ಫೋಟೋ ವೈರಲ್: ಮಾಲ್ಡೀವ್ಸ್ ಬೀಚ್ ನಲ್ಲಿ ಸಖತ್ ಹಾಟ್ ಆದ ನಟಿ ಅನನ್ಯಾ
ಮಾಲ್ಡೀವ್ಸ್ ಸೆಲೆಬ್ರಿಟಿಗಳ ನೆಚ್ಚಿನ ತಾಣವಾಗಿ ಮಾರ್ಪಾಡಾಗಿದೆ. ಲಾಕ್ ಡೌನ್ ಸಡಿಲಿಕೆ ಆಗುತ್ತಿದ್ದಂತೆ ಸಾಕಷ್ಟು ಸಿನಿತಾರೆಯರು ಮಾಲ್ಡೀವ್ಸ್ ಕಡೆ ಪಯಣ ಬೆಳೆಸಿದ್ದರು. ಸ್ನೇಹಿತರು, ಕುಟುಂಬದವರ ಜೊತೆ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಸ್ಯಾಂಡಲ್ ವುಡ್, ಟಾಲಿವುಡ್, ಕಾಲಿವುಡ್ ಮತ್ತು ಬಾಲಿವುಡ್ ನ ಅನೇಕ ತಾರೆಯರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿ ಬಂದಿದ್ದಾರೆ. ಇದೀಗ ಬಾಲಿವುಡ್ ನ ಖ್ಯಾತ ನಟಿ ಅನನ್ಯಾ ಪಾಂಡೆ ಸರದಿ. ಹೌದು ಅನನ್ಯಾ ಪಾಂಡೆ ಮಾಲ್ಡೀವ್ಸ್ ಪ್ರವಾಸದಲ್ಲಿದ್ದಾರೆ.
ಮಾಲ್ಡೀವ್ಸ್ ಬೀಚ್ ನಲ್ಲಿ ಸಖತ್ ಹಾಟ್ ಆಗಿರುವ ಅನನ್ಯಾ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅನನ್ಯಾ ಪಾಂಡೆ ಬಿಕಿನಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿವೆ. ತರಹೇವಾರಿ ಬಿಕಿನಿ ಧರಿಸಿ ಬೀಚ್ ನಲ್ಲಿ ಪೋಸ್ ನೀಡಿದ್ದಾರೆ. 2021ಅನ್ನು ಮಲ್ಡೀವ್ಸ್ ನಲ್ಲಿ ಆಚರಣೆ ಮಾಡಿರುವ ಅನನ್ಯಾ ಮಸ್ತ್ ಮಜಾ ಮಾಡಿದ್ದಾರೆ.

ಅನನ್ಯಾ ಸದ್ಯ ವಿಜಯ್ ದೇವರಕೊಂಡಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಸದ್ಯ ಫೈಟರ್ ಎಂದು ಹೆಸರಿಡಲಾಗಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಫೈಟರ್ ಚಿತ್ರಕ್ಕೆ ಪುರಿ ಜಗನ್ನಾಥ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅನನ್ಯಾ ಕೊನೆಯದಾಗಿ ಖಾಲಿ ಪೀಲಿ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.
ಅಂದಹಾಗೆ ಅನನ್ಯಾ ಸ್ಟುಡೆಂಟ್ ಆಫ್ ದಿ ಇಯರ್-2 ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಕರಣ್ ಜೋಹರ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬಂದಿದೆ. ಈ ಸಿನಿಮಾ ಬಳಿಕ ಅನನ್ಯಾ ನಟನೆಯ ಮೂರು ಸಿನಿಮಾಗಳು ತೆರೆಗೆ ಬಂದಿವೆ. ಸಿನಿಮಾಗಳ ಸಂಖ್ಯೆ ಕಡಿಮೆ ಇದ್ದರೂ ಬಾಲಿವುಡ್ ನಲ್ಲಿ ಅನನ್ಯಾ ಹವಾ ಜೋರಾಗಿದೆ.


Click it and Unblock the Notifications