Don't Miss!
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಬೈಗೆ ಮುರಳಿದ ನಟಿ ಅನುಷ್ಕಾ ಶರ್ಮಾ; ವರ್ಕೌಟ್ ಫೋಟೋ ವೈರಲ್
ಬಾಲಿವುಡ್ ಖ್ಯಾತ ನಟಿ ಅನುಷ್ಕಾ ಶರ್ಮಾ ಕಳೆದ ಕೆಲವು ತಿಂಗಳುಗಳಿಂದ ಪತಿ ವಿರಾಟ್ ಕೊಹ್ಲಿ ಜೊತೆ ಇಂಗ್ಲೆಂಡ್ ಪ್ರವಾಸದಲ್ಲಿದ್ದರು. ಇದೀಗ ಮುಂಬೈಗೆ ವಾಪಸ್ ಆಗಿದ್ದಾರೆ. ಪತಿ ವಿರಾಟ್ ಕೊಹ್ಲಿ ಐಪಿಎಲ್ 2021ರ ಮುಂದುವರೆದ ಭಾಗವಾಗಿ ದುಬೈನಲ್ಲಿದ್ದಾರೆ.ಆದರೆ ಅನುಷ್ಕಾ ಮಾತ್ರ ಮಗಳು ವಮಿಕಾ ಜೊತೆ ಮುಂಬೈನಲ್ಲೇ ಇದ್ದಾರೆ.
ಮಗಳ ಆರೈಕೆ ಜೊತೆಗೆ ಅನುಷ್ಕಾ ಮತ್ತೆ ವರ್ಕೌಟ್ನಲ್ಲಿ ಬ್ಯುಸಿಯಾಗಿದ್ದಾರೆ. ಮುಂಬೈಗೆ ವಾಪಸ್ ಆಗಿರುವ ಫೋಟೋ ಜೊತೆಗೆ ಅನುಷ್ಕಾ ವರ್ಕೌಟ್ ಫೋಟೋವನ್ನು ಶೇರ್ ಮಾಡಿದ್ದಾರೆ. ಮೊದಲ ಮಗುವಿಗೆ ಜನ್ಮ ನೀಡಿದ ಬಳಿಕ ಅನುಷ್ಕಾ ಮತ್ತೆ ಫಿಟ್ನೆಸ್ ಕಡೆ ಗಮನ ಹರಿಸಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಂ ಸ್ಟೋರಿಸ್ನಲ್ಲಿ ಫೋಟೋ ಹಂಚಿಕೊಂಡಿರುವ ಅನುಷ್ಕಾ, ತಮ್ಮ ಮನೆಯಿಂದ ಕಾಣುವ ಸಮುದ್ರದ ಚಿತ್ರವನ್ನು ಶೇರ್ ಮಾಡಿದ್ದಾರೆ. ಜೊತೆಗೆ ವರ್ಕೌಟ್ ಮುಗಿಸಿದ ನಂತರದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿದ ನಂತರ ಅಭಿಮಾನಿಗಳು, ಅನುಷ್ಕಾ ಮತ್ತೆ ಚಿತ್ರರಂಗಕ್ಕೆ ಮರಳುತ್ತೀರಾ? ಎಂದು ಪ್ರಶ್ನಿಸುತ್ತಿದ್ದಾರೆ.
ಅನುಷ್ಕಾ ಮಗಳ ಆರೋಗ್ಯದ ದೃಷ್ಟಿಯಿಂದ ಮುಂಬೈಗೆ ವಾಪಸ್ ಆಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ವರ್ಕೌಟ್ ಕಡೆ ಹೆಚ್ಚು ಗಮನಹರಿಸಿರುವುದನ್ನು ನೋಡಿದ್ರೆ ಅನುಷ್ಕಾ ಮತ್ತೆ ಬಣ್ಣ ಹಚ್ಚುವ ತಯಾರಿ ನಡೆಸುತ್ತಿದ್ದಾರಾ ಎನ್ನುವ ಅನುಮಾನ ಸಹ ಕಾಡುತ್ತಿದೆ. ಅನುಷ್ಕಾ ಕೊನೆಯದಾಗಿ ಶಾರುಖ್ ಖಾನ್ ನಟನೆಯ ಜೀರೋ ಸಿನಿಮಾದಲ್ಲಿ ನಟಿಸುತ್ತಿದ್ದರು. ಬಳಿಕ ಮತ್ತೆ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿರಲಿಲ್ಲ. ನಂತರ ಸಿನಿಮಾ ಮತ್ತು ವೆಬ್ ಸೀರಿಸ್ ನಿರ್ಮಾಣ ಮಾಡಿ ಸಕ್ಸಸ್ ಕಂಡ ಅನುಷ್ಕಾ ನಿರ್ಮಾಣದಲ್ಲೂ ಬ್ಯುಸಿಯಾಗಿದ್ದಾರೆ.
ಸದ್ಯ ಅನುಷ್ಕಾ ಕಳೆದ ವರ್ಷ ಅಗಲಿದ ನಟ ಇರ್ಫಾನ್ ಖಾನ್ರ ಪುತ್ರ ಬಬಿಲ್ ಕಾಣಿಸಿಕೊಳ್ಳುತ್ತಿರುವ 'ಕಾಲ' ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದ ವೆಬ್ ಸಿರೀಸ್ 'ಪಾತಾಳ್ ಲೋಕ್' ಸೀರಿಸ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗೆಯೇ ನೆಟ್ ಫ್ಲಿಕ್ಸ್ ನಲ್ಲಿ ತೆರೆಕಂಡ 'ಬುಲ್ ಬುಲ್' ವಿಮರ್ಶಕರಿಂದ ಮೆಚ್ಚುಗೆ ಪಡೆದಿತ್ತು.
ಸದ್ಯ ಅನುಷ್ಕಾ ಯಾವಾಗ ಬಣ್ಣ ಹಚ್ಚುತ್ತಾರೆ, ಯಾವ ರೀತಿಯ ಸಿನಿಮಾಗಳ ಮೂಲಕ ಅಭಿಮಾನಿಗಳ ಮುಂದೆ ಬರ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. ಈ ಬಗ್ಗೆ ಸದ್ಯದಲ್ಲೇ ಮಾಹಿತಿ ಹಂಚಿಕೊಂಡರು ಅಚ್ಚರಿ ಇಲ್ಲ.