Don't Miss!
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿರುಷ್ಕಾ ಮಗಳ ಮೊದಲ ಫೋಟೋ ಹಂಚಿಕೊಂಡ ಅನುಷ್ಕಾ ಸೋದರಮಾವ ವಿಕಾಸ್
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ದಂಪತಿ ಸಂತಸದಲ್ಲಿ ಅಲೆಯಲ್ಲಿ ತೇಲುತ್ತಿದ್ದಾರೆ. ಮೊದಲ ಮಗುವನ್ನು ಸ್ವಾಗತಿಸಿದ ವಿರುಷ್ಕಾ ಜೋಡಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ನಿನ್ನೆ (ಜನವರಿ 11) ಮಧ್ಯಾಹ್ನ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Recommended Video
ಮಗು ಜನಿಸಿದ ಬಳಿಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಮೂಲಕ ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಅನುಷ್ಕಾ ಮತ್ತು ವಿರಾಟ್ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ: ಸಂತಸ ಹಂಚಿಕೊಂಡ ಕೊಹ್ಲಿ
ಮಗುವನ್ನು ಮಾಧ್ಯಮಗಳಿಂದ ದೂರ ಇಡುವುದಾಗಿ ಅನುಷ್ಕಾ ಈ ಹಿಂದೆಯೇ ಹೇಳಿದ್ದರು. ಹಾಗಾಗಿ ಮಗಳ ಫೋಟೋ ರಿವೀಲ್ ಮಾಡಿಲ್ಲ. ಆದರೆ ಅನುಷ್ಕಾ ಶರ್ಮಾ ಅವರ ಸೋದರಮಾವ ಅನುಷ್ಕಾ ಮತ್ತು ವಿರಾಟ್ ದಂಪತಿಯ ಮುದ್ದು ಮಗಳ ಫೋಟೋವನ್ನು ಶೇರ್ ಮಾಡಿದ್ದಾರೆ.
ಮನೆಗೆ ಆಗಮಿಸಿದ ಹೊಸ ಸದಸ್ಯೆಯನ್ನು ಸ್ವಾಗತಿಸಿ ಅನುಷ್ಕಾ ಮಾವ ಪುಟ್ಟ ಕಂದನ ಕಾಲುಗಳ ಫೋಟೋವನ್ನು ಶೇರ್ ಮಾಡಿದ್ದಾರೆ. ಅನುಷ್ಕಾ ಮಗುವಿಗೆ ಜನ್ಮ ನೀಡಿದ ಬಳಿಕ ಫೋಟೋ ಶೇರ್ ಮಾಡಿ ವಿಕಾಸ್, ' ಸಂತೋಷ ಹೆಚ್ಚಾಗಿದೆ. ಮನೆಯಲ್ಲಿ ದೇವತೆ' ಎಂದು ಬರೆದುಕೊಂಡಿದ್ದಾರೆ. ಆದರೆ ಅನುಷ್ಕಾ ಮತ್ತು ವಿರಾಟ್ ಮಗಳು ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಇದು ಅನುಷ್ಕಾ ಮಗುವಿನ ಫೋಟೋನಾ ಎನ್ನುವ ಅನುಮಾನ ಕಾಡಿದೆ.
ಅದೇನೆ ಇದ್ರು ಅನುಷ್ಕಾ ಶರ್ಮಾ ಮಾವ ಶೇರ್ ಮಾಡಿರುವ ಫೋಟೋ ವೈರಲ್ ಆಗುತ್ತಿದೆ. ಮಗಳು ಜನಿಸಿದ ಬಗ್ಗೆ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ 'ನಿಮ್ಮ ಪ್ರೀತಿ, ಪ್ರಾರ್ಥನೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ನಮ್ಮ ಜೀವನದ ಹೊಸ ಅಧ್ಯಾಯವನ್ನು ಪ್ರಾರಭಿಸಿದ್ದೇವೆ. ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸಿದ್ದೇನೆ' ಎಂದು ಬಹಿರಂಗ ಪಡಿಸಿದ್ದರು.