Kangana Ranaut: ಕಾಂಟ್ರವರ್ಸಿ ಕ್ವೀನ್ ಕಂಗನಾ ರಣಾವತ್‌ಗೆ ಗೆಲುವು; ವೋಟಿನ ಅಂತರ ಎಷ್ಟು?
ಬಾಲಿವುಡ್‌ನ ಕಾಂಟ್ರವರ್ಸಿ ಕ್ವೀನ್ ಕಂಗನಾ ರಣಾವತ್ ಈ ಬಾರಿಯ ಲೋಕ ಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ತಮ್ಮ ರಾಜ್ಯ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಹೀಗಾಗಿ ಬಾಲಿವುಡ್ ಮಂದಿ ಸೇರಿದಂತೆ ದೇಶದ ಜನತೆಯ ಕಣ್ಣು ಇವರನ್ನು ಕುತೂಹಲದಿಂದ ನೋಡುತ್ತಿತ್ತು.
ಮಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಕಂಗನಾ ರಣಾವತ್ ಸ್ಪರ್ಧೆಗೆ ಇಳಿದಿದ್ದರು. ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಕಂಗನಾಗೆ ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಕಂಗನಾ ರಣಾವತ್ ಬಿಜೆಪಿಗೆ ಗೆಲವು ತಂದುಕೊಟ್ಟಿದ್ದಾರೆ.

ಬಿಜೆಪಿಯಿಂದ ಎರಡು ಬಾರಿ ಗೆದ್ದಿದ್ದ ಸ್ವರೂಪ್ ಶರ್ಮಾ ನಿಧನದ ಬಳಿಕ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರ ಕೈ ತಪ್ಪಿ ಹೋಗಿತ್ತು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರತಿಭಾ ಸಿಂಗ್ ಗೆದ್ದಿದ್ದರು. ಈ ಬಾರಿ ಅವರ ಪುತ್ರಿ ವಿಕ್ರಮಾದಿತ್ಯ ಸಿಂಗ್ ಕಾಂಗ್ರೆಸ್‌ನಿಂದ ಅಖಾಡಕ್ಕೆ ಇಳಿದಿದ್ದರು. ಈಗ ಕಂಗನಾ ರಣಾವತ್ ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಆ ಕ್ಷೇತ್ರವನ್ನು ಮರಳಿ ಪಡೆದಂತೆ ಆಗಿದೆ.
ಬಾಲಿವುಡ್ ನಟಿ ಕಂಗನಾ ರಣಾವತ್ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರ ವಿರುದ್ಧ ಸುಮಾರು 72 ಸಾವಿರದ 88 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಂಗನಾ ರಣಾವತ್ ರಾಜಕೀಯದಲ್ಲಿ ಮೊದಲ ಪ್ರಯತ್ನದಲ್ಲಿಯೇ ಗೆಲುವಿನ ಹೆಜ್ಜೆ ಇಟ್ಟಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರ ಮೊದಲು ಕಾಂಗ್ರೆಸ್ ಹಿಡಿತ ಸಾಧಿಸಿತ್ತು. 2014 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿ ಕಡೆಗೆ ಮುಖ ಮಾಡಿದ್ದರು. ಆದರೆ, ಮತ್ತೆ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು. ಈಗ ಕಂಗನಾ ಗೆದ್ದು ಮಂಡಿಯನ್ನು ಕಬ್ಜಾ ಮಾಡಿದ್ದಾರೆ.

2021ರಲ್ಲಿ ಬಿಜೆಪಿಯಿದ ಗೆದ್ದಿದ್ದ ಸ್ವರೂಪ್ ಶರ್ಮಾ ನಿಧನರಾದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿಕ್ರಮಾದಿತ್ಯ ಸಿಂಗ್ ಅವರ ತಾಯಿ ಪ್ರತಿಭಾ ಸಿಂಗ್ ಸ್ಪರ್ಧೆ ಮಾಡಿ ಗೆದ್ದಿದ್ದರು. ಈ ಬಾರಿ ಬಿಜೆಪಿ ತನ್ನ ಕ್ಷೇತ್ರವನ್ನು ಮರಳಿ ಪಡೆಯುವುದಕ್ಕೆ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಕಣಕ್ಕೆ ಇಳಿಸಿತ್ತು. ಆ ಪ್ರಯತ್ನಕ್ಕೆ ಫಲ ಸಿಕ್ಕಿದೆ.
ಬಾಲಿವುಡ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳ ಮೂಲಕ ಕಂಗನಾ ರಣಾವತ್ ಸದಾ ಸುದ್ದಿಯಲ್ಲಿರುತ್ತಿದ್ದರು. ಅಲ್ಲದೆ ಪರೋಕ್ಷವಾಗಿ ಕಂಗನಾ ರಣಾವತ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ಹೀಗಾಗಿ 2024ರ ಚುನಾವಣೆಯಲ್ಲಿ ಕಂಗನಾ ರಣಾವತ್ ನಿರೀಕ್ಷೆಯಂತೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಈಗ ಹಿಮಾಚಲ ಪ್ರದೇಶದ ಅತೀ ದೊಡ್ಡ ಕ್ಷೇತ್ರ ಮಂಡಿಯಿಂದ ಕಂಗನಾ ರಣಾವತ್ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.


Click it and Unblock the Notifications











