For Quick Alerts
  ALLOW NOTIFICATIONS  
  For Daily Alerts

  ನಟಿ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್

  |

  ಖ್ಯಾತ ನಟಿ, ಕನ್ನಡತಿ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್ ವರಿದೆ ಬಂದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿರುವ ನಟಿ ಪೂಜಾ ಹೆಗ್ಡೆ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

  ಈ ಬಗ್ಗೆ ಪೂಜಾ ಸಾಮಾಜಿಕ ಜಾಲತಾಣದಲ್ಲಿ, 'ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಎಲ್ಲಾ ನಿಯಮಗಳನ್ನು ಪಾಲಿಸುತ್ತಿದ್ದು, ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೀನಿ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಹೇಳಿದ್ದಾರೆ.

  ದಳಪತಿ ವಿಜಯ್ ಜೊತೆ ನಟಿಸಲು ಪೂಜಾ ಹೆಗ್ಡೆ ಇಷ್ಟೊಂದು ಸಂಭಾವನೆ ಪಡೆಯುತ್ತಿದ್ದಾರಾ?ದಳಪತಿ ವಿಜಯ್ ಜೊತೆ ನಟಿಸಲು ಪೂಜಾ ಹೆಗ್ಡೆ ಇಷ್ಟೊಂದು ಸಂಭಾವನೆ ಪಡೆಯುತ್ತಿದ್ದಾರಾ?

  'ಈ ಸಮಯದಲ್ಲಿ ಬೆಂಬಲ ನೀಡಿದ ಮತ್ತು ಪ್ರೀತಿ ತೋರಿದ ಪ್ರತಿಯೋಬ್ಬರಿಗೂ ಧನ್ಯವಾದಗಳು. ಸದ್ಯ ಚೇತರಿಸಿಕೊಳ್ಳುತ್ತಿದ್ದೀನೆ. ಎಲ್ಲರೂ ಸುರಕ್ಷಿತವಾಗಿರಿ' ಎಂದು ಬರೆದುಕೊಂಡಿದ್ದಾರೆ. ಪೂಜಾಗೆ ಅಭಿಮಾನಿಗಳು, ಸ್ನೇಹಿತರು ಬೇಗ ಗುಣಮುಖರಾಗಿ ಎಂದು ಹಾರೈಸುತ್ತಿದ್ದಾರೆ.

  ನಟಿ ಪೂಜಾ ಹೆಗ್ಡೆ ಇತ್ತೀಚಿಗೆ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಚಿತ್ರದಲ್ಲಿ ರಾಮ್ ಚರಣ್‌ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಆಚಾರ್ಯ ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿರುವ ನಟ ಸೋನು ಸೂದ್ ಇತ್ತೀಚಿಗಷ್ಟೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಇದೀಗ ಗಣಮುಖರಾಗಿದ್ದಾರೆ.

  ಪೂಜಾ ಹೆಗ್ಡೆ ಸದ್ಯ ದಳಪತಿ ವಿಜಯ್ ನಟನೆಯ ಇನ್ನು ಹೆಸರಿಡದ ದಳಪತಿ 65 ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇತ್ತೀಚಿಗೆ ದಳಪತಿ ಮತ್ತು ತಂಡ ಜಾರ್ಜಿಯಾಗೆ ಶೂಟಿಂಗೆಂದು ತೆರಳಿದ್ದರು. ಆದರೆ ಪೂಜಾ ಹೆಗ್ಡೆ ಹೋಗಿರಲಿಲ್ಲ. ಕೇವಲ ವಿಜಯ್ ಭಾಗದ ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದಾರೆ. ಸದ್ಯ ಹೆಚ್ಚುತ್ತಿರುವ ಕೊರೊನಾದಿಂದ ಸಿನಿ ಕೆಲಸಗಳು ಸ್ಥಗಿತವಾಗಿವೆ.

  ಕೊರೊನಾದಿಂದ ಜನ ಸಾಯ್ತಿಲ್ಲ ಸರ್ಕಾರದ ವ್ಯವಸ್ಥೆಯಿಂದ ಜನ ಸಾಯ್ತಿದ್ದಾರೆ | Oneindia Kannada

  ಇತ್ತೀಚಿಗೆ ಸಾಕಷ್ಟು ಸಿನಿ ಸೆಲೆಬ್ರಿಟಿಗಳಿಗೆ ಕೊರೊನಾ ಸೋಂಕು ತಗುಲಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದಿದ್ದರು. ಬಾಲಿವುಡ್ ಕಲಾವಿದರಾದ ಕತ್ರಿನಾ ಕೈಫ್, ಅಲಿಯಾ ಭಟ್, ರಣಬೀರ್ ಕಪೂರ್, ಅಕ್ಷಯ್ ಕುಮಾರ್, ಆಮೀರ್ ಖಾನ್ ಸೇರಿದಂತೆ ಅನೇಕರಿಗೆ ಕೊರೊನಾ ಸೋಂಕು ತಗುಲಿದ್ದು, ಗುಣಮುಖರಾಗಿದ್ದಾರೆ.

  English summary
  Actress Pooja Hegde tests positive for corona, she is in home quarantine.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X