Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಶ್ರೀದೇವಿ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ: ಬೋನಿ ಕಪೂರ್ ಹೇಳಿದ್ದೇನು?
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ.
ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ನಯನತಾರ ಚಿತ್ರದ ರೀಮೇಕ್ನಲ್ಲಿ ಜಾಹ್ನವಿ ಕಪೂರ್, ಪಂಜಾಬ್ನಲ್ಲಿ ಶೂಟಿಂಗ್
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ.
ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
Recommended Video
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.