For Quick Alerts
  ALLOW NOTIFICATIONS  
  For Daily Alerts

  ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವ ಮೆಗಾಸ್ಟಾರ್ ಅಮಿತಾಭ್ ಬಚ್ಚನ್

  |

  ಬಾಲಿವುಡ್ ಇಂಡಸ್ಟ್ರಿಯ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿರುವುದರಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಈ ಮಾಹಿತಿಯನ್ನು ಖುದ್ದು ಅಮಿತಾಭ್ ಶನಿವಾರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

  78 ವರ್ಷದ ಬಿಗ್‌ ಬಿ ಶನಿವಾರ ರಾತ್ರಿ ತಮ್ಮ ಬ್ಲಾಗ್‌ನಲ್ಲಿ ''ವೈದ್ಯಕೀಯ ಸ್ಥಿತಿ .. ಶಸ್ತ್ರಚಿಕಿತ್ಸೆ .. ಬರೆಯಲು ಸಾಧ್ಯವಿಲ್ಲ." ಎಂದು ಪ್ರಕಟಿಸಿಕೊಂಡಿದ್ದಾರೆ. ಆದರೆ, ಆರೋಗ್ಯದಲ್ಲಿ ಏನಾಗಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.

  ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಆದ ಗ್ಲೋಬಲ್ ಸ್ಟಾರ್ ಪಟ್ಟಿಯಲ್ಲಿ ಅಮಿತಾಭ್ ಬಚ್ಚನ್ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಆದ ಗ್ಲೋಬಲ್ ಸ್ಟಾರ್ ಪಟ್ಟಿಯಲ್ಲಿ ಅಮಿತಾಭ್ ಬಚ್ಚನ್

  ಅಮಿತಾಭ್ ಬಚ್ಚನ್ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಬಿಗ್ ಬಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಅಮಿತಾಭ್ ಅವರಿಗೆ ಏನಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂಕಟ ವ್ಯಕ್ತಪಡಿಸುತ್ತಿದ್ದಾರೆ.

  ಕಳೆದ ವರ್ಷ ಜುಲೈ ತಿಂಗಳಲ್ಲಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ವೈರಸ್ ತಗುಲಿದ ಹಿನ್ನೆಲೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಕೊರೊನಾ ನೆಗಿಟಿವ್ ಆದ ಬಳಿಕ ಮನೆಗೆ ಬಂದಿದ್ದರು.

  ಕೊವಿಡ್‌ನಿಂದ ಸಂಪೂರ್ಣವಾಗಿ ಚೇತರಿಕೆ ಕಂಡ ಬಳಿಕ 'ಕೌನ್ ಬನೇಗಾ ಕರೋಡ್ ಪತಿ' ಕಾರ್ಯಕ್ರಮದ ನಿರೂಪಣೆಯಲ್ಲಿ ಬಿಗ್ ಬಿ ತೊಡಗಿಸಿಕೊಂಡಿದ್ದರು.

  ಅಮಿತಾಭ್ ಬಚ್ಚನ್ ಚಿತ್ರದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಪಡೆದ ಸಂಭಾವನೆ ಇಷ್ಟೊಂದಾ?ಅಮಿತಾಭ್ ಬಚ್ಚನ್ ಚಿತ್ರದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಪಡೆದ ಸಂಭಾವನೆ ಇಷ್ಟೊಂದಾ?

  Recommended Video

  ಉ.ಕರ್ನಾಟಕದ ಜನ ಮಾಡಿದ ಸಹಾಯ ನೆನಪಿಸಿಕೊಂಡ ಡಿ ಬಾಸ್ | Roberrt Pre Release Event Hubli | Filmibeat Kannada

  ಶೂರ್ಜಿತ್ ಸರ್ಕಾರ್ ಅವರ ಚಿತ್ರ ಗುಲಾಬೋ ಸಿತಾಬೋ ಚಿತ್ರದಲ್ಲಿ ಕೊನೆಯದಾಗಿ ಅಮಿತಾಭ್ ಬಚ್ಚನ್ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಆಯುಷ್ಮಾನ್ ಖುರಾನ್ ಪ್ರಮುಖ ಪಾತ್ರ ಮಾಡಿದ್ದರು. ಚೆಹ್ರೆ ಹಾಗೂ ಬ್ರಹ್ಮಾಸ್ತ್ರ ಸಿನಿಮಾಗಳಲ್ಲಿಯೂ ಬಿಗ್ ಬಿ ನಟಿಸಿದ್ದು, ಬಿಡುಗಡೆಯಾಗಬೇಕಿದೆ.

  English summary
  Bollywood superstar Amitabh Bachchan will undergo a surgery due to a medical condition.
  Sunday, February 28, 2021, 22:03
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X