Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ: ಸಂತಸ ಹಂಚಿಕೊಂಡ ಕೊಹ್ಲಿ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಜನವರಿ 11ರ ಮಧ್ಯಾಹ್ನ ಹೆಣ್ಣು ಮಗುವಿಗೆ ಅನುಷ್ಕಾ ಜನ್ಮ ನೀಡಿದ್ದಾರೆ ಎಂದು ವಿರಾಟ್ ಕೊಹ್ಲಿ ಸಂತಸ ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ವಿರಾಟ್ ಕೊಹ್ಲಿ, ''ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಹೇಳಲು ಬಹಳ ಖುಷಿಯಾಗುತ್ತಿದೆ. ಅನುಷ್ಕಾ ಮತ್ತು ಮಗುವಿನ ಬಗ್ಗೆ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು, ಅನುಷ್ಕಾ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಇಂತಹ ಸಮಯದಲ್ಲಿ ನಮ್ಮ ಖಾಸಗಿತನವನ್ನು ನೀವು ಗೌರವಿಸುತ್ತೀರಾ ಎಂದು ಬಯಸಿದ್ದೇನೆ'' ಎಂದು ಕೊಹ್ಲಿ ಪೋಸ್ಟ್ ಹಾಕಿದ್ದಾರೆ.
ವೋಗ್ ಮ್ಯಾಗಜೈನ್ಗೆ ಫೋಸ್ ಕೊಟ್ಟ ಗರ್ಭಿಣಿ ಅನುಷ್ಕಾ ಶರ್ಮಾ
ಅನುಷ್ಕಾ ಮತ್ತು ಕೊಹ್ಲಿ ಅಭಿಮಾನಿಗಳು ಈ ಸುದ್ದಿ ತಿಳಿಯುತ್ತಿದ್ದಂತೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ. 2021ನೇ ವರ್ಷದ ಆರಂಭದಲ್ಲಿ ಒಳ್ಳೆಯ ಸುದ್ದಿ ಎಂದು ಶುಭಾಶಯ ತಿಳಿಸುತ್ತಿದ್ದಾರೆ.
2020 ಆಗಸ್ಟ್ ತಿಂಗಳಲ್ಲಿ ಅನುಷ್ಕಾ ಶರ್ಮಾ ಗರ್ಭಿಣಿ ಎಂದು ಕೊಹ್ಲಿ ದಂಪತಿ ಅನೌನ್ಸ್ ಮಾಡಿದ್ದರು. ''2021ರಲ್ಲಿ ನಾವು ಮೂವರು ಆಗಲಿದ್ದೇವೆ, ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಆಗಮಿಸಲಿದ್ದಾರೆ'' ಎಂದು ಹೇಳಿದ್ದರು.
ಅನುಷ್ಕಾ ಶರ್ಮಾ ಜನವರಿ ಆರಂಭದಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ವೈದ್ಯರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಟೂರ್ನಿಯಿಂದ ಕೊಹ್ಲಿ ವಿಶ್ರಾಂತಿ ಪಡೆದುಕೊಂಡಿದ್ದರು.