ಬಾಲಿವುಡ್ ನಟ ದಿಲೀಪ್ ಕುಮಾರ್ ಗೆ ಎದೆ ಸೋಂಕು, ಆಸ್ಪತ್ರೆಗೆ ದಾಖಲು

By Harshitha

ಎದೆ ಸೋಂಕಿನಿಂದ ಬಳಲುತ್ತಿರುವ ಬಾಲಿವುಡ್ ನಟ ದಿಲೀಪ್ ಕುಮಾರ್ ರನ್ನ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ದಿಲೀಪ್ ಕುಮಾರ್ ಅವರ ಅನಾರೋಗ್ಯದ ವಿಚಾರವನ್ನ ಸಂಬಂಧಿ ಫೈಸಲ್ ಫಾರೂಕಿ ಟ್ವಿಟ್ಟರ್ ನಲ್ಲಿ ಪ್ರಕಟಿಸಿದ್ದಾರೆ.

ಕಳೆದ ವರ್ಷ ಕೂಡ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಬಳಿಕ ದಿಲೀಪ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು.

Bollywood Actor Dilip Kumar hospitalized due to Chest infection

ಇದೀಗ 95 ವರ್ಷದ ದಿಲೀಪ್ ಕುಮಾರ್ ಎದೆ ಸೋಂಕು ಕಾಣಿಸಿಕೊಂಡಿದೆ. ''ಆತಂಕ ಪಡುವ ಅವಶ್ಯಕತೆ ಇಲ್ಲ. ನಿತಿನ್ ಗೋಖಲೆ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಕೆಲ ಪರೀಕ್ಷೆಗಳನ್ನು ಮಾಡಿಸಬೇಕಾಗಿರುವ ಕಾರಣ, ಕೆಲವು ದಿನ ಆಸ್ಪತ್ರೆಯಲ್ಲೇ ಇರಬೇಕಾಗುತ್ತದೆ'' ಎಂದು ಪತ್ನಿ ಸಾಯಿರಾ ಬಾನು ತಿಳಿಸಿದ್ದಾರೆ.

ಬಾಲಿವುಡ್ ಲೋಕದ ಲೆಜೆಂಡ್ ದಿಲೀಪ್ ಕುಮಾರ್ 1998 ರಲ್ಲಿ ತೆರೆಕಂಡ 'ಖಿಲಾ' ಚಿತ್ರದ ಬಳಿಕ ಯಾವುದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. 'ದೇವದಾಸ್', 'ಕರ್ಮ', 'ಮುಘಲ್ ಎ ಆಝಾಮ್' ಅಂತಹ ಹಿಟ್ ಚಿತ್ರಗಳನ್ನು ಕೊಟ್ಟ ದಿಲೀಪ್ ಕುಮಾರ್ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಅವರಿಗೆ ಸಂದಿವೆ.

More from Filmibeat

English summary
Bollywood Actor Dilip Kumar hospitalized in Mumbai's Lilavati Hospital due to Chest infection.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X