ದೀಪಾವಳಿಯ ದಿನ ರಾಮನಾಗಿ ಎಂಟ್ರಿ ಕೊಟ್ಟ ಅಕ್ಷಯ್ ಕುಮಾರ್
ಬಾಲಿವುಡ್ ನಟ ಅಕ್ಷಯ ಕುಮಾರ್ ಮತ್ತೊಂದು ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅಕ್ಷಯ್ ದೀಪಾವಳಿಗೆ ಹೊಸ ಸಿನಿಮಾ ಘೋಷಣೆ ಮಾಡಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಅಂದ್ಹಾಗೆ ಅಕ್ಷಯ್ ಕುಮಾರ್ ಹೊಸ ಸಿನಿಮಾಗೆ ರಾಮ್ ಸೇತು ಎಂದು ಟೈಟಲ್ ಇಡಲಾಗಿದೆ.
ಟೈಟಲ್ ಜೊತೆಗೆ ಅಕ್ಷಯ್ ಕುಮಾರ್ ಲುಕ್ ಅನ್ನು ರಿವೀಲ್ ಮಾಡಲಾಗಿದೆ. ಉದ್ದ ಕೂದಲು ಬಿಟ್ಟಿರುವ ಅಕ್ಷಯ್ ಕುಮಾರ್, ಕುತ್ತಿಗೆಗೆ ಕೇಸರಿ ಶಾಲು ಸುತ್ತಿಕೊಂಡು, ಬುಜಕ್ಕೆ ಉದ್ದವಾದ ಬ್ಯಾಗ್ ಹಾಕಿಕೊಂಡು ಹೋಗುತ್ತಿರುವ ಅಕ್ಷಯ್ ಲುಕ್ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ಪೋಸ್ಟರ್ ನ ಬ್ಯಾಕ್ ಡ್ರಾಪ್ ನಲ್ಲಿ ಬಿಲ್ಲು ಬಾಣ ಹಿಡಿದು ಹೊರಟಿರುವ ರಾಮನ ಚಿತ್ರವಿದೆ. ಮುಂದೆ ಓದಿ..

ಪೋಸ್ಟರ್ ಶೇರ್ ಮಾಡಿ ಅಕ್ಷಯ್ ಕುಮಾರ್ ಹೇಳಿದ್ದೇನು?
ಈ ಪೋಸ್ಟರ್ ಶೇರ್ ಮಾಡಿ ಅಕ್ಷಯ್ ಕುಮಾರ್, 'ಈ ದೀಪಾವಳಿ, ಮುಂದಿನ ಪೀಳಿಗೆಗಳನ್ನು ಸಂಪರ್ಕಿಸುವ ಸೇತುವೆ ಹಾಗೆ ಎಲ್ಲಾ ಭಾರತೀಯರಲ್ಲೂ ರಾಮನ ಆದರ್ಶಗಳನ್ನು ಜೀವಂತವಾಗಿಡಲು ಪ್ರಯತ್ನಿಸೋಣ. ಈ ಮಹತ್ತರವಾದ ಕಾರ್ಯವನ್ನು ಮುಂದೆ ತೆಗೆದುಕೊಂಡು ಬರ್ತಿದ್ದೇವೆ, ನಮ್ಮ ವಿನಮ್ರ ಪ್ರಯತ್ನ ಇಲ್ಲಿದೆ. ರಾಮ್ ಸೇತು. ನಿಮಗೆಲ್ಲ ದೀಪಾವಳಿ ಹಬ್ಬದ ಶುಭಾಶಯಗಳು' ಎಂದಿದ್ದಾರೆ.

ಲಕ್ಷ್ಮೀ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ
ಅಕ್ಷಯ್ ಕುಮಾರ್ ಇತ್ತೀಚಿಗಷ್ಟೆ ಲಕ್ಷ್ಮೀ ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಅಕ್ಷಯ್ ಕುಮಾರ್ ಅಭಿನಯದ ಮೊದಲ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಲಾಕ್ ಡೌನ್ ಬಳಿಕ ಬೆಲ್ ಬಾಟಂ ಸಿನಿಮಾ ಮುಗಿಸಿರುವ ಅಕ್ಷಯ್
ಈ ನಡುವೆ ಅಕ್ಷಯ್ ಕುಮಾರ್ ಬೆಲ್ ಬಾಟಮ್ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಲಾಕ್ ಡೌನ್ ಬಳಿಕ ಸಿನಿಮಾ ಚಿತ್ರೀಕರಣ ಪ್ರಾರಂಭ ಮಾಡಿದ್ದ 'ಬೆಲ್ ಬಾಟಂ' ತಂಡ ಆಗಲೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.
Recommended Video

ಅಕ್ಷಯ್ ಕುಮಾರ್ ಬಳಿ ಇರುವ ಸಿನಿಮಾಗಳು
ಇದೀಗ ಪೃಥ್ವಿರಾಜ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅಕ್ಷಯ್ ಕುಮಾರ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಮಾನುಷಿ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾ ಜೊತೆಗೆ ಅಕ್ಷಯ್ ಕುಮಾರ್ ಬಚ್ಚನ್ ಪಾಂಡೆ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ಪ್ರಾರಂಭವಾಗುವ ಸಾಧ್ಯತೆ ಇದೆ. ಇನ್ನೂ ಸೂರ್ಯವಂಶಿ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಮುಂದಿನ ವರ್ಷ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ. ಇನ್ನು ಹೆಸರಿಡದ ಮುದಾಸ್ಸರ್ ಅಜೀಜ್ ನಿರ್ದೇಶನ ಚಿತ್ರದಲ್ಲೂ ನಟಿಸುತ್ತಿದ್ದಾರೆ.


Click it and Unblock the Notifications











