ಪ್ರಜ್ವಲ್ ರೇವಣ್ಣ ಪ್ರಕರಣ: "ಅಪರಾಧಿ ಮುಸ್ಲಿಂ ಆಗಿದ್ರೆ ಮಾತ್ರ ಮಹಿಳಾ ಸುರಕ್ಷತೆ ಬಗ್ಗೆ ಮಾತಾಡ್ತಾರೆ"; ನಟಿ ಸ್ವರಾ ಭಾಸ್ಕರ್

ಹಾಸನದ ಹಾಲಿ ಎಂಪಿ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸುತ್ತಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಮುಖಂಡರು, ಸಿನಿಮಾ ತಾರೆಯರು ಸೇರಿದಂತೆ ಹಲವರು ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿಕಾರುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಆಕ್ರೋಶ ಹೊರ ಹಾಕಿದ್ದಾರೆ.

ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನಲಾದ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ವಿವಾದ ಭುಗಿಲೆದ್ದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಹಾಗೂ ಎಚ್‌ ಡಿ ರೇವಣ್ಣ ವಿರುದ್ಧದ ಆರೋಪದ ಮೇಲೆ ತನಿಖೆ ಚುರುಕುಗೊಳಿಸಿ ಎಸ್‌ಐಟಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

Bollywood actress Swara Bhasker angry government silence on Prajwal Revanna case

ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ವಿವಾದ ಭುಗಿಲೇಳುತ್ತಿದ್ದಂತೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಎಕ್ಸ್ ಖಾತೆಯ ಮೂಲಕ ಕಿಡಿ ಕಾರಿದ್ದಾರೆ. ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, ಅಪರಾಧಿ ಮುಸ್ಲಿಂ, ಟಿಎಂಸಿ ಇಲ್ಲವೇ ಕಾಂಗ್ರೆಸ್‌ನವರು ಆಗಿದ್ದರೆ ಮಾತ್ರ ಮಹಿಳಾ ಸುರಕ್ಷತೆ ಬಗ್ಗೆ ಕಾಳಜಿ ವಹಿಸುತ್ತಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

ಬಾಲಿವುಡ್‌ನ ವಿವಾದಾತ್ಮಕ ನಟಿ ಸ್ವರಾ ಭಾಸ್ಕರ್ ಮೋದಿ ಸರ್ಕಾರದ ವಿರುದ್ಧ ಕಿಡಿ ಕಾರುತ್ತಲೇ ಇದ್ದಾರೆ. ಈಗ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ಹೊರ ಹಾಕಿದ್ದಾರೆ. "ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಅಪರಾಧದ ಬಗ್ಗೆ ಮೋದಿ ನಾಯಕತ್ವದ ಸರ್ಕಾರ ಸೈಲೆಂಟ್ ಆಗಿದ್ದಕ್ಕೆ ನಾವೇಕೆ ಶಾಕ್ ಆಗಿದ್ದೇವೆ?" ಎಂದು ಕಿಡಿಕಾರಿದ್ದಾರೆ.

Bollywood actress Swara Bhasker angry government silence on Prajwal Revanna case

"ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಅಪರಾಧದ ಬಗ್ಗೆ ಮೋದಿ ನಾಯಕತ್ವದ ಸರ್ಕಾರ ಸೈಲೆಂಟ್ ಆಗಿದ್ದಕ್ಕೆ ನಾವೇಕೆ ಶಾಕ್ ಆಗಿದ್ದೇವೆ? ಎಲ್ಲಾ ಗೊತ್ತಿದ್ದರೂ ಮೋದಿ ಅವನ ಪರ ಪ್ರಚಾರ ಮಾಡಿದ್ದಕ್ಕೆ ನಾವೇಕೆ ಶಾಕ್ ಆಗಿದ್ದೇವೆ? ಕಥುವಾ, ಉನ್ನಾವೋ, ಹತ್ರಾಸ್, ಕುಲ್‌ದೀಪ್ ಸೆಂಗರ್, ಬ್ರಿಜ್‌ಭೂಷಣ್ ಶರಣ್ ಹಾಗೂ ಇತರೆ ಬಗ್ಗೆ ಉದಾಹರಣೆ ನಮ್ಮ ಮುಂದೆ ಇದೆ. ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ/ಕಾಂಗ್ರೆಸ್‌ನವರಾಗಿದ್ದರೆ ಮಾತ್ರ ಅವರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾರೆ." ಎಂದು ಬಾಲಿವುಡ್ ಸ್ವರಾ ಭಾಸ್ಕರ್ ತಮ್ಮ ಎಕ್ಸ್ (ಟ್ವೀಟ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸ್ವರಾ ಭಾಸ್ಕರ್ ಜೊತೆಗೆ ಕನ್ನಡದ ನಟ ಆದಿನಗಳು ಚೇತನ್, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಆಕ್ರೋಶ ಹೊರಹಾಕಿದ್ದಾರೆ. ನೂರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರೋ ಪ್ರಜ್ವಲ್ ರೇವಣ್ಣ ಪ್ರಕರಣದ ವಿರುದ್ಧ ಕಿಡಿಕಾರಿದ್ದು, ಆದಷ್ಟು ಬೇಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಡ ಹೇರಿದ್ದಾರೆ.

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಇಬ್ಬರು ಆರೋಪಿಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ಎ 1 ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಹಾಗೂ ಎ 2 ಆರೋಪಿ ಪ್ರಜ್ವಲ್ ರೇವಣ್ಣಗೆ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

More from Filmibeat

English summary
Bollywood actress Swara Bhasker tweet on Prajwal Revanna Case:
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X