twitter
    For Quick Alerts
    ALLOW NOTIFICATIONS  
    For Daily Alerts

    ವಿಡಿಯೋ: 'ದಿ ಕಾಶ್ಮೀರ್ ಫೈಲ್ಸ್' ಪ್ರದರ್ಶನದ ವೇಳೆ ಪಾಕ್‌ ಪರ ಘೋಷಣೆ

    |

    'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಈಗಲೂ ಸಾಮಾಜಿಕ ಜಾಲತಾಣದಲ್ಲಿ ಜಾರಿಯಲ್ಲಿದೆ. ಸಿನಿಮಾ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ.

    ಈ ಸಿನಿಮಾ ನೈಜ ಇತಿಹಾಸವೆಂದು, ದೇಶಪ್ರೇಮಿಗಳ ಸಿನಿಮಾವೆಂದು ಕೆಲವರು ವಾದಿಸುತ್ತಿದ್ದಾರೆ. ಎದುರಾಳಿಗಳು ಇದೊಂದು ರಾಜಕೀಯ ಪ್ರೇರಿತ ಸಿನಿಮಾ ಎಂದು, ರಾಜಕೀಯ ಲಾಭಕ್ಕಾಗಿ ಮಾಡಲಾದ ಸಿನಿಮಾ ಎಂದು ಆಕ್ಷೇಪಣೆ ಎತ್ತಿದ್ದಾರೆ.

    ಈ ನಡುವೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಣೆ ವೇಳೆ ಇಬ್ಬರು ವ್ಯಕ್ತಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನೆರೆಯ ತೆಲಂಗಾಣದಲ್ಲಿ ನಡೆದಿದೆ.

    ತೆಲಂಗಾಣದ ಅದಿಲಾಬಾದ್‌ನ ನಟರಾಜ್ ಚಿತ್ರಮಂದಿರದಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಪ್ರದರ್ಶನ ಆಗುತ್ತಿರುವ ವೇಳೆ ಇಬ್ಬರು ದುಷ್ಕರ್ಮಿಗಳು ಪಾಕ್ ಪರವಾಗಿ ಘೋಷಣೆ ಕೂಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಾಕ್ ಪರ ಘೋಷಣೆ ಕೂಗಿದವರನ್ನು ಸಿನಿಮಾ ವೀಕ್ಷಕರೇ ಹಿಡಿದು ಹೊಡೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

    ಗಲಾಟೆ ಪ್ರಾರಂಭವಾಗುತ್ತಿದ್ದಂತೆ ಚಿತ್ರಮಂದಿರದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಬರುವ ವೇಳೆಗೆ ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ''ನಾವು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಘಟನೆ ಬಗ್ಗೆ ಯಾವುದೇ ಅಧಿಕೃತ ದೂರು ಈ ವರೆಗೆ ದಾಖಲಾಗಿಲ್ಲ. ಕೃತ್ಯ ಎಸಗಿದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ಶಾಂತಿ ಕದಡುವ ಉದ್ದೇಶದಿಂದಲೇ ಎಸಗಿರುವ ಕೃತ್ಯ ಇದೆಂಬ ಅನುಮಾನ ಇದೆ'' ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

    'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವು 1990 ರಲ್ಲಿ ಜಮ್ಮು ಕಾಶ್ಮೀರದಲ್ಲಿ ಕಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಕತೆಯನ್ನು ಹೊಂದಿದೆ. ಮುಸ್ಲಿಂ ಉಗ್ರಗಾಮಿಗಳು ಹೇಗೆ ಹಿಂಸಾತ್ಮಕವಾಗಿ ಪಂಡಿತರನ್ನು ರಾಜ್ಯದಿಂದ ಹೊರಗಟ್ಟಿದರು ಎಂಬುದರ ಕತೆಯನ್ನು ಸಿನಿಮಾ ಒಳಗೊಂಡಿದೆ.

    Anti India Slogans Raised While Screening The Kashmir Files In Telangana

    ಹಿಂದು ಪರ ಸಂಘಟನೆಗಳು ಹಾಗೂ ಬಿಜೆಪಿ ಸಿನಿಮಾಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡುತ್ತಿದ್ದು, ದೇಶದಾದ್ಯಂತ ಸಿನಿಮಾ ದೊಡ್ಡ ಹಿಟ್ ಆಗಿದೆ. ಸ್ವತಃ ನರೇಂದ್ರ ಮೋದಿಯವರು ಸಿನಿಮಾವನ್ನು ಹೊಗಳಿದ್ದು, ಧೈರ್ಯವಂತ ಪ್ರಯತ್ನ ಎಂದಿದ್ದಾರೆ. ಹಾಗಾಗಿ ಸಿನಿಮಾಕ್ಕೆ ಇನ್ನಷ್ಟು ಪ್ರಚಾರ ದೊರೆತಿದೆ. ಕೆಲವು ಬಿಜೆಪಿ ಶಾಸಕರು, ಸಚಿವರುಗಳು ಈ ಸಿನಿಮಾದ ಉಚಿತ ಪ್ರದರ್ಶನಗಳನ್ನು ಆಯೋಜಿಸಿದ್ದಾರೆ. ಅಲ್ಲದೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಿಸದವರು ದೇಶದ್ರೋಹಿಗಳು ಎಂದು ಹೇಳಿಕೆ ನೀಡಿದ್ದಾರೆ.

    'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಕರ್ನಾಟಕದ ಪ್ರಕಾಶ್ ಬೆಳವಾಡಿ, ಪಲ್ಲವಿ ಜೋಶಿ ಇನ್ನೂ ಹಲವರು ನಟಿಸಿದ್ದಾರೆ.

    English summary
    Pro Pakistan slogans raised while screening The Kashmir Files in Telangana Adilabad's Nataraj theater.
    Sunday, March 20, 2022, 20:29
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X