For Quick Alerts
  ALLOW NOTIFICATIONS  
  For Daily Alerts

  ಹೋಮ್ ಕ್ವಾರಂಟೈನ್ ನಲ್ಲಿದ್ದ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು

  |

  ಬಾಲಿವುಡ್ ನಟ ಅಕ್ಷಯ್ ಕುಮಾರ್‌ಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಇಂದು (ಏಪ್ರಿಲ್ 5) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಸೋಂಕು ತಗುಲಿರುವ ಬಗ್ಗೆ ಅಕ್ಷಯ್ ಕುಮಾರ್ ನಿನ್ನೆ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಮನೆಯಲ್ಲೇ ಕ್ವಾರಂಟೈನ್ ಆಗಿರುವುದಾಗಿ ಹೇಳಿದ್ದರು.

  ಆದರೆ ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಸ್ವತಃ ಅಕ್ಷಯ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. 53 ವರ್ಷದ ನಟ ಅಕ್ಷಯ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ, 'ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗೆ ಧನ್ಯವಾದಗಳು. ನಾನು ಆರಾಮಾಗಿ ಇದ್ದೀನಿ. ಆದರೆ ಮುನ್ನೆಚ್ಚರಿಕೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸದ್ಯದಲ್ಲೇ ಮನೆಗೆ ಮರಳುತ್ತೇನೆ' ಎಂದು ಹೇಳಿದ್ದಾರೆ.

  ಅಕ್ಷಯ್ ಕುಮಾರ್ ಬಳಿಕ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಕೊರೊನಾಅಕ್ಷಯ್ ಕುಮಾರ್ ಬಳಿಕ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಕೊರೊನಾ

  ನಿನ್ನೆ (ಏಪ್ರಿಲ್ 4) ಕೊರೊನಾ ಪಾಸಿಟಿವ್ ಬಂದ ಬಳಿಕ ಅಕ್ಷಯ್ ಟ್ವೀಟ್ ಮಾಡಿ, 'ಇಂದು ಬೆಳಗ್ಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನನಗೆ ಪಾಸಿಟಿವ್ ಬಂದಿದೆ. ತಕ್ಷಣ ನಾನು ಐಸೋಲೆಟ್ ಆಗಿದ್ದೇನೆ. ಹೋಮ್ ಕ್ವಾರಂಟೈನ್‌ನಲ್ಲಿದ್ದು, ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷಿಸಿ, ಬೇಗ ಗುಣಮುಖನಾಗಿ ಬರುತ್ತೇನೆ' ಎಂದು ಟ್ವೀಟ್ ಮಾಡಿದ್ದರು.

  ಅಕ್ಷಯ್ ಕುಮಾರ್ ಸದ್ಯ ರಾಮ್ ಸೇತು ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ. ಸದ್ಯ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ.

  ಬಾಲಿವುಡ್ ಅನೇಕ ನಟ-ನಟಿಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಎರಡು ದಿನಗಳಲ್ಲಿ ಸಾಕಷ್ಟು ಕಲಾವಿದರೂ ಸೋಂಕಿಗೆ ತುತ್ತಾಗಿದ್ದಾರೆ. ಇಂದು ಬಾಲಿವುಡ್ ನಟ ವಿಕ್ಕಿ ಕೌಶಲ್, ಭೂಮಿ ಪಡ್ನೇಕರ್‌ಗೆ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

  English summary
  Bollywood Actor Akshay Kumar hospitalized after testing Covid 19 positive.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X