For Quick Alerts
  ALLOW NOTIFICATIONS  
  For Daily Alerts

  ಮಲಯಾಳಂ ಸಿನಿಮಾದ ರಿಮೇಕ್ ನಲ್ಲಿ ಅಕ್ಷಯ್ ಕುಮಾರ್; ಸಾಥ್ ನೀಡಿದ ಇಮ್ರಾನ್ ಹಶ್ಮಿ

  |

  ದಕ್ಷಿಣ ಭಾರತದ ಅನೇಕ ಸಿನಿಮಾಗಳು ಹಿಂದಿಗೆ ರಿಮೇಕ್ ಆಗುತ್ತಿವೆ. ಈಗಾಗಲೇ ಸಾಕಷ್ಟು ಸಿನಿಮಾಗಳು ರಿಮೇಕ್ ಆಗಿ ಬಿಡುಗಡೆಯಾಗಿದ್ದು, ಸೂಪರ್ ಹಿಟ್ ಆಗಿವೆ. ಇದೀಗ ಮತ್ತೊಂದು ದಕ್ಷಿಣದ ಸಿನಿಮಾ ಬಾಲಿವುಡ್ ಕಡೆ ಮುಖ ಮಾಡಿದೆ. ಮಲಯಾಳಂನ 'ಡ್ರೈವಿಂಗ್ ಲೈಸೆನ್ಸ್' ಸಿನಿಮಾ ಹಿಂದಿಯಲ್ಲಿ ರಿಮೇಕ್ ಆಗುತ್ತಿದ್ದು, ಅಕ್ಷಯ್ ಕುಮಾರ್ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

  ಮಲಯಾಳಂ ರಿಮೇಕ್ ಸಿನಿಮಾಗೆ ಕರಣ್ ಜೋಹರ್ ಧರ್ಮ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. ರಾಜ್ ಮೆಹ್ತಾ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಅಂದಹಾಗೆ ರಾಜ್ ಮೆಹ್ತಾ ಮತ್ತು ಅಕ್ಷಯ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಈಗಾಗಲೇ ಈ ಜೋಡಿ ಗುಡ್ ನ್ಯೂಸ್ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಇದೀಗ ಮತ್ತೊಮ್ಮೆ ಒಂದಾಗಿದ್ದು, ಅಭಿಮಾನಿಗಳನ್ನು ಮೋಡಿ ಮಾಡಲು ಸಜ್ಜಾಗಿದೆ.

  ಅಂದಹಾಗೆ ಅಕ್ಷಯ್ ಕುಮಾರ್ ಹೊಸ ಸಿನಿಮಾದಲ್ಲಿ ಬಾಲಿವುಡ್ ನ ಮತ್ತೋರ್ವ ಖ್ಯಾತ ನಟ ಇಮ್ರಾನ್ ಹಶ್ಮಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಇಮ್ರಾನ್ ಹಶ್ಮಿ ಈಗಾಗಲೇ ಸಲ್ಮಾನ್ ಖಾನ್ ನಟನೆಯ ಟೈಗರ್-3 ಸಿನಿಮಾದಲ್ಲಿ ಮಿಲನ್ ಆಗಿ ಅಬ್ಬರಿಸುತ್ತಿದ್ದಾರೆ. ಇದೀಗ ಅಕ್ಷಯ್ ಕುಮಾರ್ ಸಿನಿಮಾದಲ್ಲೂ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

  ಮಲಯಾಳಂನ ಡ್ರೈವಿಂಗ್ ಲೈಸೆನ್ಸ್ ಸಿನಿಮಾ 2019ರಲ್ಲಿ ತೆರೆಗೆ ಬಂದಿದೆ. ಚಿತ್ರದಲ್ಲಿ ಪೃಥ್ವಿರಾಜ್ ಮತ್ತು ಸೂರಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಚಿತ್ರದಲ್ಲಿ ಪೃಥ್ವಿರಾಜ್ ಸೂಪರ್ ಸ್ಟಾರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸೂರಜ್ ಅಭಿಮಾನಿಯ ಪಾತ್ರದಲ್ಲಿ ನಟಿಸಿದ್ದರು. ಬಳಿಕ ಇವರು ದೊಡ್ಡ ವೈರಿಗಳಾಗುವ ಕಥೆ ಇದಾಗಿದೆ. ಹಿಂದಿ ರಿಮೇಕ್ ನಲ್ಲಿ ಪೃಥ್ವಿರಾಜ್ ನಿಭಾಯಿಸಿದ್ದ ಸೂಪರ್ ಸ್ಟಾರ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ, ಸೂರಜ್ ಪಾತ್ರದಲ್ಲಿ ಇಮ್ರಾನ್ ಹಶ್ಮಿ ನಟಸಲಿದ್ದಾರೆ ಎನ್ನಲಾಗುತ್ತಿದೆ.

  ಈ ಸಿನಿಮಾ ಜನವರಿಯಲ್ಲಿ ಪ್ರಾರಂಭವಾಗಲಿದ್ದು, 40 ದಿನಗಳಲ್ಲೇ ಚಿತ್ರೀಕರಣ ಮುಗಿಸುವ ಪ್ಲಾನ್ ಮಾಡಿದ್ದಾರೆ. ಆದರೆ ಈ ಬಗ್ಗೆ ಇಮ್ರಾನ್ ಹಶ್ಮಿ ಅಥವಾ ಅಕ್ಷಯ್ ಕುಮಾರ್ ಕಡೆಯಿಂದ ಇನ್ನು ಅಧಿಕೃತ ಘೋಷಣೆಯಾಗಿಲ್ಲ. ಅಕ್ಷಯ್ ಕುಮಾರ್ ಈಗಾಗಲೇ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೂರ್ಯವಂಶಿ, ಅತ್ತ್ರಂಗಿ ರೇ, ಪೃಥ್ವಿರಾಜ್, ರಕ್ಷಾ ಬಂಧನ್, ರಾಮ್ ಸೇತು ಸೇರಿದಂತೆ ಅನೇಕ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ. ಈ ಎಲ್ಲಾ ಸಿನಿಮಾಗಳ ಜೊತೆಗೆ ಅಕ್ಷಯ್ ಕುಮಾರ್ ಇದೀಗ ಮಲಯಾಳಂ ರಿಮೇಕ್ ನಲ್ಲೂ ನಟಿಸಲು ಸಜ್ಜಾಗಿದ್ದಾರೆ.

  English summary
  Bollywood Actors Akshay kumar and Emraan Hashmi team up for remake of Malayalam.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X