Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'DDLJ' ಚಿತ್ರಕ್ಕೆ 25ನೇ ವರ್ಷದ ಸಂಭ್ರಮ: ರೀ ರಿಲೀಸ್ ಆಗುತ್ತಿದೆ ಶಾರುಖ್-ಕಾಜೋಲ್ ಸಿನಿಮಾ
'ದಿಲ್ ವಾಲೆ ದುಲ್ಹನಿಯಾ ಲೇ ಜಾಯೇಂಗೆ' ಈ ಸಿನಿಮಾ ಹೆಸರನ್ನು ಯಾರು ಕೇಳಿಲ್ಲ ಹೇಳಿ. ಈ ಹೆಸರು ಹೇಳುತ್ತಿದ್ದ ಹಾಗೆ ಶಾರುಖ್ ಖಾನ್ ಮತ್ತು ಕಾಜೋಲ್ ಕಣ್ಮುಂದೆ ಬರುತ್ತಾರೆ. ಶಾರುಖ್ ಮತ್ತು ಕಾಜೋಲ್ ಸಿನಿಮಾ ಬದುಕಿಗೆ ದೊಡ್ಡ ತಿರುವುಕೊಟ್ಟ ಸಿನಿಮಾವಿದು. ಈ ಸಿನಿಮಾ ಬಳಿಕ ಶಾರುಖ್ ಮತ್ತು ಕಾಜೋಲ್ ಜೋಡಿ ಬಾಲಿವುಡ್ ನಲ್ಲಿ ಮೋಸ್ಟ್ ಸಕ್ಸಸ್ ಫುಲ್ ಜೋಡಿಯಾಗಿ ಹೊರಹೊಮ್ಮಿತು.
ಈ ಸಿನಿಮಾವನ್ನು ಭಾರತದಲ್ಲಿ ಅಪ್ರತಿಮ ಪ್ರೇಮಕಥೆ ಎಂದೇ ಕರೆಯಲಾಗುತ್ತಿದೆ. ಯುವರಾಜ್ ಮತ್ತು ಸಿಮ್ರಾನ್ ಪಾತ್ರದಲ್ಲಿ ಶಾರುಖ್ ಮತ್ತು ಕಾಜೋಲ್ ಮಿಂಚಿದ್ದರು. ಅಂದ್ಹಾಗೆ ಈ ಎವರ್ ಗ್ರೀನ್ ಸಿನಿಮಾ ರಿಲೀಸ್ ಆಗಿ 25 ವರ್ಷಗಳನ್ನು ಪೂರೈಸುತ್ತಿದೆ. 1995 ಅಕ್ಟೋಬರ್ 20ಕ್ಕೆ ಈ ಸಿನಿಮಾ ರಿಲೀಸ್ ಆಗಿತ್ತು. 25ನೇ ವರ್ಷದ ಸಂಭ್ರಮದಲ್ಲಿ ಈ ಸಿನಿಮಾವನ್ನು ಮತ್ತೆ ರಿಲೀಸ್ ಮಾಡುವ ನಿರ್ಧಾರ ಮಾಡಲಾಗಿದೆ. ಮುಂದೆ ಓದಿ...
ಸ್ಪೇನ್ ನಲ್ಲಿ ರೀ ರಿಲೀಸ್ ಆಗುತ್ತಿದೆ DDLJ
'ದಿಲ್ ವಾಲೆ ದುಲ್ಹನಿಯಾ ಲೇ ಜಾಯೇಂಗೆ' ಸಿನಿಮಾ ರೀ ರಿಲೀಸ್ ಆಗುತ್ತಿರುವುದೇನೋ ನಿಜ, ಆದರೆ ಭಾರತದಲ್ಲಿ ಅಲ್ಲ. ಬದಲಿಕೆ ಸ್ಪೇನ್ ನಲ್ಲಿ ರೀ ರಿಲೀಸ್ ಆಗುತ್ತಿದೆ. ಮನಿ ಹೀಸ್ಟ್ ಸಿನಿಮಾದ ನಾಯಕ ಅಜಯ್ ಜೇಥಿ ಈ ಸಿನಿಮಾವನ್ನು ಸ್ಪೇನ್ ನಲ್ಲಿ ರಿಲೀಸ್ ಮಾಡುವ ಪ್ಲಾನ್ ಮಾಡಿದ್ದಾರೆ. ಅಜಯ್ ನಟನಾಗಿ ಮಾತ್ರವಲ್ಲದೆ ಬಾಲಿವುಡ್ ಸಿನಿಮಾಗಳ ವಿತರಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಅಕ್ಟೋಬರ್ 30ಕ್ಕೆ ಸಿನಿಮಾ ರಿಲೀಸ್
ಅಕ್ಟೋಬರ್ 30ರಂದು ಈ ರೀ ರಿಲೀಸ್ ಆಗುತ್ತಿದೆ ಎಂದು ಬಹಿರಂಗಪಡಿಸಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರಮಂದಿರಗಳು ಓಪನ್ ಆಗುತ್ತಿವೆ. ಈಗಾಗಲೇ ಅನೇಕ ದೇಶಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇದೀಗ ಲಾಕ್ ಡೌನ್ ಬಳಿಕ ಸ್ಪೇನ್ ನಲ್ಲಿ ತೆರೆ ಕಾಣುತ್ತಿರುವ ಮೊದಲ ಬಾಲಿವುಡ್ ಸಿನಿಮಾ ಇದಾಗಿದೆ.
ಸಿನಿಮಾ ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ
ಸಿನಿಮಾ ರೀ ರಿಲೀಸ್ ಬಗ್ಗೆ ಪೋಸ್ಟ್ ಹಂಚಿಕೊಂಡ ಬಳಿಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕರು ಎಲ್ಲಿ ರಿಲೀಸ್ ಆಗಲಿದೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ನಿಜಕ್ಕೂ ಶಾರುಖ್ ಮತ್ತು ಕಾಜೋಲ್ ಅವರನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ ಎಂದು ನಟ ಮತ್ತು ವಿತರಕ ಅಜಯ್ ಜೇಥಿ ಹೇಳಿದ್ದಾರೆ.
Recommended Video
20 ವರ್ಷ ಪ್ರದರ್ಶನ ಕಂಡು ದಾಖಲೆ ನಿರ್ಮಿಸಿದ ಸಿನಿಮಾ
ಅಂದ್ಹಾಗೆ 'ದಿಲ್ ವಾಲೆ ದುಲ್ಹನಿಯಾ ಲೇ ಜಾಯೇಂಗೆ' ಸಿನಿಮಾ 1995ರಿಂದ ಸತತ 20 ವರ್ಷಗಳ ಕಾಲ ಮುಂಬೈನ ಮರಾಠ ಮಂದಿರ್ ನಲ್ಲಿ ಪ್ರಸಾರವಾಗುತ್ತಿತ್ತು. 2015ರಿಂದ ಸಿನಿಮಾ ಪ್ರದರ್ಶನ ನಿಲ್ಲಿಸಲಾಗಿದೆ. ಕೊನೆಯ ಪ್ರದರ್ಶನದ ವೇಳೆ 210 ಪ್ರೇಕ್ಷಕರಿದ್ದರು. ಭಾರತೀಯರು ಮಾತ್ರವಲ್ಲದೆ ವಿದೇಶದಿಂದನೂ ಜನ ಬಂದು ಈ ಸಿನಿಮಾ ವೀಕ್ಷಿಸುತ್ತಿದ್ದರಂತೆ. ಕ್ರಮೇಣ ಪ್ರೇಕ್ಷಕರ ಸಂಖ್ಯೆ ಕಡಿಮೆಯಾದ ಕಾರಣ ಸಿನಿಮಾ ಪ್ರದರ್ಶನ ನಿಲ್ಲಿಸಿದ್ದಾರೆ. ಭಾರತೀಯ ಸಿನಿಮಾರಂಗದಲ್ಲೇ ಸತತ 20 ವರ್ಷ ಪ್ರದರ್ಶನ ಕಂಡ ಏಕೈಕ ಸಿನಿಮಾ ಎಂಬ ದಾಖಲೆ ನಿರ್ಮಿಸಿದೆ.