'ಅರುಂಧತಿ' ಹಿಂದಿ ರಿಮೇಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಕನ್ನಡದ ಬೆಡಗಿ

ತೆಲುಗಿನ ಸೂಪರ್ ಹಿಟ್ ಅರುಂಧತಿ ಸಿನಿಮಾ ಬಾಲಿವುಡ್ ಗೆ ರಿಮೇಕ್ ಆಗಲಿದೆ ಎನ್ನುವ ಮಾತು ಜೋರಾಗಿ ಕೇಳಿ ಬರುತ್ತಿದೆ. 2009ರಲ್ಲಿ ತೆರೆಗೆ ಬಂದ ಅರುಂಧತಿ ತೆಲುಗಿನ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ. ತೆಲುಗು ಚಿತ್ರರಂಗ ಮಾತ್ರವಲ್ಲದೆ ಸೌತ್ ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದ್ದ ಅರುಂಧತಿ ಈಗ ಹಿಂದಿಯಲ್ಲಿ ಮೂಡಿ ಬರಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಅರುಂಧತಿ ರಿಮೇಕ್ ಆಗುತ್ತಿದೆ ಎನ್ನುವ ಸುದ್ದಿ ವೈರಲ್ ಆಗುತ್ತಿದ್ದಂತೆ ಅನುಷ್ಕಾ ಶೆಟ್ಟಿ ಅಭಿನಯಿಸಿದ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಜೋರಾಗಿ ಚರ್ಚೆಯಾಗುತ್ತಿದೆ. ಸದ್ಯ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಅರುಂಧತಿ ಪಾತ್ರದಲ್ಲಿ ಕನ್ನಡತಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದರೆ ಚಿತ್ರಕ್ಕೆ ಯಾರು ಆಕ್ಷನ್ ಕಟ್ ಹೇಳಲಿದ್ದಾರೆ, ಯಾರ ನಿರ್ಮಾಣದಲ್ಲಿ ಮೂಡಿ ಬರಲಿದೆ ಎನ್ನುವ ಮಾಹಿತಿ ಇನ್ನು ರಿವೀಲ್ ಆಗಿಲ್ಲ. ಇನ್ನು ವಿಲನ್ ಪಾತ್ರದಲ್ಲಿ ಮಿಂಚಿದ್ದ ಸೋನು ಸೂದ್ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಸದ್ಯದ ಕುತೂಹಲವಾಗಿದೆ. ಸೋನು ಪಾತ್ರಕ್ಕೆ ಹುಡುಕಾಟ ನಡೆಯುತ್ತಿದೆಯಂತೆ.

Deepika Padukone To Play Lead Role In Hindi Remake Of Arundhati

ಅಂದಹಾಗೆ ದೀಪಿಕಾ ಅಭಿನಯದ ಚಪಾಕ್ ಸಿನಿಮಾ ರಿಲೀಸ್ ಗೆ ಸಜ್ಜಾಗುತ್ತಿದೆ. ಜೊತೆಗೆ ಪತಿ ರಣ್ವೀರ್ ಸಿಂಗ್ ಜೊತೆ 83 ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ದೀಪಿಕಾ. ಇನ್ನು ವಿಶೇಷ ಅಂದರೆ ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ಮಹಾಭಾರತ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಬಗ್ಗೆ ಸ್ವತಹ ದೀಪಿಕಾ ಸ್ಪಷ್ಟಪಡಿಸಿದ್ದಾರೆ. ಈ ಸಿನಿಮಾ ಮುಗಿಯುತ್ತಿದ್ದಂತೆ ಅರುಂಧತಿ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

More from Filmibeat

English summary
Bollywood actress Deepika Padukone to play lead role in Hindi remake of Anushka Shetty's Arundhati.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X