ಬಾಲಿವುಡ್ ನಟ ಸೋನು ಸೂದ್‌ಗೆ ಸಂಕಷ್ಟ; ಎದುರಾಯಿತು ಬಂಧನ ಭೀತಿ
ನಟನೆಯಿಂದ ಮಾತ್ರವಲ್ಲದೇ ತಮ್ಮ ಸಮಾಜಮುಖಿ ಕೆಲಸಗಳಿಂದ ಬಾಲಿವುಡ್ ನಟ ಸೋನು ಸೂದ್ ಮನೆ ಮಾತಾಗಿದ್ದಾರೆ. ಆದರೆ ಇದೀಗ ನಟಿಗೆ ಸಂಕಷ್ಟವೊಂದು ಎದುರಾಗಿದೆ. ವಂಚನೆ ಪ್ರಕರಣವೊಂದರಲ್ಲಿ ಸಾಕ್ಷ್ಯ ನುಡಿಯಲು ವಿಫಲವಾದ ನಟ ಸೋನು ಸೂದ್ ವಿರುದ್ಧ ಪಂಜಾಬ್‌ನ ಲುಧಿಯಾನ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.
ಅಂದಹಾಗೆ ಮೋಹಿತ್ ಶರ್ಮಾ ಎಂಬ ವ್ಯಕ್ತಿ ರೂ. ಲುಧಿಯಾನದ ವಕೀಲ ರಾಜೇಶ್ ಖನ್ನಾ ಅವರು ಹೂಡಿಕೆದಾರರಿಗೆ 10 ಲಕ್ಷ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಅವರು ನಟ ಸೋನು ಸೂದ್ ಅವರನ್ನು ಸಾಕ್ಷಿಯನ್ನಾಗಿ ಹೆಸರಿಸಿದ್ದರು. ಅದೇ ಈಗ ಬಾಲಿವುಡ್ ಖಳನಟನಿಗೆ ಮುಳುವಾಗಿದೆ.

ಪ್ರಕರಣದ ತನಿಖೆ ನಡೆಸಿದ ಲುಧಿಯಾನ ನ್ಯಾಯಾಲಯ ಸೋನು ಸೂದ್ ಅವರಿಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ ಇದೀಗ ಮುಂಬೈ ಪೊಲೀಸರರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಲುಧಿಯಾನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದಾರೆ.
ಕೋರ್ಟ್ ಆದೇಶ ಪಾಲಿಸದಿದ್ದರೆ ಉಲ್ಲಂಘನೆ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಾರಂಟ್‌ನಲ್ಲಿ ತಿಳಿಸಲಾಗಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಲಾಗಿದೆ. ಬಾಲಿವುಡ್ ಮಾತ್ರವಲ್ಲದೇ ದಕ್ಷಿಣದ ಭಾಷೆಗಳಲ್ಲಿ ಕೂಡ ನಟ ಸೋನುಸೂದ್ ಬಣ್ಣ ಹಚ್ಚಿದ್ದಾರೆ. ಕೆಲ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ.


Click it and Unblock the Notifications











