For Quick Alerts
  ALLOW NOTIFICATIONS  
  For Daily Alerts

  ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

  |

  ಬಾಲಿವುಡ್ ಸಿನಿ ಲೋಕದ ಹಿರಿಯ ನಟ ದಿಲೀಪ್ ಕುಮಾರ್ (95) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯೂಮೋನಿಯಾ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನ ಭಾನುವಾರ ರಾತ್ರಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ.

  ಈ ವಿಷ್ಯವನ್ನ ದಿಲೀಪ್ ಕುಮಾರ್ ಕುಟುಂಬದ ಆಪ್ತ ಫೈಸಲ್ ಫಾರೂಕಿ ಟ್ವಿಟ್ಟರ್ ನಲ್ಲಿ ಬಹಿರಂಗಪಡಿಸಿದ್ದು, ದಿಲೀಪ್ ಅವರ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.

  ''ದಿಲೀಪ್ ಕುಮಾರ್ ಅವರು ನ್ಯೂಮೋನಿಯಾದಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿ, ದಿಲೀಪ್ ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿಯನ್ನ ಟ್ವಿಟ್ಟರ್ ನಲ್ಲಿ ತಿಳಿಸಲಾಗುತ್ತೆ'' ಎಂದು ಟ್ವೀಟ್ ಮಾಡಿದ್ದಾರೆ.

  ಬಾಲಿವುಡ್ ನಟ ದಿಲೀಪ್ ಕುಮಾರ್ ಗೆ ಎದೆ ಸೋಂಕು, ಆಸ್ಪತ್ರೆಗೆ ದಾಖಲು ಬಾಲಿವುಡ್ ನಟ ದಿಲೀಪ್ ಕುಮಾರ್ ಗೆ ಎದೆ ಸೋಂಕು, ಆಸ್ಪತ್ರೆಗೆ ದಾಖಲು

  ಕಳೆದ ತಿಂಗಳು ಎದೆಯಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಚೇತರಿಕೆ ಕಂಡು ಡಿಸ್ಚಾರ್ಜ್ ಆಗಿದ್ದರು. ಕೆಲ ವರ್ಷಗಳಿಂದ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದು, ಪದೇ ಪದೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

  1998 ರಲ್ಲಿ ತೆರೆಕಂಡ 'ಖಿಲಾ' ಚಿತ್ರದ ಬಳಿಕ ಯಾವುದೇ ದಿಲೀಪ್ ಕುಮಾರ್ ಯಾವುದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. 1944ರಲ್ಲಿ 'ಜ್ವರ್ ಭಟಾ' ಸಿನಿಮಾ ಮೂಲಕ ಚಿತ್ರರಂಗಕ್ಕೆ ಅಡಿಯಿಟ್ಟ ದಿಲೀಪ್ ಕುಮಾರ್ ಐದು ದಶಕಗಳ ತಮ್ಮ ಅದ್ಭುತ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ.

  'ದೇವದಾಸ್', 'ಕರ್ಮ', 'ಮುಘಲ್ ಎ ಆಝಾಮ್' ಅಂತಹ ಹಿಟ್ ಚಿತ್ರಗಳನ್ನು ಕೊಟ್ಟ ದಿಲೀಪ್ ಕುಮಾರ್ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಅವರಿಗೆ ಸಂದಿವೆ.

  English summary
  Veteran actor Dilip Kumar has been admitted to a hospital on Sunday. The 95-year-old actor is being treated for recurrent pneumonia

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X