Don't Miss!
- Sports
Ranji Trophy: ಜಾರ್ಖಂಡ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಕರ್ನಾಟಕ
- Automobiles
ಕೈಗೆಟುಕುವ ಬೆಲೆಯಲ್ಲಿ ಮತ್ತೊಂದು ಎಸ್ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮಾರುತಿ ಸುಜುಕಿ
- News
ಪತ್ರಿಕಾ ಸ್ವಾತಂತ್ರವನ್ನು ಬೆಂಬಲಿಸಿ: ಬಿಬಿಸಿ ಬೆಂಬಲಕ್ಕೆ ನಿಂತ ಅಮೆರಿಕಾ
- Finance
ಅಕ್ಕಿ, ಗೋಧಿ, ಹಿಟ್ಟು ಬೆಲೆ ಏರಿಕೆ: ಎಚ್ಚರಿಕೆಯ ಕರೆಗಂಟೆಯೇ?
- Technology
Samsung Galaxy: ಕೇವಲ 44 ರೂ. ಗಳ ಇಎಮ್ಐನಲ್ಲಿ ಖರೀದಿಸಿ ಗ್ಯಾಲಕ್ಸಿ A14 5G ಫೋನ್!
- Lifestyle
ಬೀಟ್ರೂಟ್ ಹೀಗೆ ಬಳಸಿದರೆ ಮುಖದ ಅಂದ ಹೆಚ್ಚುವುದು
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಟ ಸುನಿಲ್ ಶೆಟ್ಟಿ ಮಗಳ ಜೊತೆ ಲಂಡನ್‌ನಲ್ಲಿ ಕಾಣಿಸಿಕೊಂಡ ಕೆ.ಎಲ್ ರಾಹುಲ್: ಫೋಟೋ ವೈರಲ್
ಬಾಲಿವುಡ್‌ನ ಖ್ಯಾತ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆ.ಎಲ್ ರಾಹುಲ್ ಪ್ರೀತಿ, ಪ್ರೇಮದ ವಿಚಾರ ಗುಟ್ಟಾಗಿ ಉಳಿದಿಲ್ಲ. ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಶೇರ್ ಮಾಡುವ ಮೂಲಕ ಇಬ್ಬರು ಪ್ರೀತಿ ವ್ಯಕ್ತಪಡಿಸುತ್ತಿರುತ್ತಾರೆ.
ಆದರೆ ಎಲ್ಲಿಯೂ ತಮ್ಮ ಪ್ರೀತಿಯನ್ನು ಒಪ್ಪಿಕೊಂಡಿಲ್ಲ. ಈ ಬಗ್ಗೆ ಪ್ರಶ್ನೆ ಮಾಡಿದ್ರೆ ಇಬ್ಬರೂ ಸ್ನೇಹಿತರಷ್ಟೆ ಎಂದು ಹೇಳಿ ಜಾರಿಕೊಳ್ಳುತ್ತಿದ್ದಾರೆ. ಇದೀಗ ಕೆಎಲ್ ರಾಹುಲ್ ತನ್ನ ರೂಮರ್ ಗರ್ಲ್ ಫ್ರೆಂಡ್ ಅಥಿಯಾ ಶೆಟ್ಟಿ ಜೊತೆ ಲಂಡನ್‌ನಲ್ಲಿ ಸಮಯ ಕಳೆಯುತ್ತಿರುವುದು ಬಹಿರಂಗ ವಾಗಿದೆ. ರಾಹುಲ್ ಮತ್ತು ಅಥಿಯಾ ಇಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿರುವ ಫೋಟೋ ಇಬ್ಬರೂ ಲಂಡನ್‌ನಲ್ಲಿರುವುದನ್ನು ಬಹಿರಂಗ ಪಡಿಸಿದೆ.
ಕೆಎಲ್ ರಾಹುಲ್ ಅಭಿಮಾನಿಗಳು ಕೇಳಿದ ಪ್ರಶ್ನೆಗೆ ಇನ್ಸ್ಟಾಗ್ರಾಮ್‌ನಲ್ಲಿ ಉತ್ತರ ನೀಡಿದ್ದಾರೆ. ಅಭಿಮಾನಿಯೊಬ್ಬ "ಈ ಸಮಯದಲ್ಲಿ ಏನು ಮಾಡುತ್ತಿದ್ದೀರಾ?" ಎಂದು ಕೇಳಿದ ಪ್ರಶ್ನೆಗೆ ರಾಹುಲ್ ತನ್ನ ಗೆಳತಿ ಜೊತೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದೇ ಗೆಳತಿ ಜೊತೆ ಇರುವ ಫೋಟೋವನ್ನು ಅಥಿಯಾ ಕೂಡ ಶೇರ್ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಒಟ್ಟಿಗೆ ಲಂಡನ್‌ನಲ್ಲಿ ಇರುವುದು ಬಹಿರಂಗವಾಗಿದೆ.
ಇತ್ತೀಚಿಗೆ ನಟಿ ಅಥಿಯಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದರು. ಆ ಫೋಟೋ ನೋಡಿದ ಅಭಿಮಾನಿಗಳು ರಾಹುಲ್ ಜೊತೆ ಲಂಡನ್‌ನಲ್ಲಿದ್ದಾರೆ ಎನ್ನುವ ಅನುಮಾನ ವ್ಯಕ್ತಪಡಿಸಿದ್ದರು. ರಾಹುಲ್ ಸದ್ಯ ಲಂಡನ್ ನಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ಇಂಗ್ಲೆಂಡ್‌ಗೆ ತೆರಳಿದ್ದು, ರಾಹುಲ್ ಕೂಡ ಜೊತೆಯಲ್ಲಿದ್ದಾರೆ.
ರಾಹುಲ್ ಜೊತೆ ಅಥಯಾ ಕೂಡ ತೆರಳಿದ್ದಾರೆ ಎಂದು ಅಭಿಮಾನಿಗಳು ಚರ್ಚಿಸುತ್ತಿದ್ದರು. ಇದೀಗ ಇಬ್ಬರೂ ಒಟ್ಟಿಗೆ ಇದ್ದಾರೆ ಎನ್ನುವುದನ್ನು ಫೋಟೋ ರಿವೀಲ್ ಮಾಡಿದೆ. ಕಳೆದ ಕೆಲವು ದಿನಗಳಿಂದ ಇಬ್ಬರು ಒಟ್ಟಿಗೆ ಇದ್ದಾರೆ, ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
ಅಥಿಯಾ ಮತ್ತು ರಾಹುಲ್ ಪ್ರೀತಿ, ಪ್ರೇಮದ ಬಗ್ಗೆ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ನಟ ಸುನಿಲ್ ಶೆಟ್ಟಿ, "ಅವರ ಸಂಬಂಧದ ಬಗ್ಗೆ ನನಗೆ ಗೊತ್ತಿಲ್ಲ. ಒಂದು ವೇಳೆ ಅಥಿಯಾ ಏನಾದರು ಹೇಳಿದ್ರೆ ಅಮೇಲೆ ಬಂದು ಹೇಳಿ" ಎಂದು ಉತ್ತರಿಸಿದ್ರು.
Recommended Video
2015ರಲ್ಲಿ ಬಾಲಿವುಡ್‌ಗೆ ಕಾಲಿಟ್ಟ ನಟಿ ಅಥಿಯಾ ಶೆಟ್ಟಿ, ನಟ ಸೂರಜ್ ಪಾಂಚೋಲಿ ಜೊತೆ ನಟಿಸಿದ್ದರು. ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳದ ಅಥಿಯಾ ಸಿನಿಮಾಗಿಂತ ಹೆಚ್ಚಾಗಿ ರಾಹುಲ್ ಜೊತೆಗಿನ ಪ್ರೀತಿ, ಡೇಟಿಂಗ್ ವಿಚಾರವಾಗಿಯೇ ಹೆಚ್ಚು ಸುದ್ದಿಯಲ್ಲಿದ್ದಾರೆ.