For Quick Alerts
  ALLOW NOTIFICATIONS  
  For Daily Alerts

  ಮಲೈಕಾ ಅರೋರಾಗೆ ಹುಟ್ಟುಹಬ್ಬದ ಸಂಭ್ರಮ: 'ಫೂಲ್' ಎಂದ ಬಾಯ್ ಫ್ರೆಂಡ್ ಅರ್ಜುನ್ ಕಪೂರ್

  |

  ಬಾಲಿವುಡ್ ನಟಿ ಮತ್ತು ಡ್ಯಾನ್ಸರ್ ಮಲೈಕಾ ಅರೋರಾ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಿ ಟೌನ್ ನ ಈ ಹಾಟ್ ಬ್ಯೂಟಿಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. 47ನೇ ವಸಂತಕ್ಕೆ ಕಾಲಿಟ್ಟಿರುವ ಮಲೈಕಾ ನಿನ್ನೆ(ಅ.22) ರಾತ್ರಿ ಸ್ನೇಹಿತರು ಮತ್ತು ಕುಟುಂಬದವರ ಜೊತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ.

  ವಿಶೇಷ ಅಂದರೆ ಮಲೈಕಾ ಹುಟ್ಟುಹಬ್ಬಕ್ಕೆ ಬಾಯ್ ಫ್ರೆಂಡ್ ಅರ್ಜುನ್ ಕಪೂರ್ ಫನ್ನಿಯಾಗಿ ವಿಶ್ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ತನ್ನ ಲೇಡಿ ಲವ್ ಮಲೈಕಾ ಫೋಟೋ ಶೇರ್ ಮಾಡಿ ಪ್ರೀತಿಯ ವಿಶ್ ತಿಳಿಸಿದ್ದಾರೆ. ಪಿಂಕ್ ಬಣ್ಣದ ಸ್ವೆಟ್ ಶರ್ಟ್ ಮತ್ತು ಪ್ಯಾಂಟ್ ಧರಿಸಿರುವ ಮಲೈಕಾ ತನ್ನ ಮುದ್ದಿನ ನಾಯಿ ಜೊತೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಫೋಟೋಗೆ " ಹುಟ್ಟುಹಬ್ಬದ ಶುಭಾಶಯಗಳು ನನ್ನ ಫೂಲ್" ಎಂದು ಹೇಳಿದ್ದಾರೆ.

  ಮಲೈಕಾ ಅರೋರಾ ಜೊತೆ ಮದುವೆ ಬಗ್ಗೆ ನಟ ಅರ್ಜುನ್ ಕಪೂರ್ ಪ್ರತಿಕ್ರಿಯೆಮಲೈಕಾ ಅರೋರಾ ಜೊತೆ ಮದುವೆ ಬಗ್ಗೆ ನಟ ಅರ್ಜುನ್ ಕಪೂರ್ ಪ್ರತಿಕ್ರಿಯೆ

  ನಟಿ ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಪ್ರೀತಿಯ ವಿಚಾರ ಗುಟ್ಟಾಗಿ ಉಳಿದಿಲ್ಲ. ಇಬ್ಬರು ಮೂರ್ನಾಲ್ಕು ವರ್ಷಗಳಿಂದ ಡೇಟಿಂಗ್ ನಲ್ಲಿದ್ದಾರೆ. ಸದಾ ಜೊತೆಯಲ್ಲೇ ಸುತ್ತಾಡುವ ಈ ಜೋಡಿ ಈ ವರ್ಷ ಮದುವೆ ಬಂಧನಕ್ಕೆ ಒಳಗಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಇವರು ಮದುವೆ ಬಗ್ಗೆ ತಲೆಕೆಡೆಸಿಕೊಳ್ಳದೆ ಹಾಯಾಗಿ ಸುತ್ತಾಡಿಕೊಂಡಿದ್ದಾರೆ.

  ಅರ್ಜುನ್ ಕಪೂರ್ ಗಿಂತ ಮಲೈಕಾ ಅರೋರಾ 12 ವರ್ಷ ದೊಡ್ಡರು. ಇಬ್ಬರ ಬಗ್ಗೆ ಸಾಕಷ್ಟು ಟ್ರೋಲ್ ಗಳು ಹರಿದಾಡುತ್ತಿದ್ದರು ಈ ಜೋಡಿ ಯಾವುದಕ್ಕೂ ತಲೆಕೆಸಿಕೊಂಡಿಲ್ಲ. ಅಂದ್ಹಾಗೆ ಮಾದಕ ತಾರೆ ಮಲೈಕಾ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ರನ್ನು ಮದುವೆಯಾಗಿದ್ದರು. ಆದರೆ ಇಬ್ಬರ ನಡುವಿನ ವೈಮನಸ್ಸಿನಿಂದ 18 ವರ್ಷಗಳ ದಾಂಪತ್ಯ ಜೀವನ ಕಡಿದುಕೊಂಡು ದೂರ ದೂರ ಆಗಿದ್ದಾರೆ. ಅವರಿಗೆ ಒಬ್ಬ ಮಗ ಇದ್ದಾನೆ.

  English summary
  Bollywood Actor Arjun Kapoor calls his ladylove Malaika Arora a fool in Birthday wish.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X