For Quick Alerts
  ALLOW NOTIFICATIONS  
  For Daily Alerts

  ದೀಪಿಕಾ ಪಡುಕೋಣೆ ತಂದೆ ಪ್ರಕಾಶ್ ಆಸ್ಪತ್ರೆಯಿಂದ ಡಿಸ್ಚಾರ್ಜ್

  |

  ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ತಂದೆ ಹಾಗೂ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆಗೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ, ಎರಡು ವಾರದ ಚಿಕಿತ್ಸೆ ಬಳಿಕ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

  ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಪಡುಕೋಣೆ ಅವರನ್ನು 2021 ರ ಮೇ 1 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  ಕೋವಿಡ್‌ನಿಂದಾಗಿ ಆಸ್ಪತ್ರೆಗೆ ದಾಖಲಾದ ದೀಪಿಕಾ ಪಡುಕೋಣೆ ತಂದೆಕೋವಿಡ್‌ನಿಂದಾಗಿ ಆಸ್ಪತ್ರೆಗೆ ದಾಖಲಾದ ದೀಪಿಕಾ ಪಡುಕೋಣೆ ತಂದೆ

  ಪ್ರಕಾಶ್ ಪಡುಕೋಣೆ ಮಾತ್ರವಲ್ಲದೇ ಪತ್ನಿ ಉಜ್ವಲಾ ಪಡುಕೋಣೆ, ಎರಡನೇ ಮಗಳು ಅನಿಶಾ ಪಡುಕೋಣೆ ಅವರಿಗೂ ಕೋವಿಡ್ ಸೋಂಕು ತಗುಲಿತ್ತು. ಆದರೆ, ಜ್ವರ ಕಡಿಮೆಯಾಗದ ಕಾರಣ ಪ್ರಕಾಶ್ ಅವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  ದೀಪಿಕಾ ಪಡುಕೋಣೆ ಮತ್ತು ಪತಿ ರಣ್ವೀರ್ ಸಿಂಗ್ ಬೆಂಗಳೂರಿಗೆ ಭೇಟಿ ನೀಡಿದ್ದರು. ವರದಿಗಳ ಪ್ರಕಾರ ದೀಪಿಕಾ ಅವರಿಗೂ ಕೋವಿಡ್ ಸೋಂಕು ದೃಢವಾಗಿದೆ. ಆದರೆ, ಈ ಕುರಿತು ದೀಪಿಕಾ ಎಲ್ಲಿಯೂ ಅಧಿಕೃತವಾಗಿ ತಿಳಿಸಿಲ್ಲ. ಸದ್ಯಕ್ಕೆ ದೀಪಿಕಾ ಸಹ ಕ್ವಾರಂಟೈನ್‌ನಲ್ಲಿದ್ದಾರೆ ಎನ್ನಲಾಗಿದೆ.

  ಪ್ರಕಾಶ್ ಪಡುಕೋಣೆ ಕುಟುಂಬಕ್ಕೆ ಸೋಂಕು ತಗುಲಿರುವ ಬಗ್ಗೆ ಅವರ ಆಪ್ತ ವಿಮಲ್ ಕುಮಾರ್ ಮಾಹಿತಿ ನೀಡಿದ್ದರು. ''ಪ್ರಕಾಶ್ ಹಾಗೂ ಕುಟುಂಬ ಸದಸ್ಯರಿಗೆ ಸೋಂಕು ತಗುಲಿದೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ'' ಎಂದು ತಿಳಿಸಿದ್ದರು.

  ರಾಧೆ ಸಿನಿಮಾವನ್ನು ಪ್ರಭುದೇವ ಹಾಳು ಮಾಡಿದ್ದಾರೆ ಅಂದ್ರು ನಟಿ ಶ್ರೀರೆಡ್ಡಿ | Filmibeat Kannada

  ಇನ್ನು ಸಿನಿಮಾ ವಿಚಾರಕ್ಕೆ ಬಂದ್ರೆ ನಿತೀಶ್ ತಿವಾರಿ ಸಾರಥ್ಯದಲ್ಲಿ ಬರಲಿರುವ 'ರಾಮಾಯಣ' ಚಿತ್ರದಲ್ಲಿ 'ಸೀತೆ' ಪಾತ್ರಕ್ಕಾಗಿ ದೀಪಿಕಾ ಅವರನ್ನು ಸಂಪರ್ಕಿಸಲಾಗಿದೆ ಎಂದು ವರದಿಯಾಗಿದೆ. ಪ್ರಭಾಸ್ ಮತ್ತು ನಾಗ್ ಅಶ್ವಿನ್ ಜೋಡಿಯ ಚಿತ್ರದಲ್ಲಿ ದೀಪಿಕಾ ನಾಯಕಿಯಾಗಿದ್ದಾರೆ.

  English summary
  Deepika Padukone Father Discharged From Hospital After Recovering From COVID-19.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X