ಅಕ್ಷಯ್ ಕುಮಾರ್ 'ಬೆಲ್ ಬಾಟಂ' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ನಟ ಎನ್ನುವುದು ಎಲ್ಲರಿಗೂ ಗೊತ್ತಿದೆ. ವರ್ಷಕ್ಕೆ ಮೂರ್ನಾಲ್ಕು ಸಿನಿಮಾಗಳ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದ ಅಕ್ಷಯ್ ಕಳೆದ ವರ್ಷ ಕೊರೊನಾದಿಂದ ಯಾವ ಸಿನಿಮಾಗಳು ಚಿತ್ರಮಂದಿರಕ್ಕೆ ಎಂಟ್ರಿ ಕೊಟ್ಟಿಲ್ಲ.

ಆದರೂ ಲಕ್ಷ್ಮಿ ಸಿನಿಮಾ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು. ಕಳೆದ ವರ್ಷ ರಿಲೀಸ್ ಆಗಬೇಕಿದ್ದ ಸಿನಿಮಾಗಳು ಈ ವರ್ಷ ತೆರೆಗೆ ಬರುತ್ತಿದೆ. ಅಕ್ಷಯ್ ನಟನೆಯ ಬಹುನಿರೀಕ್ಷೆಯ ಬೆಲ್ ಬಾಟಂ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ರಾ ಏಜೆಂಟ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಕ್ಷಯ್ ಅವರ ಬೆಲ್ ಬಾಟಂ ಸಿನಿಮಾ ಮೇ 28ರಂದು ತೆರೆಗೆ ಬರುತ್ತಿದೆ.

ಅಕ್ಷಯ್ ಕುಮಾರ್ ಬೆಲ್ ಬಾಟಂ ಸಿನಿಮಾ ಅನೌನ್ಸ್ ಆಗುತ್ತಿದ್ದಂತೆ ಕನ್ನಡ ಸಿನಿಮಾದ ರಿಮೇಕ್ ಎನ್ನುವ ಮಾತು ಕೇಳಿಬಂದಿತ್ತು. ಆದರೆ ಯಾವುದೇ ಸಿನಿಮಾದ ರಿಮೇಕ್ ಅಲ್ಲ ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡುವ ಮೂಲಕ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ್ದರು.

Akshay kumar starrer Bell Bottom movie to release on May 28

ಬೆಲ್ ಬಾಟಂ ಸಿನಿಮಾ 1980ರಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಲಾಕ್ ಡೌನ್ ಬಳಿಕ ಅಕ್ಷಯ್ ಕುಮಾರ್ ಚಿತ್ರೀಕರಣ ಪ್ರಾರಂಭ ಮಾಡಿದ್ದು, ಕೊರೊನಾ ನಡುವೆಯು ವಿದೇಶಕ್ಕೆ ಹೋಗಿ ಚಿತ್ರೀಕರಣ ಮಾಡಿ ವಾಪಸ್ ಆಗಿದ್ದರು.

ಹೆಸರೇ ಹೇಳುವ ಹಾಗೆ ಚಿತ್ರದಲ್ಲಿ ಅಕ್ಷಯ್ ಕುಮಾರ್ ರೆಟ್ರೋ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಕ್ಷಯ್ ಕುಮಾರ್ ಗೆ ನಾಯಕಿಯಾಗಿ ವಾಣಿ ಕಪೂರ್ ನಟಿಸಿದ್ದಾರೆ. ಅಂದಹಾಗೆ ಬೆಲ್ ಬಾಟಂ ಸಿನಿಮಾ ಈ ಮೊದಲು ಏಪ್ರಿಲ್ ನಲ್ಲಿ ರಿಲೀಸ್ ಗೆ ರೆಡಿಯಾಗಿತ್ತು. ಆದರೆ ಕೊರೊನಾದಿಂದ ಅನೇಕ ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆಯ ಕಾರಣ ಬೆಲ್ ಬಾಟಂ ಸಿನಿಮಾ ಕೂಡ ಮುಂದಕ್ಕೆ ಹೋಗಿದ್ದು, ಮೇ ತಿಂಗಳಲ್ಲಿ ತೆರೆಗೆ ಬರುತ್ತಿದೆ.

Recommended Video

ಶಿವಣ್ಣನ ಮಾತಿಗೆ ವಿರುದ್ಧವಾಗಿ ನಡೆದುಕೊಂಡ ಧ್ರುವ ಸರ್ಜಾ | Filmibeat Kannada

More from Filmibeat

English summary
Bollywood Akshay kumar starrer Bell Bottom movie to release on May 28.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X