Just In
Don't Miss!
- News
ರೈತರ ಹೋರಾಟ ಬೆಂಬಲಿಸಿ ಜ.20ರಂದು ರಾಜ್ ಭವನ ಚಲೋ
- Sports
ಗಬ್ಬಾ ಸ್ಟೇಡಿಯಂನಲ್ಲಿ ಭಾರತೀಯರ ಮನ ಗೆದ್ದ ಬಡ ಕ್ರಿಕೆಟಿಗರ ಕತೆ
- Automobiles
ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಎಕ್ಸ್ಎಲ್5 ಕಾರು
- Lifestyle
ಚೀನಾದ ಐಸ್ ಕ್ರೀಮ್ ನಲ್ಲಿ ಕೊರೊನಾ ವೈರಸ್ ಪತ್ತೆ!!!
- Finance
ಷೇರುಪೇಟೆಯಲ್ಲಿ ಉತ್ಸಾಹ; ಹೂಡಿಕೆದಾರರ ಸಂಪತ್ತು 3.50 ಲಕ್ಷ ಕೋಟಿ ರು. ಹೆಚ್ಚಳ
- Education
NBT Recruitment 2021: 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಜನ ನಿರೀಕ್ಷೆಯಲ್ಲಿ ಬಾಲಿವುಡ್ ಬಿಂಕದ ರಾಣಿ
ಬಾಲಿವುಡ್ ತಾರೆ ರಾಣಿ ಮುಖರ್ಜಿ ರಾಜನ ನಿರೀಕ್ಷೆಯಲ್ಲಿದ್ದಾರೆ. ಮುಂದಿನ ವರ್ಷ ಆಕೆ ತನ್ನ ಬಹುಕಾಲದ ಬಾಯ್ ಫ್ರೆಂಡ್ಆದಿತ್ಯ ಚೋಪ್ರಾ ಅವರನ್ನು ಮದುವೆಯಾಗಲಿದ್ದಾರಂತೆ. ಇಬ್ಬರೂ ಹಲವಾರು ಚಿತ್ರಗಳಿಗೆ ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಮದುವೆಯಾಗುವ ಮೂಲಕ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.
ಆದಿತ್ಯ ಚೋಪ್ರಾ ಮತ್ತು ರಾಣಿ ನಡುವಿನ ಕಣ್ಣಾಮುಚ್ಚಾಲೆ ಬಹಳ ಹಿಂದೆಯೇ ಟಾಂ ಟಾಂ ಆಗಿತ್ತು. ಆದಿತ್ಯ ಚೋಪ್ರಾ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ರಾಣಿಯೊಂದಿಗಿನ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಚೋಪ್ರಾ ಚಲ್ಲಾಟಗಳಿಗೆ ಬೇಸತ್ತ ಆತನ ಪತ್ನಿ ಪಾಯಲ್ ಖನ್ನಾ ಕಳೆದ ವರ್ಷ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ ರಾಣಿಯನ್ನು ಮದುವೆಯಾಗುವುದು ಆದಿತ್ಯ ಚೋಪ್ರಾ ಅವರ ತಂದೆ ಯಶ್ ಚೋಪ್ರಾ ಅವರಿಗೆ ಸುತಾರಾಂ ಇಷ್ಟವಿಲ್ಲವಂತೆ. ಎಲ್ಲಾ ಅಂದುಕೊಂಡಂತೆ ನಡೆದರೆ ಬಹುಶಃ ಇವರಿಬ್ಬರೂ ಮುಂದಿನ ವರ್ಷ ಹಾರ ಬದಲಾಯಿಸಿಕೊಳ್ಳುವ ಸಾಧ್ಯತೆಗಳಿವೆ. ಏನೇ ಆಗಲಿ ರಾಣಿಗೆ ಸೆಕೆಂಡ್ ಹ್ಯಾಂಡ್ ರಾಜ ಸಿಗುತ್ತಿರುವುದು ಆಕೆಯ ಅಭಿಮಾನಿಗಳಿಗೆ ಕೊಂಚ ನಿರಾಶೆ ಮೂಡಿಸಿದೆ.