ದೀಪಿಕಾ ಪಡುಕೋಣೆ ಹೃದಯ ಬಡಿತದಲ್ಲಿ ಏರುಪೇರು: ಫ್ಯಾನ್ಸ್‌ಗೆ ಟೆನ್ಶನ್.. ನಿರ್ಮಾಪಕ ಹೇಳಿದ್ದೇನು?

ಬಾಲಿವುಡ್‌ನ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅನಾರೋಗ್ಯದಲ್ಲಿ ಏರುಪೇರಾಗಿದೆ. ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ದೀಪಿಕಾ ಪಡುಕೋಣೆ ಹೈದರಾಬಾದ್‌ನಲ್ಲಿ ಪ್ರಭಾಸ್ ಸಿನಿಮಾ ಪ್ರಾಜೆಕ್ಟ್ ಕೆ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಈ ಚಿತ್ರದ ಶೂಟಿಂಗ್ ವೇಳೆ ದೀಪಿಕಾ ದಿಢೀರನೇ ಅನಾರೋಗ್ಯಕ್ಕೆ ತುತ್ತಾಗಿ ಕಾಮಿನೇನಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.

ದೀಪಿಕಾ ಪಡುಕೋಣೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಸಿನಿಮಾ ಶೂಟಿಂಗ್ ಮಾಡುವ ವೇಳೆ ಆಯಾಸ ಆಗುತ್ತಿದೆ ಎಂದು ಹೇಳಿದ್ದರು. ಬಳಿಕ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡ ಹೋಗಲಾಗಿತು.

ಕಾಮಿನೇನಿ ಆಸ್ಪತ್ರೆಯಲ್ಲಿ ದೀಪಿಕಾ ಪಡುಕೋಣೆಗೆ ವೈದ್ಯರು ತಕ್ಷಣವೇ ಅಗತ್ಯ ಚಿಕಿತ್ಸೆಯನ್ನು ನೀಡಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ದೀಪಿಕಾ ಪಡುಕೋಣೆ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದೇ ಸಿನಿಮಾದಲ್ಲಿ ದೀಪಿಕಾ ಜೊತೆ ಅಮಿತಾಬ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.

'ಪ್ರಾಜೆಕ್ಟ್ ಕೆ' ಚಿತ್ರದಲ್ಲಿ ದೀಪಿಕಾ

'ಪ್ರಾಜೆಕ್ಟ್ ಕೆ' ಚಿತ್ರದಲ್ಲಿ ದೀಪಿಕಾ

ಬಾಲಿವುಡ್‌ನ ಗ್ಲಾಮರಸ್ ನಟಿ ತನ್ನದೇ ಇಮೇಜ್ ಅನ್ನು ಸೃಷ್ಟಿಸಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಇದೇ ಚೊಚ್ಚಲ ಬಾರಿಗೆ ಪ್ರಭಾಸ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ನಾಗ್ ಅಶ್ವಿನ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಪ್ರಭಾಸ್ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅದ್ಧೂರಿ ಸಾಹಸಮಯ ದೃಶ್ಯಗಳಿವೆ ಎನ್ನಲಾಗಿದೆ. ಇದೇ ಚಿತ್ರದಲ್ಲಿ ದೀಪಿಕಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ಮುಗಿದಿದ್ದು, ಎರಡನೇ ಹಂತದ ಶೂಟಿಂಗ್‌ಗಾಗಿ ಹೈದರಾಬಾದ್‌ಗೆ ಬಂದಿದ್ದರು.

ದೀಪಿಕಾ ಅನಾರೋಗ್ಯ

ದೀಪಿಕಾ ಅನಾರೋಗ್ಯ

ಎರಡನೇ ಹಂತದ ಶೂಟಿಂಗ್‌ಗೆ ಭಾಗಿಯಾಗಿದ್ದ ದೀಪಿಕಾಗೆ ದಿಢೀರನೇ ಅನಾರೋಗ್ಯ ಕೈ ಕೊಟ್ಟಿತ್ತು. ದೀಪಿಕಾ ಹೃದಯದ ಬಡಿತದಲ್ಲಿ ಏರುಪೇರು ಆಗಿದ್ದರಿಂದ ಆಯಾಸಕ್ಕೊಳಗಾಗಿದ್ದರು. ತಕ್ಕಣವೇ ಆಕೆಯನ್ನು ಕೂಡಲೇ ಆಸ್ಪತ್ರೆ ಸೇರಿಸಲಾಗಿತ್ತು. 'ಪ್ರಾಜೆಕ್ಟ್ ಕೆ' ಚಿತ್ರದ ನಿರ್ಮಾಪಕರ ನೆರವಿನಿಂದ ಕಾಮಿನೇನಿ ಆಸ್ಪತ್ರೆ ಸಿಬ್ಬಂದಿ ದೀಪಿಕಾ ಪಡುಕೋಣೆಯನ್ನುಕರೆದೊಯ್ದು ಚಿಕಿತ್ಸೆ ನೀಡಿದ್ದರು ಎನ್ನಲಾಗಿದೆ.

2-3 ಆಸ್ಪತ್ರೆಯಲ್ಲಿ ಚಿಕಿತ್ಸೆ

2-3 ಆಸ್ಪತ್ರೆಯಲ್ಲಿ ಚಿಕಿತ್ಸೆ

ಆನಾರೋಗ್ಯದ ಬಳಿಕ ದೀಪಿಕಾ ಪಡುಕೋಣೆ ಆಸ್ಪತ್ರೆಯಲ್ಲಿ 2-3 ದಿನಗಳ ಕಾಲ ದಾಖಲಾಗಿದ್ದರು. ದೀಪಿಕಾಗೆ ವೈದ್ಯ ತೀವ್ರ ನಿಗಾ ವಹಿಸಿದ್ದರು ಎನ್ನಲಾಗಿದೆ. ಹೃದಯದ ಬಳಿ ಸ್ವಲ್ಪ ನೋವು ಕಾಣಿಸಿಕೊಂಡಿದೆ ಎಂದು ದೀಪಿಕಾ ವೈದ್ಯರಿಗೆ ತಿಳಿಸಿದ್ದರು ಎನ್ನಲಾಗಿದೆ. ಆದರೆ, ದೀಪಿಕಾ ಅಭಿಮಾನಿಗಳು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಯಾಕಂದ್ರೆ, ಈಗಾಗಲೇ ದೀಪಿಕಾ ಸಂಪೂರ್ಣವಾಗಿ ಚೇತರಿಸಿಕೊಂಡು ಶೂಟಿಂಗ್‌ಗೆ ಮರಳಿದ್ದಾರೆ ಎನ್ನುವ ಸುದ್ದಿಯಿದೆ.

ದೀಪಿಕಾಗೆ ವಿಶ್ರಾಂತಿ ಅಗತ್ಯ

ದೀಪಿಕಾಗೆ ವಿಶ್ರಾಂತಿ ಅಗತ್ಯ

ಮೂರು ದಿನಗಳ ಬಳಿಕ ದೀಪಿಕಾ ಪಡುಕೋಣೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯರು ಕೂಡ ದೀಪಿಕಾಗೆ ಒಂದೆರಡು ದಿನಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಿದ್ದಾರೆಂದು ತಿಳಿದುಬಂದಿದೆ. ಮತ್ತೆ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಗೆ ಬರುವಂತೆ ಸೂಚಿದ್ದಾರೆ ಎನ್ನಲಾಗಿದೆ.

ಪ್ರಾಜೆಕ್ಟ್ ಕೆ ಶೂಟಿಂಗ್‌ನಲ್ಲಿ ಭಾಗಿ

ಪ್ರಾಜೆಕ್ಟ್ ಕೆ ಶೂಟಿಂಗ್‌ನಲ್ಲಿ ಭಾಗಿ

ದೀಪಿಕಾ ಪಡುಕೋಣೆ ಆರೋಗ್ಯ ಸುಧಾರಿಸಿದ ಬಳಿಕ ಮತ್ತೆ 'ಪ್ರಾಜೆಕ್ಟ್ ಕೆ' ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.ಈ ಚಿತ್ರದ ಶೂಟಿಂಗ್‌ಗಾಗಿ ಈಗಾಗಲೇ ಅದ್ಧೂರಿ ಸೆಟ್‌ ನಿರ್ಮಿಸಲಾಗಿದ್ದು, ಈ ದೃಶ್ಯಗಳಲ್ಲಿ ದೀಪಿಕಾ ಪಡುಕೋಣೆ, ಪ್ರಭಾಸ್ ಮತ್ತು ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಸರಿಡದ 'ಪ್ರಾಜೆಕ್ಟ್ ಕೆ' 2024 ರಲ್ಲಿ ಬಿಡುಗಡೆಯಾಗಲಿದೆ.

More from Filmibeat

English summary
Deepika Padukone Falls Sick After Her Heart Rate Increased Project Producers Gave Clarification, Know More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X