ಆಮೀರ್ ಖಾನ್ ಮಗನ ಜೊತೆ 'ಅರ್ಜುನ್ ರೆಡ್ಡಿ' ನಟಿ ಶಾಲಿನಿ ಪಾಂಡೆ ರೊಮ್ಯಾನ್ಸ್
ತೆಲುಗಿನ ಸೂಪರ್ ಹಿಟ್ 'ಅರ್ಜುನ್ ರೆಡ್ಡಿ' ಸಿನಿಮಾ ಮೂಲಕ ದಕ್ಷಿಣ ಭಾರತದಲ್ಲಿ ಖ್ಯಾತಿಗಳಿಸಿದ್ದ ನಟಿ ಶಾಲಿನಿ ಪಾಂಡೆ, ಇದೀಗ ಬಾಲಿವುಡ್ ನಲ್ಲಿ ಸದ್ದು ಮಾಡುತ್ತಿದ್ದಾರೆ. ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಶಾಲಿನಿ ಪಾಂಡೆ ರೊಮ್ಯಾನ್ಸ್ ಎನ್ನುವ ಗುಸು ಗುಸು ಬಿ ಟೌನ್ ನಲ್ಲಿ ಕೇಳಿಬರುತ್ತಿದೆ.
ಅಂದಹಾಗೆ ಶಾಲಿನಿ, ಜುನೈದ್ ಖಾನ್ ಜೊತೆ ರೊಮ್ಯಾನ್ಸ್ ಮಾಡುತ್ತಿರುವುದು ರಿಯಲ್ ಆಗಿ ಆಲ್ಲ, ರೀಲ್ ನಲ್ಲಿ. ಹೌದು, ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್ ಮೊದಲ ಪುತ್ರ ಜುನೈದ್ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಜುನೈದ್ ಖಾನ್ ಗೆ ನಾಯಕಿಯಾಗಿ ಶಾಲಿನಿ ಪಾಂಡೆ ನಟಿಸಲಿದ್ದಾರೆ ಎನ್ನುವ ಮಾತು ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ.
ಜುನೈದ್ ಮೊದಲ ಸಿನಿಮಾಗೆ ರಾಣಿ ಮುಖರ್ಜಿ ನಟನೆಯ 'ಹಿಚ್ಕಿ' ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಸಿದ್ಧಾರ್ಥ್ ಮಲ್ಹೋತ್ರಾ ನಿರ್ದೇಶನ ಮಾಡಲಿದ್ದಾರಂತೆ. ಈ ಬಗ್ಗೆ ಆಮೀರ್ ಖಾನ್ ಆಗಲಿ ಅಥವಾ ಸಿನಿಮಾದ ನಿರ್ದೇಶಕ ಸಿದ್ಧಾರ್ಥ್ ಎಲ್ಲಿಯೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಜುನೈದ್ ಸಿನಿಮಾ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಅರ್ಜುನ್ ರೆಡ್ಡಿ ಸಿನಿಮಾ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡ ಶಾಲಿನ ಪಾಂಡೆ, ಬಳಿಕ ರಣ್ವೀರ್ ಸಿಂಗ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುವ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟರು. ನಂತರ ಶಾಲಿನಿ ಎರಡು ಹಿಂದಿ ಸಿನಿಮಾಗಳಿಗೆ ಸಹಿ ಮಾಡಿದ್ದಾರೆ. ಅದು ಬಾಲಿವುಡ್ ನ ದೊಡ್ಡ ನಿರ್ಮಾಣ ಸಂಸ್ಥೆಯಾಗಿರುವ 'ಯಶ್ ರಾಜ್ ಫಿಲ್ಮ್ಸ್' ಬ್ಯಾನರ್ ನಲ್ಲಿ ಈ ಸಿನಿಮಾ ತಯಾರಾಗುತ್ತಿರುವುದು ವಿಶೇಷ.


Click it and Unblock the Notifications











