'ರಿಯಲ್ ಹೀರೋ' ಸೋನು ಸೂದ್‌ಗೆ ತಗುಲಿದೆ ಕೊರೊನಾ ವೈರಸ್

ಬಾಲಿವುಡ್ ನಟ, ಜನಸಾಮಾನ್ಯರ ಪಾಲಿನ ರಿಯಲ್ ಹೀರೋ ಸೋನು ಸೂದ್‌ಗೆ ಕೊರೊನಾ ವೈರಸ್ ತಗುಲಿದೆ. ಈ ಕುರಿತು ಸ್ವತಃ ಸೋನು ಸೂದ್ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕುವ ಮೂಲಕ ಖಚಿತಪಡಿಸಿದ್ದಾರೆ.

''ನನಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ನಿಮಗೆ ತಿಳಿಸಲು ಬಯಸುತ್ತೇನೆ. ಕೋವಿಡ್‌ಗೆ ಸಂಬಂಧಿಸಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದ್ದು, ಪ್ರಸ್ತುತ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ'' ಎಂದು ಸೋನು ಸೂದ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸಂಕಷ್ಟದಲ್ಲಿ ಅದೇಷ್ಟೊ ಜನರಿಗೆ ಸೋನು ಸೂದ್ ಸಹಾಯ ಮಾಡಿದ್ದಾರೆ. ಮೊದಲ ಸಲ ದೇಶಾದ್ಯಂತ ಲಾಕ್‌ಡೌನ್ ಆದ ಸಂದರ್ಭದಲ್ಲಿ ಜನರಿಗೆ ಊರುಗಳಿಗೆ ಹೋಗಲು ಬಸ್ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಿದ್ದರು.

actor-sonu-sood-tested-positive-covid19

ಅಲ್ಲಿಂದ ಸೋನು ಸೂದ್ ಜನಸಾಮಾನ್ಯರ ಪಾಲಿಗೆ ರಿಯಲ್ ಹೀರೋ ಎನಿಸಿಕೊಂಡರು. ಬಡಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದು, ಆನ್ ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸುವುದು, ಶಸ್ತ್ರ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆಯಲ್ಲಿದ್ದವರಿಗೆ ನೆರವು ನೀಡುವ ಮಾನವೀಯ ಕೆಲಸಗಳನ್ನು ಮಾಡಿದ್ದಾರೆ.

ಕೊರೊನಾ ಲಸಿಕೆ ಅಭಿಯಾನದಲ್ಲಿ ಸೋನು ಸೂದ್ ಅವರನ್ನು ಪಂಜಾಬ್ ಸರ್ಕಾರ ರಾಯಭಾರಿಯಾಗಿ ನೇಮಕ ಮಾಡಿಕೊಂಡಿತ್ತು. ಕೋವಿಡ್ ಮೊದಲ ಡೋಸ್ ಪಡೆದುಕೊಂಡಿದ್ದ ಸೋನು ಸೂದ್ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಕರೆ ನೀಡಿದ್ದರು.

ಇದಾದ ಕೆಲವು ದಿನಗಳ ಬಳಿಕ ಸೋನು ಸೂದ್ ಅವರೇ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.

More from Filmibeat

English summary
Bollywood Actor Sonu Sood Tested Positive COVID19 and is currently under quarantine.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X