ಪಾರ್ಕಿಂಗ್ ಅನುಮತಿ ಕೋರಿ ಬರೆದ ಪಾತ್ರದಿಂದ ಬಹಿರಂಗವಾಯ್ತು ಶಾರುಖ್-ಅಟ್ಲೀ ಸಿನಿಮಾದ ಟೈಟಲ್

By ಫಿಲ್ಮಿಬೀಟ್ ಡೆಸ್ಕ್

ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅನೇಕ ವರ್ಷಗಳ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಸದ್ಯ ಪಠಾಣ್ ಸಿನಿಮಾದ ಚಿತ್ರೀಕರಣದ ನಡುವೆ ತಮಿಳು ನಿರ್ದೇಶಕ ಅಟ್ಲೀ ಸಾರಥ್ಯದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಅಟ್ಲೀ ನಿರ್ದೇಶನದ ಹೊಸ ಸಿನಿಮಾ ಪ್ರಾರಂಭವಾಗಿದ್ದು ಚಿತ್ರದ ಬಗ್ಗೆ ದಿನಕ್ಕೊಂದು ಸುದ್ದಿ ಹರಿದಾಡುತ್ತಿದೆ.

ಅಟ್ಲೀ ಮತ್ತು ಶಾರುಖ್ ಕಾಂಬಿನೇಷನ್ ನ ಹೊಸ ಸಿನಿಮಾ ಸದ್ಯ ಪುಣೆಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಚಿತ್ರದಲ್ಲಿ ಶಾರುಖ್ ಗೆ ಜೋಡಿಯಾಗಿ ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ನಯನತಾರಾ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ನಯನತಾರಾ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು ಭರ್ಜರಿಯಾಗಿ ಚಿತ್ರೀಕರಣ ನಡೆಯುತ್ತಿದೆ.

ಅಂದಹಾಗೆ ಶಾರುಖ್ ಮತ್ತು ನಿರ್ದೇಶಕ ಅಟ್ಲೀ ಸಿನಿಮಾದಲ್ಲಿ ಆ ಸ್ಟಾರ್ ಕಲಾವಿದ ನಟಿಸುತ್ತಿದ್ದಾರೆ, ಇವರು ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಅನೇಕ ಕಲಾವಿದರ ಹೆಸರು ಕೇಳಿಬರುತ್ತಿದೆ. ಈಗಾಗಲೇ ನಟಿ ಪ್ರಿಯಮಣಿ, ಸೌತ್ ಸ್ಟಾರ್ ರಾಣಾ ದಗ್ಗುಬಾಟಿ ಹೆಸರು ಬಲವಾಗಿ ಕೇಳಿಬರುತ್ತಿದೆ. ಪ್ರಿಯಮಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರೆ ನಟ ರಾಣಾ ದಗ್ಗುಬಾಟಿ ವಿಲನ್ ಆಗಿ ಅಬ್ಬರಿಸಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಕಾಲಿವುಡ್ ಸ್ಟಾರ್ ನಟ ದಳಪತಿ ವಿಜಯ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಇದ್ಯಾವುದರ ಬಗ್ಗೆಯೂ ಸಿನಿಮಾತಂಡ ಅಧಿಕೃತ ಗೊಳಿಸಿಲ್ಲ.

Atlee and Shah Rukh Khans new movie title Lion

ಇದೀಗ ಚಿತ್ರದ ಟೈಟಲ್ ವೈರಲ್ ಆಗಿದೆ. ಚಿತ್ರಕ್ಕೆ "ಲಯನ್" ಎಂದು ಹೆಸರಿಡಲಾಗಿದೆ ಎನ್ನುವ ಮಾತು ಕೇಳಿಬರುತ್ತಿಗೆ. ಈಗಾಗಲೇ ಆಟ್ಲೀ ಮತ್ತು ಶಾರುಖ್ ಸಿನಿಮಾದ ಟೈಟಲ್ ಇದು ಎಂದು ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ. ಅಂದಹಾಗೆ ಟೈಟಲ್ ಬಗ್ಗೆಯೂ ಸಿನಿಮಾತಂಡ ಎಲ್ಲಿಯೂ ಬಹಿರಂಗ ಪಡಿಸಿಲ್ಲ, ಆದರೆ ಶಾರುಖ್ ಅಭಿಮಾನಿ ಬಳಗದಲ್ಲಿ ಲಯನ್ ಎನ್ನುವ ಹೆಸರು ವೈರಲ್ ಆಗಿದೆ.

ಅಂದಹಾಗೆ ಈ ಟೈಟಲ್ ರಿವೀಲ್ ಆಗಿದ್ದು, ವಾಹನ ಪಾರ್ಕಿಂಗ್ ಗೆ ಅನುಮತಿ ಕೋರಿ ಬರೆದ ಪತ್ರದಿಂದ. ಹೌದು, "ಲಯನ್ ಹಿಂದಿ ಸಿನಿಮಾದ ಚಿತ್ರೀಕರಣಕ್ಕಾಗಿ ವಾಹನಗಳನ್ನು ನಿಮ್ಮ ಆವರಣದಲ್ಲಿ ನಿಲ್ಲಿಸಲು ಅನುಮತಿ" ಎಂದು ಪತ್ರದಲ್ಲಿ ಬರೆಯಲಾಗಿದೆ. ಜೊತೆಗೆ ಸಿನಿಮಾ ನಿರ್ದೇಶಕ ಅಟ್ಲೀ ಮತ್ತು ನಾಯಕ ಶಾರುಖ್ ಖಾನ್ ಎಂದು ಪತ್ರದಲ್ಲಿ ಬರೆಯಲಾಗಿದೆ. ಇದು ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಅಂದಹಾಗೆ ಈ ಮೊದಲು ಚಿತ್ರಕ್ಕೆ 'ಜವಾನ್' ಎಂದು ಹೆಸರಿಡಲಾಗಿದೆ ಎನ್ನುವ ಮಾತು ಕೇಳಿಬಂದಿತ್ತು. ಆದರೀಗ ಲಯನ್ ಎನ್ನುವ ಹೆಸರು ಕೇಳಿಬರುತ್ತಿದೆ. ಆದರೆ ಸಿನಿಮಾದ ಬಗ್ಗೆ, ಪಾತ್ರವರ್ಗದ ಬಗ್ಗೆ ಅಥವಾ ಟೈಟಲ್ ಬಗ್ಗೆ ಸಿನಿಮಾತಂಡ ಇದುವರೆಗೂ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಚಿತ್ರಕ್ಕೆ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಇನ್ನು ಉಳಿದಂತೆ ಸಿನಿಮಾದಲ್ಲಿ ಏನೆಲ್ಲ ವಿಶೇಷತೆ ಇದೆ, ಯಾರೆಲ್ಲ ನಟಿಸಲಿದ್ದಾರೆ ಎನ್ನುವುದು ಸದ್ಯದಲ್ಲೇ ಬಹಿರಂಗವಾಗುವ ಸಾಧ್ಯತೆ ಇದೆ.

More from Filmibeat

English summary
Tamil Director Atlee and Shah Rukh Khan's new movie title Lion.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X