»   »  ಹೊಟ್ಟೆನೋವು : ಲೀಲಾವತಿಯಲ್ಲಿ ಬಿಗ್ ಬಿ

ಹೊಟ್ಟೆನೋವು : ಲೀಲಾವತಿಯಲ್ಲಿ ಬಿಗ್ ಬಿ

Subscribe to Filmibeat Kannada

ಮುಂಬೈ, ಜು. 9 : ಬಾಲಿವುಡ್ ತಾರೆ ಅಮಿತಾಬ್ ಬಚ್ಚನ್ ಅವರಿಗೆ ಪುನಃ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲಿ ಕಾಣಿಕೊಂಡಿದ್ದ ನೋವು ಮತ್ತೆ ಮರುಕಳಿಸಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ. ಆಸ್ಪತ್ರೆ ಮೂಲಗಳ ಪ್ರಕಾರ ಅಮಿತಾಬ್ ಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿವೆ.

ಲಂಡನ್ ನಲ್ಲಿ ಚಿತ್ರೀಕರಣ ಮುಗಿಸಿಕೊಂಡು ಮಂಗಳವಾರವಷ್ಟೆ ಮುಂಬೈಗೆ ಆಗಮಿಸಿದ್ದರು. ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ವೈದ್ಯರನ್ನು ಸಂಪರ್ಕಿಸಿದ ಅವರು, ಸಿಟಿ ಸ್ಕ್ಯಾನ್ ಸೇರಿದಂತೆ ಅಗತ್ಯವಿರುವ ದೈಹಿಕ ಪರೀಕ್ಷೆಗೆ ಒಳಗಾಗಿದ್ದಾರೆ. ಆದರೆ ಸ್ಕ್ಯಾನ್ ನಲ್ಲಿ ಕಳೆದ ಬಾರಿ ಕಾಣಿಸಿಕೊಂಡಿದ್ದ ಹೊಟ್ಟೆ ನೋವು ಎನ್ನುವುದು ಖಚಿತವಾಗಿ ತಿಳಿದು ಬಂದಿಲ್ಲ. ವೈದ್ಯರು ಈ ಸಂಬಂಧ ಯಾವ ವಿಷಯವನ್ನು ಸ್ಪಷ್ಟಪಡಿಸಿಲ್ಲ.

(ದಟ್ಸ್ ಕನ್ನಡ ಚಿತ್ರವಾರ್ತೆ)

Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada