ಯಾರೇ ಕೂಗಾಡಲಿ, ಊರೇ ಹೋರಾಡಲಿ, ಐಶ್ವರ್ಯ ರೈ-ಅಭಿಷೇಕ್ ಬಚ್ಚನ್‌ ನೆಮ್ಮದಿಗೆ ಭಂಗ ಇಲ್ಲ..!

ಮದುವೆ ಮಕ್ಕಳಾಟಿಕೆ ಅಲ್ಲ. ಮದುವೆ ಎನ್ನುವುದು ಜೀವನದ ಅತೀ ಮಹತ್ವದ ಘಟ್ಟ. ಮದುವೆ ಎನ್ನುವುದು ಗಂಡು ಹೆಣ್ಣಿನ ಮಿಲನ ಅಷ್ಟೇ ಅಲ್ಲ. ಅದೊಂದು ಪವಿತ್ರ ಬಂಧನ. ಮದುವೆಯೆಂಬ ವ್ಯವಸ್ಥೆಯಿಂದ ಸಮಾಜದಲ್ಲಿ ಒಂದು ಶಿಸ್ತುಬದ್ಧ ಜೀವನವಿರುತ್ತದೆ. ನಮ್ಮದೇ ಆದ ಕೆಲವು ಕೌಟುಂಬಿಕ ಕರ್ತವ್ಯಗಳೆಲ್ಲವೂ ಸರಾಗವಾಗಿ ನಡೆಯಲು ಮದುವೆ ಎಂಬ ಸಾಂಸ್ಥಿಕ ವ್ಯವಸ್ಥೆ ಅತಿ ಅಗತ್ಯ.

ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಸೆಮಣೆ ಏರಿದಷ್ಟೇ ವೇಗವಾಗಿ ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ಅದರಲ್ಲಿಯೂ ಬಣ್ಣದ ಲೋಕದಲ್ಲಿ ಅಂತೂ ಪ್ರೀತಿ ಅನ್ನುವ ಪದಕ್ಕೆ ಅರ್ಥ ಇಲ್ಲ. ಮದುವೆಯೆಂಬ ಪವಿತ್ರ ಬಂಧನಕ್ಕೆ ಬೆಲೆಯೂ ಇಲ್ಲ. ಇದಕ್ಕೆ ಮತ್ತೊಂದು ಉದಾಹರಣೆ ಎನ್ನುವಂತೆ ಕಳೆದ ಕೆಲ ದಿನಗಳಿಂದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ಸಾಂಸಾರಿಕ ಜೀವನ ಚರ್ಚೆಯಲ್ಲಿದೆ. ಇಬ್ಬರು ದೂರವಾಗುವುದು ಖಚಿತ ಎನ್ನುವ ಮಾತು ಕೇಳಿ ಬರುತ್ತಿದೆ.

Fact Check The Truth Behind Aishwarya Rai Bachchan and Abhishek Bachchan s Dubai Viral Video

ಆದರೆ ಹರಿದಾಡುತ್ತಿರುವ ಈ ಸುದ್ದಿ ನಿಜಾನಾ ಗೊತ್ತಿಲ್ಲ. ಯಾಕೆಂದರೆ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಸಂಸಾರಕ್ಕೆ ಕೊಳ್ಳಿ ಬಿದ್ದಿದೆ ಎಂದು ಜಗತ್ತು ಮಾತನಾಡಿಕೊಳ್ಳುತ್ತಿದೆಯಾದರೂ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅನೋನ್ಯವಾಗಿಯೇ ಇದ್ದಾರೆ ಎನ್ನುವ ಗುಮಾನಿ ಅನೇಕರಲ್ಲಿದೆ. ಇದಕ್ಕೆ ಪೂರಕವಾಗಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ವಿಡಿಯೋ ಒಂದು ವೈರಲ್ ಆಗಿದೆ.

ವೈರಲ್ ಆದ ಈ ವಿಡಿಯೋದಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ತಮ್ಮ ಮಗಳು ಆರಾಧ್ಯ ಜೊತೆ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿನ ಬಸ್ ಹತ್ತಲು ಹೊರಟಿದ್ದಾರೆ. ಇನ್ನೂ ವಿಡಿಯೋ ನೋಡುತ್ತಿದ್ದರೆ ಮೇಲ್ನೋಟಕ್ಕೆ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಖುಷಿ ಖುಷಿಯಾಗಿರುವುದು ಕೂಡ ಸ್ಪಷ್ಟವಾಗಿ ಕಾಣುತ್ತೆ.

Fact Check The Truth Behind Aishwarya Rai Bachchan and Abhishek Bachchan s Dubai Viral Video

ಹಾಗಂಥ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ನಡುವೆ ಸಂಬಂಧ ಸರಿಯಾಗಿಯೇ ಇದೆ, ಇಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಯೆಲ್ಲ ಕಪೋಲಕಲ್ಪಿತ ಎಂದು ಅಂದುಕೊಳ್ಳುವಂತೆ ಇಲ್ಲ. ಯಾಕೆಂದರೆ.. ವೈರಲ್ ಆದ ಈ ವಿಡಿಯೋ ಇವತ್ತು ನಿನ್ನೆಯದ್ದಲ್ಲ. ಬದಲಿಗೆ ಆರು ತಿಂಗಳ ಹಿಂದೆಯದ್ದು.

ಹೌದು, ಅಸಲಿಗೆ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್, ತಮ್ಮ ಪುತ್ರಿ ಆರಾಧ್ಯ ಜೊತೆ ಅದ್ಯಾವತ್ತು ದುಬೈಗೆ ತೆರಳಿದ್ದರು ಅನ್ನುವುದು ಅವರಿಗೆ ಗೊತ್ತಾದರೂ, ಸದ್ಯಕ್ಕೆ ವೈರಲ್ ಆದ ಈ ವಿಡಿಯೋ ಈ ವರ್ಷದ ಫೆಬ್ರವರಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿತ್ತು. ಆಗಲೂ ಕೂಡಾ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ದೂರವಾಗುತ್ತಾರೆ ಎನ್ನುವ ಸುದ್ದಿ ಹಬ್ಬಿತ್ತು. ಆದರೆ ಈ ವಿಡಿಯೋ ಕಣ್ತುಂಬಿಕೊಂಡ ಅನೇಕರು ಅವತ್ತು ಕೂಡ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಮೇಲೆ ಯಾವ ಮಸಣಿ ಕಣ್ಣು ಬೀಳದಿರಲಿ ಎಂದು ಪ್ರಾರ್ಥನೆಯನ್ನು ಮಾಡಿದ್ದರು.

ಆದರೆ, ಅದೇನಾಯ್ತೋ ಗೊತ್ತಿಲ್ಲ. ಈ ವರ್ಷದ ಆರಂಭದಿಂದ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳುವುದು ಖಚಿತವೆನ್ನುವ ಮಾತು ಕೇಳಿ ಬರುತ್ತಿದೆ. ಇವರಿಬ್ಬರ ನಡೆ ಸಂಶಯವನ್ನೂ ಹೆಚ್ಚು ಮಾಡಿದೆ. ಇದರ ನಡುವೆ ಈಗ ಹಳೆಯ ವಿಡಿಯೋ ವೈರಲ್ ಆಗಿದೆ. ವೈರಲ್ ಆದ ಈ ವಿಡಿಯೋದ ಸತ್ಯಾಸತ್ಯತೆಯನ್ನು ತಿಳಿಯದ ಅನೇಕರು ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ನಡುವೆ ಎಲ್ಲವೂ ಸರಿಯಾಗಿದೆ ಎಂದು ಭಾವಿಸಿದ್ದಾರೆ. ಇವರಿಬ್ಬರ ಅಭಿಮಾನಿಗಳು ಈ ಸುದ್ದಿ ನಿಜವೆಂದು ನಂಬಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ನಿಜವಾಗಿಯೂ ಯಾವುದು ನಿಜಾ ಅನ್ನುವುದು ಐಶ್ವರ್ಯ ಮತ್ತು ಅಭಿಷೇಕ್ ಬಚ್ಚನ್ ಅವರಿಗೆ ಗೊತ್ತು.

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X