ಅಮಿತಾಬ್ ಬಚ್ಚನ್‌ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ವೈರಸ್ ಪಾಸಿಟಿವ್

ಬಾಲಿವುಡ್‌ನ ಖ್ಯಾತ ಹಿರಿಯ ನಟ ಬಿಗ್‌ ಬಿ ಅಮಿತಾಬ್ ಬಚ್ಚನ್ ಶನಿವಾರ ಅನಾರೋಗ್ಯಕ್ಕೆ ಒಳಗಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

77 ವರ್ಷದ ನಟ ಅಮಿತಾಬ್ ಅವರನ್ನು ಶನಿವಾರ ಸಂಜೆ ಮುಂಬೈನ ನಾನಾವತಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಮಾಹಿತಿಯನ್ನು ಸ್ವತಃ ಅಮಿತಾಬ್ ಬಚ್ಚನ್ ಖಚಿತಪಡಿಸಿದ್ದಾರೆ. ತಂದೆಯ ಜತೆಗೆ ಕೊರೊನಾ ವೈರಸ್ ಪರೀಕ್ಷೆಗೆ ಒಳಪಟ್ಟ ಅಭಿಷೇಕ್ ಬಚ್ಚನ್ ಅವರಲ್ಲಿಯೂ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರಿಂದ ಜಯಾ ಬಚ್ಚನ್, ಐಶ್ವರ್ಯಾ ರೈ ಬಚ್ಚನ್, ಆರಾಧ್ಯಾ ಸೇರಿದಂತೆ ಬಚ್ಚನ್ ಅವರ ಇಡೀ ಕುಟುಂಬ ಆತಂಕಕ್ಕೆ ಸಿಲುಕಿದೆ.

ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾದ ಸಂಗತಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ಬಳಿಕ ಅಭಿಮಾನಿಗಳು ಆತಂಕಗೊಂಡಿದ್ದರು. ಅವರ ಅನಾರೋಗ್ಯಕ್ಕೆ ಕಾರಣ ಗೊತ್ತಾಗಿರಲಿಲ್ಲ. ಆದರೆ ರಾತ್ರಿ ವೇಳೆ ಅಮಿತಾಬ್ ಟ್ವೀಟ್ ಮಾಡಿದ್ದು, ತಮಗೆ ಕೊರೊನಾ ವೈರಸ್ ಸೋಂಕು ಇರುವುದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ. ಮುಂದೆ ಓದಿ...

ನನಗೆ ಪಾಸಿಟಿವ್ ಬಂದಿದೆ

ನನಗೆ ಪಾಸಿಟಿವ್ ಬಂದಿದೆ

'ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಕುಟುಂಬದವರು ಮತ್ತು ಸಿಬ್ಬಂದಿ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಆಸ್ಪತ್ರೆಯವರು ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಾರೆ. ಅವರ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ' ಎಂದು ಅಮಿತಾಬ್ ತಿಳಿಸಿದ್ದಾರೆ.

ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿ

ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿ

'ಕಳೆದ ಹತ್ತು ದಿನಗಳಿಂದ ನನ್ನ ನಿಕಟ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ದಯವಿಟ್ಟು ಸ್ವತಃ ತೆರಳಿ ಕೊರೊನಾ ವೈರಸ್ ತಪಾಸಣೆಗೆ ಒಳಪಡುವಂತೆ ಮನವಿ ಮಾಡುತ್ತೇನೆ' ಎಂದು ಅಮಿತಾಬ್ ಬಚ್ಚನ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಅಮಿತಾಬ್ ಅವರಲ್ಲಿ ಕೊರೊನಾ ವೈರಸ್‌ನ ತೀವ್ರ ಲಕ್ಷಣಗಳು ಕಂಡುಬಂದಿಲ್ಲ. ಸಣ್ಣಪುಟ್ಟ ಲಕ್ಷಣಗಳು ಮಾತ್ರ ಕಾಣಿಸಿವೆ ಎಂದು ವರದಿಯಾಗಿದ್ದು, ಅವರ ಅಭಿಮಾನಿಗಳಲ್ಲಿ ನೆಮ್ಮದಿ ಮೂಡಿಸಿದೆ.

ಅಭಿಮಾನಿಗಳು ಹಾರೈಕೆ

ಅಭಿಮಾನಿಗಳು ಹಾರೈಕೆ

ಅಮಿತಾಬ್ ಬಚ್ಚನ್ ಅವರ ಕುಟುಂಬದ ಸದಸ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಕೊರೊನಾ ವೈರಸ್ ತಪಾಸಣೆಗೆ ಒಳಗಾಗಿದ್ದಾರೆ. ಅಮಿತಾಬ್ ಅವರಿಗೆ ಕೊರೊನಾ ವೈರಸ್ ಇರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಮಕ್ಕಳ ಜತೆಗೆ ಫೋಟೊ

ಮಕ್ಕಳ ಜತೆಗೆ ಫೋಟೊ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಅಮಿತಾಬ್, ಶುಕ್ರವಾರವಷ್ಟೇ ಮಗಳು ಶ್ವೇತಾ ಮತ್ತು ಮಗ ಅಭಿಷೇಕ್ ಜತೆಗಿನ ಫೋಟೊ ಹಂಚಿಕೊಂಡಿದ್ದರು. ಅಮಿತಾಬ್ ಬಚ್ಚನ್ ಅವರು ಆಯುಷ್ಮಾನ್ ಖುರಾನಾ ಜತೆ ಕೊನೆಯದಾಗಿ 'ಗುಲಾಬೋ ಸಿತಾಬೋ' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರ, ಕೊರೊನಾ ವೈರಸ್ ಕಾರಣದಿಂದ ಒಟಿಟಿ ಮೂಲಕ ತೆರೆಕಂಡಿತ್ತು.

ಕರೋಡ್ ಪತಿ ಕಾರ್ಯಕ್ರಮ

ಕರೋಡ್ ಪತಿ ಕಾರ್ಯಕ್ರಮ

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮುಖ್ಯ ಪಾತ್ರಗಳಲ್ಲಿರುವ ಅಯಾನ್ ಮುಖರ್ಜಿ ನಿರ್ದೇಶನದ 'ಬ್ರಹ್ಮಾಸ್ತ್ರ' ಚಿತ್ರದಲ್ಲಿ ಅವರು ನಟಿಸುತ್ತಿದ್ದರು. ಚೆಹ್ರೆ ಮತ್ತು ಝುಂಡ್ ಚಿತ್ರಗಳಲ್ಲಿಯೂ ಅವರು ಅಭಿನಯಿಸುತ್ತಿದ್ದಾರೆ.
ಇದರ ಜತೆಗೆ ಜನಪ್ರಿಯ ಕಾರ್ಯಕ್ರಮ 'ಕೌನ್ ಬನೇಗಾ ಕರೋಡ್‌ಪತಿ'ಯ 12ನೇ ಸೀಸನ್‌ಗೆ ಕೆಲಸ ಮಾಡಲು ಅಮಿತಾಬ್ ತಯಾರಿ ಮಾಡಿಕೊಳ್ಳುತ್ತಿದ್ದರು. ಆದರೆ ಹಿರಿಯ ನಾಗರಿಕರ ಮೇಲೆ ಸರ್ಕಾರದ ಲಾಕ್ ಡೌನ್ ನಿಯಮಗಳು ಅನ್ವಯವಾಗುವುದರಿಂದ ಅವರು ಅಲ್ಲಿಗೆ ತೆರಳಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.

More from Filmibeat

English summary
Bollywood veteran actor Amitabh Bachchan has been admitted to Mumbai's Nanavati hospital on Saturday evening.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X