ಪೂಜಾ ಬೇಡಿ ವೆಬ್‌ಸೈಟ್ ಹ್ಯಾಕ್: ಡ್ರಗ್ಸ್ ಮಾರುವುದಾಗಿ ದುಷ್ಕರ್ಮಿಗಳಿಂದ ಬೆದರಿಕೆ!

ಬಾಲಿವುಡ್ ನಟಿ ಪೂಜಾ ಬೇಡಿ ಅವರ ವೆಬ್‌ಸೈಟ್‌ ಹ್ಯಾಕ್ ಆಗಿದ್ದು, ಡ್ರಗ್ಸ್ ಮಾರುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರಂತೆ. ಈ ಸಂಬಂಧ ಗೋವಾ ಸೈಬರ್ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಟ್ವಿಟ್ಟರ್ ಮೂಲಕ ಪೂಜಾ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ವ್ಯವಹಾರಿಕ ಉದ್ದೇಶದಿಂದ ಬಳಸುತ್ತಿರುವ happysoul.in ಹೆಸರಿನ ವೆಬ್‌ಸೈಟ್‌ ಹ್ಯಾಕ್ ಆಗಿದೆ. ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಒಂದು ವೇಳೆ ಹಣ ನೀಡದಿದ್ದರೆ ವೆಬ್‌ಸೈಟ್ ಮೂಲಕ ಡ್ರಗ್ಸ್ ಮಾರಾಟ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪೂಜಾ ಬೇಡಿ, ಗೋವಾ ಪೊಲೀಸ್ ಮಹಾನಿರ್ದೇಶಕ ಹಾಗೂ ಸಿಎಂ ಪ್ರಮೋದ್ ಸಾವಂತ್ ಅವರನ್ನು ಟ್ಯಾಗ್ ಮಾಡಿ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

Actress Pooja Bedis E commerce website hacked

ಕಳೆದ ವಾರವೇ ಪೂಜಾ ಬೇಡಿ ವೆಬ್‌ಸೈಟ್ ಹ್ಯಾಕ್ ಆಗಿದೆ. ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಒಂದು ವಾರದ ನಂತರ ಮತ್ತೆ ವೆಬ್‌ಸೈಟ್ ಹ್ಯಾಕ್ ಆಗಿದ್ದು, ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಇಂಡಸ್ಟ್ರಿಯಿಂದ ಸ್ವಲ್ಪ ಮಟ್ಟಿಗೆ ಅಂತರ ಕಾಯ್ದುಕೊಂಡಿರುವ ಪೂಜಾ ಬೇಡಿ ಪ್ರಸ್ತುತ ಪತಿಯ ಜೊತೆ ಗೋವಾದಲ್ಲಿ ವಾಸವಾಗಿದ್ದಾರೆ.

More from Filmibeat

English summary
Actress Pooja Bedi's e-commerce website hacked. Hackers demand ransom or threaten to sell drugs on the website. Complaint filed at OldGoa police station.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X