For Quick Alerts
  ALLOW NOTIFICATIONS  
  For Daily Alerts

  'ಆದಿಪುರುಷ್'ಗೆ ಸಿಕ್ಕಳು ನಾಯಕಿ: ಸೀತೆ ಜೊತೆ ಫೋಟೋ ಹಂಚಿಕೊಂಡ ರಾಮ ಪ್ರಭಾಸ್

  |

  ತೆಲುಗು ಸಿನಿಮಾದ ಖ್ಯಾತ ನಟ ಪ್ರಭಾಸ್ ಸದ್ಯ ಸಲಾರ್ ಸಿನಿಮಾ ಜೊತೆಗೆ ಆದಿಪುರುಷ್ ಸಿನಿಮಾದಲ್ಲೂ ನಿರತರಾಗಿದ್ದಾರೆ. ಎರಡು ಸಿನಿಮಾಗಳನ್ನು ಒಟ್ಟೊಟ್ಟಿಗೆ ನಿಭಾಯಿಸಿಕೊಂಡು ಹೋಗುತ್ತಿರುವ ಪ್ರಭಾಸ್, ಈಗ ಆದಿಪುರುಷ್ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ನೀಡಿದ್ದಾರೆ.

  ಪ್ರಭಾಸ್ ನಟನೆಯ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಆದಿಪುರುಷ್ ಚಿತ್ರದ ನಾಯಕಿ ವಿಚಾರ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿತ್ತು. ರಾಮ ಪ್ರಭಾಸ್‌ಗೆ ಸೀತೆ ಯಾರಾಗ್ತಾರೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇದೀಗ ಸೀತೆ ಯಾರು ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ.

  ಆದಿಪುರುಷ್ ಸಿನಿಮಾಗೆ ನಾಯಕಿಯಾಗಿ ಬಾಲಿವುಡ್ ಖ್ಯಾತ ನಟಿ ಕೃತಿ ಸನೂನ್ ಆಯ್ಕೆಯಾಗುವ ಮೂಲಕ ಕುತೂಹಲಕ್ಕೆ ಎಳೆದಿದ್ದಾರೆ. ಈ ಬಗ್ಗೆ ಸಿನಿಮಾ ತಂಡ ಅಧಿಕೃತವಾಗಿ ಮಾಹಿತಿ ಬಹಿರಂಗ ಪಡಿಸಿದ್ದಾರೆ.

  ಅಕ್ಷಯ್‌ ಕುಮಾರ್‌ಗೆ ಮೋಹಕ ಫೋಸ್ ನೀಡಿದ ಕೃತಿ ಸೆನನ್

  ನಟಿ ಕೃತಿ ಸನೂನ್ ಚಿತ್ರತಂಡ ಸೇರಿಕೊಂಡಿರುವ ಫೋಟೋವನ್ನು ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಿರ್ದೇಶಕ ಓಂ ರಾವತ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಆದಿಪುರುಷ್ ಸಿನಿಮಾದಲ್ಲಿ ಪ್ರಭಾಸ್ ರಾಮನ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

  ಸೀತೆಯಾಗಿ ಆಯ್ಕೆಯಾಗಿರುವ ಕೃತಿ ಟ್ವಿಟ್ಟರ್‌ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. 'ನನ್ನ ವಿಶೇಷವಾದ ಸಿನಿಮಾಗಳಲ್ಲಿ ಒಂದು. ಆದಿಪುರುಷ್ ಸಿನಿಮಾದ ಭಾಗವಾಗಿರುವುದು ಸಂತಸವಾಗಿದೆ' ಎಂದು ಬರೆದುಕೊಂಡಿದ್ದಾರೆ.

  ಇನ್ನು ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾಮಣನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಪ್ರಭಾಸ್ ಮತ್ತು ಸೈಫ್ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಲಕ್ಷ್ಮಣ ಪಾತ್ರದಲ್ಲಿ ಸನ್ನಿ ಸಿಂಗ್ ನಟಿಸುತ್ತಿದ್ದಾರೆ.

  Roberrt Box Office Collection : ಅಭಿಮಾನಿಗಳ ಆರ್ಭಟಕ್ಕೆ ಬಾಕ್ಸ್ ಆಫೀಸ್ ಲೂಟಿ | Filmibeat Kannada

  ಆದಿಪುರುಷ್ 400 ಕೋಟಿಗೂ ದೊಡ್ಡ ಬಜೆಟ್‌ನಲ್ಲಿ ತಯಾರಾಗಲಿದೆ. ಹಿಂದಿ ಸೇರಿದಂತೆ ಬಹು ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ. 3ಡಿ ಯಲ್ಲಿ ಆದಿಪುರುಷ್ ತೆರೆಗೆ ಬರಲಿದೆ. ಪ್ರಸ್ತುತ, ಮುಂಬೈನಲ್ಲಿ ಆದಿ ಪುರುಷ್ ಚಿತ್ರೀಕರಣ ನಡೆಯುತ್ತಿದ್ದು, ನಟ ಪ್ರಭಾಸ್ ಸೇರಿದಂತೆ ಇಡೀ ಸಿನಿಮಾತಂಡ ಮುಂಬೈನಲ್ಲಿ ಬೀಡುಬಿಟ್ಟಿದೆ. ಬಹು ನಿರೀಕ್ಷೆಯ ಆದಿಪುರುಷ್ ಸಿನಿಮಾ 2022ರ ಆಗಸ್ಟ್ 11 ರಂದು ಬಿಡುಗಡೆಯಾಗುತ್ತಿದೆ.

  English summary
  Bollywood Actress Kriti Sanon joins Prabhas's Adipurush team. She play sita in in this movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X