For Quick Alerts
  ALLOW NOTIFICATIONS  
  For Daily Alerts

  ಚಿತ್ರೀಕರಣ ವೇಳೆ ಕುಸಿದು ಬಿದ್ದ ಹಿರಿಯ ನಟ ಮಿಥುನ್ ಚಕ್ರವರ್ತಿ

  |

  ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿ ಚಿತ್ರೀಕರಣ ವೇಳೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ ಎನ್ನಲಾಗಿದೆ. ಮಿಥುನ್ ಚಕ್ರವರ್ತಿ ಸದ್ಯ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಚಿತ್ರದ ಚಿತ್ರೀಕರಣ ಉತ್ತರಾಖಂಡದ ಮಸ್ಸೂರಿನಲ್ಲಿ ನಡೆಯುತ್ತಿತ್ತು ಎಂದು ವರದಿಯಾಗಿದೆ.

  ಮಿಥುನ್ ಚಕ್ರವರ್ತಿ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಉದರ ಸೋಂಕಿನಿಂದ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗುತ್ತಿದೆ. ಸದ್ಯ ಚಿತ್ರದ ಚಿಚ್ರೀಕರಣ ಸ್ಥಗಿತಗೊಳಿಸಲಾಗಿದೆ.

  ದಿ ಕಾಶ್ಮೀರ್ ಫೈಲ್ಸ್ ಸಿನಿಮಾಕ್ಕೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾಗೆ ಪ್ರತಿಕ್ರಿಯೆ ನೀಡಿರುವ ವಿವೇಕ್, 'ನಾವು ಚಿತ್ರದ ದೊಡ್ಡ ಆಕ್ಷನ್ ದೃಶ್ಯವನ್ನು ಸೆರೆಹಿಡಿಯುತ್ತಿದ್ದೆವು. ಈ ದೃಶ್ಯ ಮಿಥುನ್ ಚಕ್ರವರ್ತಿ ಅವರ ಮೇಲೆ ಕೇಂದ್ರೀಕರಿತವಾಗಿತ್ತು. ಆದರೆ ಇದ್ದಕ್ಕಿದ್ದಂತೆ ಸೋಂಕಿನಿಂದ ಬಳಲು ಪ್ರಾರಂಭಿಸಿದರು. ತುಂಬಾ ಪರದಾಡುತ್ತಿದ್ದರು. ಆ ಸಮಯದಲ್ಲಿ ಯಾವುದೇ ಸಾಮಾನ್ಯ ವ್ಯಕ್ತಿ ನಿಂತುಕೊಳ್ಳಲು ಸಾಧ್ಯವಿಲ್ಲ. ಆದರೆ ಅವರು ಚಿತ್ರೀಕರಣ ಮುಂದುವರೆಸುವುದಾಗಿ ಹೇಳಿದರು. ಆದರೆ ನೋವು ಜಾಸ್ತಿಯಾಯಿತು' ಎಂದು ಹೇಳಿದ್ದಾರೆ.

  1989 ಮತ್ತು 1990 ರಲ್ಲಿ ಕಾಶ್ಮೀರ ಪಂಡಿತರು ತಮ್ಮ ತಾಯ್ನಡಿನಿಂದ ಹೊರಹೋಗುವ ಕಥೆಯನ್ನು ಕಾಶ್ಮೀರ ಫೈಲ್ಸ್ ಸಿನಿಮಾ ಮೂಲಕ ಹೇಳಹೊರಟಿದ್ದಾರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. ಈ ಚಿತ್ರದಲ್ಲಿ ಮಿಥುನ್ ಚಕ್ರವರ್ತಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಮುಂದಿನ ವರ್ಷ ರಿಲೀಸ್ ಮಾಡುವ ಪ್ಲಾನ್ ಮಾಡಿದೆ.

  English summary
  Bollywood senior Actor Mithun Chakraborty suffers serious infection on the Kashmir files shooting set.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X