ಸುಕೇಶ್ ಚಂದ್ರಶೇಖರ್ ವಂಚನೆ ಪ್ರಕರಣಕ್ಕೆ ಜಾಕ್ವೆಲಿನ್ ಫರ್ನಾಂಡೀಸ್ 7 ಕೋಟಿ ಆಸ್ತಿ ಜಪ್ತಿ ಮಾಡಿದ ED!

ಕರ್ನಾಟಕ ಮೂಲದ ವಂಚಕ ಸುಕೇಶ್ ಚಂದ್ರಶೇಖರ್ 200 ಕೋಟಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಹೆಸರು ತಳುಕು ಹಾಕಿಕೊಂಡಿತ್ತು. ವಿಕ್ರಾಂತ್ ರೋಣ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹಾಗೂ ವಂಚಕ ಸುಕೇಶ್ ಚಂದ್ರಶೇಖರ್ ನಡುವಿನ ಒಡನಾಡದ ಬಗ್ಗೆ ಇಡಿ ಅಧಿಕಾರಿಗಳು ಕಣ್ಣಿಟ್ಟಿದ್ದರು. ತನಿಖೆಯಲ್ಲಿ ಸುಕೇಶ್ ಚಂದ್ರಶೇಖರ್ ಬಾಲಿವುಡ್ ನಟಿ ಜಾಕ್ವೆಲಿನ್‌ಗೆ ದುಬಾರಿ ಉಡುಗೊರೆಗಳನ್ನು ನೀಡಿದ್ದು ಬೆಳಕಿಗೆ ಬಂದಿತ್ತು. ಅಂದಿನಿಂದ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಈಗ ಇಡಿ ಅಧಿಕಾರಿಗಳು ಈ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ 7.27 ಕೋಟಿ ಮೌಲ್ಯದ ವಸ್ತುಗಳು ಹಾಗೂ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಇದರಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಹೆಸರಿನಲ್ಲಿರುವ ಫಿಕ್ಸ್ಡ್ ಡೆಪಾಸಿಟ್ ಕೂಡ ಸೇರಿದೆ ಎಂದು ಇಂಡಿಯಾ ಟು ಡೇ ವರದಿ ಮಾಡಿದೆ.

ಜಾಕ್ವೆಲಿನ್ ವಂಚನೆ ಹಣದ ಫಲಾನುಭವಿ

ಸುಕೇಶ್ ಚಂದ್ರಶೇಖರ್ ವಂಚನೆ ಮಾಡಿದ ಹಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಫಲಾನುಭವಿ ಆಗಿದ್ದು, ನಟಿ ಆಸ್ತಿ ಹಾಗೂ ಬೆಲೆಬಾಳುವ ವಸ್ತುಗಳನ್ನು ಮನಿ ಲೌಂಡರಿಂಗ್ ಕಾಯ್ದೆ ಅಡಿಯಲ್ಲಿ ಜಪ್ತಿ ಮಾಡಲಾಗಿದೆ.

ED attached Rs 7.27 cr assets of Jacqueline Fernandez in the extortion case against Sukesh Chandrashekhar

ಸುಕೇಶ್ ಚಂದ್ರಶೇಖರ್ ವಂಚನೆ ಮಾಡಿದ ಹಣದಲ್ಲಿ ಸುಮಾರು 5.71 ಕೋಟಿ ಬೆಲೆಬಾಳುವ ಉಡುಗೊರೆಯನ್ನು ಜಾಕ್ವೆಲಿನ್‌ಗೆ ನೀಡಿದ್ದಾನೆ ಎನ್ನಲಾಗಿದೆ. ಉಡುಗೊರೆಗಳ ಜೊತೆಗೆ ಜಾಕ್ವೆಲಿನ್ ಫರ್ನಾಂಡೀಸ್ ಕುಟುಂಬದ ಸದಸ್ಯರಿಗೆ 173,000 ಯುಎಸ್ ಡಾಲರ್ ಹಾಗೂ 27,000 ಆಸ್ಟ್ರೇಲಿಯನ್ ಡಾಲರ್ ಅನ್ನು ವರ್ಗಾವಣೆ ಮಾಡಲಾಗಿದೆ.

ED ಅಧಿಕಾರಿಗಳು ಕ್ಲೀನ್ ಚಿಟ್ ಕೊಟ್ಟಿಲ್ಲ

ಇಡಿ ಅಧಿಕಾರಿಗಳು ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆ ಮಾಡಿದ್ದಾರೆ. ಸುಕೇಶ್ ಚಂದ್ರಶೇಖರ್ ಜೊತೆಗಿನ ಒಡನಾಟ, ಹಾಗೂ ದುಬಾರಿ ಉಡುಗೊರೆಗಳ ಬಗ್ಗೆ ಈ ಹಿಂದೆನೇ ಹಲವು ಬಾರಿ ಪ್ರಶ್ನೆ ಮಾಡಿದ್ದಾರೆ. ಬಾಲಿವುಡ್ ನಟಿ ಈ ಪ್ರಕರಣದ ಆರೋಪಿ ಅಲ್ಲದೆ ಇದ್ದರೂ, ಇಡಿ ಅಧಿಕಾರಿಗಳು ಇನ್ನೂ ಈಕೆಗೆ ಕ್ಲೀನ್ ಚಿಟ್ ನೀಡಿಲ್ಲ.

ED attached Rs 7.27 cr assets of Jacqueline Fernandez in the extortion case against Sukesh Chandrashekhar

ಸುಕೇಶ್ ಚಂದ್ರಶೇಖರ್ ದೆಹಲಿ ಮೂಲದ ಉದ್ಯಮಿಯ ಪತ್ನಿಗೆ 215 ಕೋಟಿ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದಾನೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಉದ್ಯಮಿ ಶಿವಿಂದರ್ ಸಿಂಗ್‌ಗೆ ಬೇಲ್ ಕೊಡಿಸಲು ಜೈಲಿನಲ್ಲಿ ಇದ್ದು ಕೊಂಡೇ ಫೇಕ್ ಮಾಡಿದ್ದ. ಪ್ರಧಾನ ಮಂತ್ರಿಯ ಕಚೇರಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿ ಮೋಸ ಮಾಡಿದ್ದ. ಶಿವಿಂದರ್ ಸಿಂಗ್ ಪತ್ನಿ ನೀಡಿದ ದೂರಿನ ಮೇಲೆ ಸುಕೇಶ್ ಮೇಲೆ ಕೇಸು ದಾಖಲಿಸಿ ತನಿಖೆ ನಡೆಸಲಾಗಿತ್ತು.

More from Filmibeat

English summary
ED attached Rs 7.27 cr assets of Jacqueline Fernandez in the extortion case against Sukesh Chandrashekhar.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X