ಬಾಲಿವುಡ್ ನಟ ಬಿಕ್ರಮ್ ಜೀತ್ ಕನ್ವರ್ ಪಾಲ್ ಕೊರೊನಾಗೆ ಬಲಿ

ಮಹಾಮಾರಿ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಚಿತ್ರರಂಗದ ಅನೇಕರು ಕೊರೊನಾಗೆ ಬಲಿಯಾಗಿದ್ದಾರೆ. ಬಾಲಿವುಡ್ ನ ಖ್ಯಾತ ನಟ ಬಿಕ್ರಮ್ ಜೀತ್ ಕನ್ವರ್ ಪಾಲ್ ಇಂದು (ಮೇ 1) ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಅನೇಕ ಸಿನಿಮಾ ಮತ್ತು ಟಿವಿ ಮತ್ತು ವೆಬ್ ಸೀರಿಸ್ ನಲ್ಲಿ ಮಿಂಚಿದ್ದ ಕನ್ವರ್ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿಕ್ರಮ್ ಜೀತ್ ಅವರನ್ನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಬಿಕ್ರಮ್ ಜೀತ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

52 ವರ್ಷದ ನಟ ಕನ್ವರ್ ನಿಧನಕ್ಕೆ ಬಾಲಿವುಡ್ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಕ್ರಮ್ ಜೀತ್ ಸೇನೆಯಿಂದ ನಿವೃತ್ತಿಯಾದ ಬಳಿಕ 2003ರಲ್ಲಿ ಚಿತ್ರರಂಗ ಪ್ರವೇಶ ಮಾಡಿದ್ದರು. ಪೇಜ್-3, ಅರಕ್ಷನ್, ಮರ್ಡರ್-2, 2 ಸ್ಟೇಟ್ಸ್, ಘಾಜಿ ಆಟ್ಯಾಕ್, ಜಬ್ ತಕ್ ಹೈ ಜಾನ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

Bikramjeet kanwarpal passes away due to corona

ಕೊರೊನಾ ಎರಡನೇ ಅಲೆ ಭಾರತವನ್ನು ಕೆಟ್ಟ ಪರಿಸ್ಥಿತಿಗೆ ತಳ್ಳಿದೆ. ಸೋಂಕಿತರು ಆಸ್ಪತ್ರೆ, ಬೆಸ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಈ ಸಂಕಷ್ಟದ ಸ್ಥಿತಿಯಲ್ಲಿ ನೆರವಾಗುತ್ತಿದ್ದಾರೆ. ಅಮೆರಿಕದಲ್ಲಿರುವ ಪ್ರಿಯಾಂಕಾ ಚೋಪ್ರಾ ದಂಪತಿ, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್ ಸೇರಿದಂತೆ ಅನೇಕರು ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸುತ್ತಿದ್ದಾರೆ.

Recommended Video

ಬೆಂಗಳೂರಿನ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ವಿತರಿಸಲು ಮುಂದಾದ ಸುನೀಲ್ ಶೆಟ್ಟಿ | Filmibeat Kannada

More from Filmibeat

English summary
Bollywood Actor Bikramjeet kanwarpal passes away due to corona.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X