ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ-ರಣ್‌ವೀರ್ ಸಿಂಗ್; ಫ್ಯಾನ್ಸ್‌ಗೆ ಸಿಹಿ ಸುದ್ದಿ
ಬಾಲಿವುಡ್‌ನ ಮೋಸ್ಟ್ ಬ್ಯೂಟಿಫುಲ್ ಕಪಲ್ ಅಂದ್ರೆ ಅದು ರಣ್‌ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ. ಈ ಜೋಡಿ ವಿವಾಹದ ಬಳಿಕವೂ ಸಿಕ್ಕಾಪಟ್ಟೆ ಬ್ಯುಸಿಯಾಗಿವೆ. ಕೆಲವು ದಿನಗಳ ಹಿಂದಷ್ಟೇ ದೀಪಿಕಾ ಪಡುಕೋಣೆ ಗರ್ಭಿಣಿಯಾಗಿದ್ದಾರೆ ಅನ್ನೋದು ಸುದ್ದಿ ಹರಿದಾಡಿತ್ತು. ಅದಕ್ಕೆ ಪೂರಕವಾಗಿ ದೀಪಿಕಾ ಪಡುಕೋಣೆ ಹಾಗೂ ರಣ್‌ವೀರ್ ಸಿಂಗ್ ಇಬ್ಬರೂ ಸಿಹಿ ಸುದ್ದಿಯನ್ನು ಕೊಟ್ಟಿದ್ದಾರೆ.
ದೀಪಿಕಾ ಪಡುಕೋಣೆ ಗರ್ಭಿಣಿಯಾಗಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದ್ದಂತೆ ಕೆಲವ ಅಭಿಮಾನಿಗಳು ಸುಳ್ಳು ಸುದ್ದಿ ಎಂದಿದ್ದರು. ಆದ್ರೀಗ ರಣ್‌ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಇಬ್ಬರೂ ಬಿಗ್ ಅನೌನ್ಸ್‌ಮೆಂಟ್ ಮಾಡಿದ್ದಾರೆ.

ಹೌದು, ದೀಪಿಕಾ ಪಡುಕೋಣೆ ಹಾಗೂ ರಣ್‌ವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದೀಪಿಕಾ ಪಡುಕೋಣೆ ಸದ್ಯಕ್ಕೀಗ ನಾಲ್ಕು ತಿಂಗಳ ಗರ್ಭಿಣಿ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿವೆ. ಸದ್ಯ ಹೆಚ್ಚಿ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಆದರೆ, ಫೋಟೊವೊಂದನ್ನು ಶೇರ್ ಮಾಡಿಕೊಂಡಿದ್ದರು 'ಸೆಪ್ಟೆಂಬರ್ 2024' ಎಂದು ಬರೆದುಕೊಂಡಿದ್ದಾರೆ.
ರಣ್‌ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ 2018ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಆರು ವರ್ಷಗಳ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸೆಪ್ಟೆಂಬರ್ ತಿಂಗಳು ಡಿಲೇವರಿ ಡೇಟ್ ಎಂದು ಈ ಬಾಲಿವುಡ್ ಜೋಡಿ ಸುಳಿವು ಕೊಟ್ಟಿದೆ.


Click it and Unblock the Notifications











