ಚಿತ್ರದಲ್ಲಿ ಕೂಡ ಕಾಣಿಸಿಕೊಂಡರು.