For Quick Alerts
  ALLOW NOTIFICATIONS  
  For Daily Alerts

  ಮದುಮಗ ಸೈಫ್ ವಿರುದ್ಧ ಚಾರ್ಜ್ ಶೀಟ್ ದಾಖಲು

  By Rajendra
  |

  ಇನ್ನೇನು ಬಾಲಿವುಡ್ ತಾರೆ ಕರೀನಾ ಕಪೂರ್ ಕೈಹಿಡಿಯುತ್ತಿರುವ ನವ ವಧು ಸೈಫ್ ಅಲಿ ಖಾನ್ ವಿರುದ್ಧ ಮುಂಬೈ ಪೊಲೀಸರು ಶುಕ್ರವಾರ (ಅ.12) ಚಾರ್ಜ್ ಶೀಟ್ ದಾಖಲಿಸಿದ್ದಾರೆ. ಮುಂಬೈನ ತಾಜ್ ಹೋಟೆಲ್ ನಲ್ಲಿ ಉದ್ಯಮಿಯೊಬ್ಬರ ಮೇಲೆ ಸೈಫ್ ಕೈ ಮಾಡಿದ್ದರು.

  ತಾಜ್‌ ಹೋಟೆಲಿನ ವಸಾಬಿ ರೆಸ್ಟೋರೆಂಟ್‌ನಲ್ಲಿ ಫೆಬ್ರರಿ 22ರಂದು ರಾತ್ರಿ ಭೋಜನ ಕೂಟದಲ್ಲಿ ಸೈಫ್ ತಮ್ಮ ಭಾವಿ ಪತ್ನಿ ಕರೀನಾ ಜೊತೆ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿತ್ತು. ಹೋಟೆಲ್ ನಲ್ಲಿ ಏರು ಧ್ವನಿಯಲ್ಲಿ ಸೈಫ್ ಮಾತನಾಡುತ್ತಿದ್ದರು.

  ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಕ್ಬಾಲ್ ಶರ್ಮಾ ಎಂಬ ಅನಿವಾಸಿ ಭಾರತೀಯ ಉದ್ಯಮಿ ವಿರುದ್ಧ ಮಾತಿನ ಚಕಮಕಿ ನಡೆದಿತ್ತು. ಮಾತಿಗೆ ಮಾತು ಬೆಳೆದು ಶರ್ಮಾ ಮುಖಕ್ಕೆ ಸೈಫ್ ಪಂಚ್ ಕೊಟ್ಟಿದ್ದ.

  ಈ ಘಟನೆಯಿಂದ ಶರ್ಮಾ ಗಾಯಗೊಂಡಿದ್ದರು. ಮೂಗಿನಿಂದಲೂ ರಕ್ತ ಸೋರಿತ್ತು. ಶರ್ಮಾ ಸ್ನೇಹಿತರು ಆತನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಸಂಬಂಧ ಅವರು ಸೈಫ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

  ಒಂದು ದಿನ ಜೈಲು ವಾಸವನ್ನೂ ಅನುಭವಿಸಿದ್ದ ಸೈಫ್ ಜಾಮೀನ ಮೇಲೆ ಬಿಡುಗಡೆಯಾಗಿದ್ದರು. ಈ ಘಟನೆ ನಡೆದು ಎಂಟು ತಿಂಗಳು ಕಳೆದಿದೆ ಈಗ ಪೊಲೀಸರು ಸೈಫ್ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದಾರೆ. ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೆ ಸೈಫ್ ಹಾಜರಾಗಬೇಕಾಗುತ್ತದೆ.

  ಈ ಹಿಂದೊಮ್ಮೆ ಸೈಫ್ ರಕ್ಷಿತ ಅಭಾಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿದ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈಗ ಉದ್ಯಮಿಯೊಬ್ಬರ ಮೇಲೆ ಕೈಮಾಡಿ ಇನ್ನೊಂದು ರಾದ್ಧಾಂತ ಮಾಡಿಕೊಂಡಿದ್ದಾರೆ. (ಏಜೆನ್ಸೀಸ್)

  English summary
  A chargesheet has been filed against Saif Ali Khan by the Colaba police station for assaulting NRI Iqbal Sharma at the Taj Mahal hotel earlier in February this year. A week left for his royal wedding to girlfriend Kareena Kapoor.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X