For Quick Alerts
  ALLOW NOTIFICATIONS  
  For Daily Alerts

  ನ್ಯೂಯಾರ್ಕ್ ಏರ್‌ಪೋರ್ಟ್‌ನಲ್ಲಿ ಶಾರುಖ್‌ ಬಂಧನ

  By Rajendra
  |

  ನ್ಯೂಯಾರ್ಕ್ ಏರ್‌ಪೋರ್ಟ್‌ನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಎರಡು ಗಂಟೆಗಳಿಗೂ ಅಧಿಕ ಕಾಲ ಬಂಧಿಸಿ ವಿಚಾರಣೆಗೆ ಒಳಪಡಿಸಿದ ಘಟನೆ ಶುಕ್ರವಾರ (ಏ.13) ನಡೆದಿದೆ. ಯಾಲೆ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡುವ ಸಲುವಾಗಿ ನೀತಾ ಅಂಬಾನಿ ಜೊತೆ ಶಾರುಖ್ ನ್ಯೂಯಾರ್ಕ್‌ಗೆ ಭೇಟಿ ನೀಡಿದ್ದರು.

  ಕಸ್ಟಮ್ಸ್ ಅಧಿಕಾರಿಗಳು ಎಲ್ಲ ಪ್ರಯಾಣಿಕರನ್ನು ಪರೀಕ್ಷಿಸಿ ಬಿಡುಗಡೆ ಮಾಡಿದ್ದಾರೆ. ಆದರೆ ಶಾರುಖ್ ಅವರನ್ನು ಮಾತ್ರ ಎರಡು ಗಂಟೆಗೂ ಹೆಚ್ಚು ಕಾಲ ತಡೆದು ನಿಲ್ಲಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಳಿಕ ಯಾಲೆ ವಿವಿಯ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಶಾರುಖ್ ಅವರನ್ನು ಬಿಡುಗಡೆ ಮಾಡುವಂತೆ ಕಸ್ಟಮ್ಸ್ ಅಧಿಕಾರಿಗಳನ್ನು ವಿನಂತಿಸಿದ ಮೇಲೆ ಅವರನ್ನು ಬಿಡುಗಡೆ ಮಾಡಿದ್ದಾರೆ.

  ಬಳಿಕ ಕಸ್ಟಮ್ಸ್ ಅಧಿಕಾರಿಗಳು ಶಾರುಖ್ ಅವರ ಕ್ಷಮೆಯಾಚಿಸಿದ್ದಾರೆ. ಶಾರುಖ್ ಅವರಿಗೆ ಈ ರೀತಿ ಆಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2009ರಲ್ಲೂ ಒಮ್ಮೆ ಹೀಗೆಯೇ ಆಗಿತ್ತು. ಯುಎಸ್ ಏರ್‌ಪೋರ್ಟ್‌ನಲ್ಲಿ ತಡೆದು ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆಗ ಅವರು 'ಮೈ ನೇಮ್ ಈಸ್ ಖಾನ್' ಚಿತ್ರದ ಪ್ರಚಾರಕ್ಕಾಗಿ ಯುಎಸ್‌ಗೆ ಭೇಟಿ ನೀಡಿದ್ದರು. (ಪಿಟಿಐ)

  English summary
  Superstar Shahrukh Khan was detained for two hours at the New York airport. He was there to give a lecture at the Yale University, along with Neeta Ambani.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X