'ದಿ ವಿಲನ್' ನಟಿಯ ಬೆತ್ತಲೆ ಫೋಟೋಶೂಟ್ ವೈರಲ್
ಬಹುಭಾಷಾ ನಟಿ ಆ್ಯಮಿ ಜಾಕ್ಸನ್ ಬೋಲ್ಡ್ ಅವತಾರದ ಮೂಲಕ ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ಆಮಿ ಜಾಕ್ಸನ್ ಬೆತ್ತಲೆ ಫೋಟೋಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಟಾಪ್ ಲೆಸ್ ಆ್ಯಮಿ ಜಾಕ್ಸನ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿದೆ.
ಇತ್ತೀಚಿಗಷ್ಟೆ ನಟ ಮಿಲಿಂದ್ ಸೋಮನ್ ಕಡಲ ತೀರದಲ್ಲಿ ಬೆತ್ತಲಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಇದೀಗ ಆ್ಯಮಿ ಜಾಕ್ಸನ್ ಬೆತ್ತಲೆ ಫೋಟೋಶೂಟ್ ಮಾಡಿಸಿ ಸುದ್ದಿಯಾಗಿದ್ದಾರೆ. ಆ್ಯಮಿ ಹಾಟ್ ಫೋಟೋಗಳನ್ನು ನೋಡಿ ನೆಟ್ಟಿಗರು ದಂಗಾಗಿದ್ದಾರೆ. ಲೈಕ್ ಒತ್ತಿ ಮೆಚ್ಚುಗೆಯ ಕಾಮೆಂಟ್ಸ್ ಮಾಡುತ್ತಿದ್ದಾರೆ.
ನಟಿ ಆ್ಯಮಿ ಜಾಕ್ಸನ್ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದಾರೆ. ಸದಾ ಹಾಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆಗಳ ನಿದ್ದೆಗೆಡಿಸುತ್ತಿರುತ್ತಾರೆ.

ಕಳೆದ ವರ್ಷ ಜನವರಿಲ್ಲಿ ಗೆಳೆಯ ಜಾರ್ಜ್ ಪನಯೌಟು ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಂತರ ಸೆಪ್ಟಂಬರ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗನಿಗೆ ಆಂಡ್ರಿಯಾಸ್ ಎಂದು ನಾಮಕರಣ ಮಾಡಿದ್ದಾರೆ. ಆಗಾಗ ಮಗನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಮಗುವಿಗೆ ಜನ್ಮ ನೀಡಿದ ಬಳಿಕ ಆಮಿ ಜಾಕ್ಸನ್ ನಟನೆಯಿಂದ ದೂರ ಉಳಿದಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಜೊತೆ 2.0 ಸಿನಿಮಾದಲ್ಲಿ ಕಾಣಿಸಿಕೊಂಡ ಬಳಿಕ ಮತ್ತೆ ಬಣ್ಣ ಹಚ್ಚಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಆಮಿ ಹಾಟ್ ಫೋಟೋಗಳ ಮೂಲಕ ಆಗಾಗ ಸುದ್ದಿಯಲ್ಲಿದ್ದಾರೆ.


Click it and Unblock the Notifications










