Just In
Don't Miss!
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Automobiles
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿದ್ದ ಏಜಾಜ್ ಖಾನ್‌ಗೆ ಕೊರೊನಾ
ಡ್ರಗ್ಸ್ ಪ್ರಕರಣದಲ್ಲಿ ಎನ್‌ಸಿಬಿಯಿಂದ ಬಂಧನವಾಗಿರುವ ಏಜಾಜ್ ಖಾನ್‌ಗೆ ಕೊರೊನಾ ವೈರಸ್ ತಗುಲಿದೆ ಎಂದು ಎಎನ್‌ಐ ವರದಿ ಮಾಡಿದೆ.
ಏಜಾಜ್ ಖಾನ್‌ಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಸೋಮವಾರ (ಏಪ್ರಿಲ್ 5) ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅದಕ್ಕೂ ಮುಂಚೆ ವೈದ್ಯಕೀಯ ಪರೀಕ್ಷೆ ಮಾಡಲಾಗಿತ್ತು. ಏಜಾಜ್ ಖಾನ್ ಪ್ರಕರಣ ವಿಚಾರಣೆ ನಡೆಸಿದ್ದ ಮುಂಬೈ ವಿಶೇಷ ನ್ಯಾಯಾಲಯ ಏಪ್ರಿಲ್ 3 ರವರೆಗೂ ಎನ್‌ಸಿಬಿ ಕಸ್ಟಡಿಗೆ ನೀಡಿತ್ತು.
ಡ್ರಗ್ಸ್ ಪ್ರಕರಣ: ಖಳನಟನ ಬಂಧಿಸಿ ಎಳೆದೊಯ್ದ ಪೊಲೀಸರು
ಡ್ರಗ್ಸ್ ಕೇಸ್‌ನಲ್ಲಿ ತನಿಖೆ ಮಾಡುತ್ತಿರುವ ಎನ್‌ಸಿಬಿ ಅಧಿಕಾರಿಗಳು ಕಳೆದ ಮಂಗಳವಾರ (ಮಾರ್ಚ್ 30) ರಂದು ಅರೆಸ್ಟ್ ಮಾಡಿದ್ದರು. ರಾಜಸ್ಥಾನದಿಂದ ಆಗಷ್ಟೇ ಮುಂಬೈಗೆ ಬಂದಿಳಿದಿದ್ದ ನಟನನ್ನು ಪೊಲೀಸರು ಬಲವಂತವಾಗಿ ಎಳೆದೊಯ್ದು ಘಟನೆ ನಡೆದಿತ್ತು.
ಏಜಾಜ್ ಖಾನ್ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ 4.5 ಗ್ರಾಂ ಆಲ್ಪ್ರೋಜೋಲ್ ಮಾತ್ರೆಗಳು ಸಿಕ್ಕಿವೆ ಎಂದು ವರದಿಯಾಗಿವೆ. ಜೊತೆಗೆ ಏಜಾಜ್ ಖಾನ್ ಬಟಾಟಾ ಗ್ಯಾಂಗ್ ಜೊತೆ ಸಂಪರ್ಕ ಹೊಂದಿದ್ದರು ಎಂಬ ಆರೋಪವೂ ಇದೆ.
ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕೋಮುಗಳ ಮಧ್ಯೆ ದ್ವೇಷ ಹುಟ್ಟಿಸುವ ಹೇಳಿಕೆ ನೀಡಿದ ಪ್ರಕರಣದಲ್ಲಿ ಏಜಾಜ್ ಖಾನ್ ಬಂಧನವಾಗಿದ್ದರು.
ಬಾಲಿವುಡ್ ಹಾಗೂ ತೆಲುಗಿನ ಹಲವು ಸಿನಿಮಾಗಳಲ್ಲಿ ಏಜಾಜ್ ಖಾನ್ ನಟಿಸಿದ್ದಾರೆ. ಜೊತೆಗೆ ಹಲವು ಧಾರಾವಾಹಿಗಳು ಹಾಗೂ ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.