For Quick Alerts
  ALLOW NOTIFICATIONS  
  For Daily Alerts

  ಕೊರೊನಾ ನಿಯಮ ಉಲ್ಲಂಘಿಸಿ ಚಿತ್ರೀಕರಣ; ಖ್ಯಾತ ನಟನ ಬಂಧನ

  |

  ಕೊರೊನಾ ಎರಡನೇ ಅಲೆ ದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣಮಾಡಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆೆ. ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಮೊರೆಹೇದರೆ, ಇನ್ನು ಕೆಲವು ಕಡೆ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇಂಥ ಕಠಿಣ ಪರಿಸ್ಥಿತಿಯನ್ನು ಕೆಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ.

  ಕೋವಿಡ್ ನಿಯಮ ಉಲ್ಲಂಘಿಸಿ ಚಿತ್ರೀಕರಣ ಮಾಡುತ್ತಿದ್ದ ಬಾಲಿವುಡ್ ನಟ ಜಿಮ್ಮಿ ಶೇರ್ ಗಿಲ್ ಮತ್ತು ನಿರ್ದೇಶಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಪಂಜಾಬಿನಲ್ಲಿ ನಡೆದಿದೆ. ಕೊರೊನಾ ಲಾಕ್ ಡೌನ್ ಧಿಕ್ಕರಿಸಿ ಪಂಜಾಬ್ ನ ಲೂಧಿಯಾನದಲ್ಲಿ ವೆಬ್ ಸೀರಿಸ್ ಚಿತ್ರೀಕರಣ ಮಾಡುತ್ತಿದ್ದರು.

  ಸುದೀಪ್ 'ರನ್ನ' ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ

  ನಟ ಜಿಮ್ಮಿ ಶೇರ್ ಗಿಲ್ ಮತ್ತು ವೆಬ್ ಸೀರಿಸ್ ನಿರ್ದೇಶಕ ಈಶ್ವರ್ ನಿವಾಸ್ ಸೇರಿದಂತೆ ಚಿತ್ರತಂಡದ 35 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಯುವರ್ ಹಾನರ್ ಎನ್ನುವ ವೆಬ್ ಸರಣಿ ಚಿತ್ರೀಕರಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅನುಮತಿ ಇಲ್ಲದೆ ಖಾಸಗಿ ಶಾಲೆಯಲ್ಲಿ ಚಿತ್ರೀಕರಣ ಮಾಡುತ್ತಿದ್ದರು.

  ರಾತ್ರಿ 8 ಗಂಟೆ ಸುಮಾರಿಗೆ 150 ಜನ ಸಿಬ್ಬಂದಿ ಖಾಸಗಿ ಶಾಲೆಯಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಈ ಸಮಯದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ನಟ, ನಿರ್ದೇಶ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

  ದಯವಿಟ್ಟು ಡಾಕ್ಟರ್ ಹೇಳೋದನ್ನ ಕೇಳಿ ನಿರ್ಲಕ್ಷ್ಯ ಮಾಡ್ಬೇಡಿ ಅಂದ್ರು ನಿನಾಸಂ ಸತೀಶ್ | Filmibeat Kannada

  ಅನೇಕ ಸಿನಿ ಸೆಲೆಬ್ರಿಟಿಗಳು ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬಾಲಿವುಡ್ ನ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಗುಣಮುಖರಾಗಿದ್ದಾರೆ. ಅಕ್ಷಯ್ ಕುಮಾರ್, ಆಮೀರ್ ಖಾನ್, ಅಲಿಯಾ ಭಟ್, ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಸದ್ಯ ಮುಂಬೈಯಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು ಸಿನಿ ಕೆಲಸಗಳಿಗೆ ಬ್ರೇಕ್ ಬಿದ್ದಿದೆ.

  English summary
  Case Register against actor Jimmy Shergill for violating Covid rules.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X