Just In
Don't Miss!
- News
ಶಿವಮೊಗ್ಗದಲ್ಲಿ ಡೈನಾಮೈಟ್ ಸ್ಫೋಟ: 15 ಕಾರ್ಮಿಕರ ಸಾವಿನ ಶಂಕೆ
- Sports
ಅಜಿಂಕ್ಯ ರಹಾನೆ ಬಳಗಕ್ಕೆ ಕ್ವಾರಂಟೈನ್ ವಿನಾಯಿತಿ ನೀಡಿದ ಮಹಾರಾಷ್ಟ್ರ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Lifestyle
ಗಣರಾಜ್ಯೋತ್ಸವ 2021: ಇಲ್ಲಿದೆ ಶುಭಾಶಯಗಳು, ಕೋಟ್ಸ್, ವಾಟ್ಸಾಪ್ ಸ್ಟೇಟಸ್
- Automobiles
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೂಟಿಂಗ್ ನಲ್ಲಿ ಭಾಗಿಯಾದ ತುಂಬು ಗರ್ಭಿಣಿ ಅನುಷ್ಕಾ ಶರ್ಮಾ
ಬಾಲಿವುಡ್ ಖ್ಯಾತ ನಟಿ ಅನುಷ್ಕಾ ಶರ್ಮಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅನುಷ್ಕಾ ಶರ್ಮಾಗೆ 8 ಸದ್ಯ ತಿಂಗಳಾಗಿದ್ದು, ಜನವರಿಯಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ತುಂಬು ಗರ್ಭಿಣಿ ಅನುಷ್ಕಾ ಇದೀಗ ಮತ್ತೆ ಶೂಟಿಂಗ್ ಕಡೆ ಮುಖ ಮಾಡಿದ್ದಾರೆ.
ಅಂದಹಾಗೆ ಅನುಷ್ಕಾ ಮತ್ತೆ ಸಿನಿಮಾ ಮಾಡುತ್ತಿದ್ದಾರಾ? ಅಂತ ಯೋಚಿಸಬೇಡಿ, ಅನುಷ್ಕಾ ಜಾಹೀರಾತು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಯಾವುದೋ ಒಂದು ಜಾಹೀರಾತು ಅಲ್ಲ. ಬರೋಬ್ಬರಿ 7 ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ವಿರಾಟ್-ಅನುಷ್ಕಾ ಮಗು ಬಗ್ಗೆ ಕರೀನಾ ಕಪೂರ್ ಮಾತು
ತನ್ನ ಇಷ್ಟದ ಉಡುಗೆ ತೊಟ್ಟು, ಮೇಕಪ್ ಮಾಡಿಸಿಕೊಳ್ಳುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಅನೇಕ ತಿಂಗಳ ಬಳಿಕ ಅನುಷ್ಕಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಶೂಟಿಂಗ್ ಮಿಸ್ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ.
ಕೊರೊನಾ ಸಮಯದಲ್ಲಿ ಮನೆಯಲ್ಲೇ ಇದ್ದ ಅನುಷ್ಕಾ ದಂಪತಿ, ಮಗುವಿನ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಇತ್ತೀಚಿಗೆ ಐಪಿಎಲ್ ನಿಮಿತ್ತ ಅನುಷ್ಕಾ ಪತಿ ವಿರಾಟ್ ಕೊಹ್ಲಿ ಜೊತೆ ದುಬೈಗೆ ತೆರಳಿದ್ದರು. ಐಪಿಎಲ್ ಮುಗಿಸಿ ವಾಪಸ್ ಬಂದ ಬಳಿಕ ಕ್ಯಾಮರಾ ಮುಂದೆ ಕಾಣಿಸಿಕೊಂಡಿದ್ದಾರೆ.
ಅನುಷ್ಕಾ ಸಾಮಾಜಿಕ ಜಾಲತಾಣದಲ್ಲಿ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಫೋಟೋಗಳಿಗೆ ಅಭಿಮಾನಿಗಳಿಂದ ಮತ್ತು ಚಿತ್ರರಂಗದ ಗಣ್ಯರಿಂದ ಮೆಚ್ಚುಗೆಯ ಕಾಮೆಂಟ್ಸ್ ಹರಿದುಬರುತ್ತಿವೆ.